Big Shock : ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ ರದ್ದು

ಬೆಂಗಳೂರು : ರಾಜ್ಯದ ಜನತೆಗೆ ಸರಕಾರ ಬಿಗ್‌ ಶಾಕ್‌ ಕೊಟ್ಟಿದೆ. ರಾಜ್ಯನ ಗ್ರಾಮೀಣ ಭಾಗದ ಮಹಿಳೆಗೆ ಕೇಂದ್ರ ಸರ್ಕಾರದ ಉಜ್ವಲ ಭಾಗ್ಯ ಯೋಜನೆಯಡಿಯಂತೆಯೇ ರಾಜ್ಯದಲ್ಲಿಯೂ ಸಿಎಂ ಅನಿಲ ಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಈ ಯೋಜನೆ ಬಡ ಜನರಿಗೆ ಅನುಕೂಲವಾಗಿತ್ತು. ಆದ್ರೀಗ ರಾಜ್ಯ ಸರಕಾರ ಈ ಯೋಜನೆಯನ್ನು ಕೈ ಬಿಡುವುದಾಗಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ.

2020ರಲ್ಲಿ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಈ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಸುಮಾರು 98,079 ಫಲಾನುಭವಿಗಳಿಗೆ 3 ಗ್ಯಾಸ್ ಸಿಲಿಂಡರ್ ಉಚಿತವಾಗಿ ವಿತರಿಸಲಾಗುತ್ತಿದೆ. ಯೋಜನೆ ಜಾರಿಗೆ ಬಂದ ಒಂದೇ ಒಂದು ವರ್ಷದ ರದ್ದು ಮಾಡುವ ಮೂಲಕ ಫಲಾನುಭವಿಗಳಿಗೆ ಬಿಗ್‌ ಶಾಕ್‌ ಕೊಟ್ಟಿದೆ.

ರಾಜ್ಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ದಿ ಆಯುಕ್ತರ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಎಲ್ಲಾ ಗ್ರಾಹಕ ಚಟುವಟಿಕೆಗಳಿಗೆ ಸಂಬಂಧಿಸಿದ ಯೋಜನೆಗಳನ್ನು ವೀಲಿನಗೊಳಿಸಿ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯನ್ನು ಮುಕ್ತಾಯಗೊಳಿಸುವುದು. ಕಾನೂನು ಮಾಪನಶಾಸ್ತ್ರದ ಎಲ್ಲಾ ಸಣ್ಣ ಯೋಜನೆಗಳನ್ನು ವಿಲೀನ ಸೇರಿದಂತೆ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ : 1789 ಗ್ರಾಮ ಲೆಕ್ಕಿಗರ ಹುದ್ದೆಗೆ ನೇರ ನೇಮಕಾತಿಗೆ ಮುಂದಾದ ಸರಕಾರ

ಇದನ್ನೂ ಓದಿ : ಕನ್ನಡಿಗರಲ್ಲಿ ಕನ್ನಡದ ಅಭಿಮಾನ ಸದಾ ಇರಲಿ : ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ

(Karnataka Mukhyamantri Anila Bhagya Scheme Cancel : CM Basavaraj Bommai)

Comments are closed.