ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನಾಳೆ ಪ್ರಮಾಣವಚನ : ಯಾರಿಗೆಲ್ಲಾ ಸಿಗುತ್ತೆ ಸಚಿವ ಸ್ಥಾನ

ಬೆಂಗಳೂರು : Karnataka new Cabinate : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ನಾಳೆ ಮಧ್ಯಾಹ್ನ 12.30ಕ್ಕೆ ನಡೆಯಲಿರುವ ಪ್ರಮಾಣ ವಚನಕ್ಕೆ ಈಗಾಗಲೇ ಕಠೀರವ ಕ್ರೀಡಾಂಗಣ ಸಜ್ಜಾಗಿದೆ. ಸಿದ್ದರಾಮಯ್ಯ ಅವರ ಜೊತೆಗೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅವರು ಕೂಡ ಅಧಿಕಾರವನ್ನು ಸ್ವೀಕಾರ ಮಾಡಲಿದ್ದಾರೆ. ಆದರೆ ಸಿದ್ದರಾಮಯ್ಯ ಸಂಪುಟದಲ್ಲಿ ಯಾರಿಗೆಲ್ಲಾ ಸಚಿವ ಸ್ಥಾನ ದೊರೆಯಲಿದೆ ಅನ್ನೋದು ಕುತೂಹಲ ಮೂಡಿಸಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಹಾಗೂ ಡಿಕೆ ಶಿವಕುಮಾರ್‌ ಅವರು ಡಿಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ವೇಳೆಯಲ್ಲಿ ಸಚಿವರು ಕೂಡ ಪ್ರಮಾಣ ವಚನ ಸ್ವೀಕಾರ ಮಾಡುತ್ತಾರೋ ಇಲ್ಲವೋ ಅನ್ನೋದು ಇನ್ನೂ ಖಚಿತವಾಗಿಲ್ಲ. ಇನ್ನೊಂದೆಡೆಯಲ್ಲಿ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರು ಇಂದು ದೆಹಲಿಗೆ ತೆರಳಲಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ನಾಯಕರ ಜೊತೆಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

ಈಗಾಗಲೇ ಅಧಿಕಾರವನ್ನು ಇಬ್ಬರೂ ನಾಯಕರು ಹಂಚಿಕೊಂಡಿದ್ದು, ಸಂಪುಟ ರಚನೆಯಲ್ಲಿಯೂ ಕೂಡ ಸಮಾನ ಅವಕಾಶವನ್ನು ಕಲ್ಪಿಸುವ ಸಾಧ್ಯತೆಯಿದೆ. ಈಗಾಗಲೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರು ತಲಾ 14 ಸ್ಥಾನಗಳನ್ನು ಹಂಚಿಕೊಳ್ಳಲಿದ್ದಾರೆ. ಒಟ್ಟು 30 ಸ್ಥಾನಗಳನ್ನು ಭರ್ತಿ ಮಾಡಲು ಚಿಂತನೆ ನಡೆಸಲಾಗಿದೆ. ಅಷ್ಟಕ್ಕೂ ಸಿದ್ದರಾಮಯ್ಯ ಸಂಪುಟದಲ್ಲಿ ಯಾರೆಲ್ಲಾ ಸಚಿವ ಸ್ಥಾನ ಪಡೆಯಲಿದ್ದಾರೆ ಅನ್ನೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ.

Karnataka new Cabinate : ಸಂಭಾವ್ಯ ಸಚಿವರ ಪಟ್ಟಿ :

ಡಾ.ಜಿ.ಪರಮೇಶ್ವರ್‌, ಕೆ.ಜೆ.ಜಾರ್ಜ್‌, ಎಂ.ಬಿ.ಪಾಟೀಲ್‌, ದಿನೇಶ ಗುಂಡೂರಾವ್‌, ಹ್ಯಾರಿಸ್‌, ರಾಮಲಿಂಗಾರೆಡ್ಡಿ, ಶ್ಯಾಮನೂರು ಶಿವಶಂಕರಪ್ಪ, ಎಸ್.ಎಸ್.ಮಲ್ಲಿಕಾರ್ಜುನ, ಮಧು ಬಂಗಾರಪ್ಪ, ಯು.ಟಿ.ಖಾದರ್‌, ಬಿ.ಕೆ.ಹರಿಪ್ರಸಾದ್‌, ಈಶ್ವರ ಖಂಡ್ರೆ, ಎಚ್.ಕೆ.ಪಾಟೀಲ್‌, ಪ್ರಿಯಾಂಕ ಖರ್ಗೆ, ಎಚ್.ಕೆ.ಮುನಿಯಪ್ಪ, ಲಕ್ಷ್ಮಣ ಸವದಿ, ಆರ್.ವಿ.ದೇಶಪಾಂಡೆ, ಅಜಯ್‌ ಸಿಂಗ್‌, ಆರ್.ಬಿ. ತಿಮ್ಮಾಪುರ್‌, ಭೀಮಣ್ಣ ನಾಯಕ, ನಾಗೇಂದ್ರ, ರುದ್ರಪ್ಪ ಲಮಾಣಿ, ಲಕ್ಷ್ಮೀ ಹೆಬ್ಬಾಳ್ಕರ್‌, ಸತೀಶ್‌ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ದೊರೆಯಲಿದೆ. ಇನ್ನೊಂದೆಡೆಯಲ್ಲಿ ಬಿಜೆಪಿ ಸೇರ್ಪಡೆಯಾಗಿರುವ ಜಗದೀಶ್‌ ಶೆಟ್ಟರ್‌ ಕೂಡ ಸಂಪುಟ ಸೇರುವ ಸಾಧ್ಯತೆಯಿದೆ.

ಇದನ್ನೂ ಓದಿ : BIG Breaking : ಕರ್ನಾಟಕಕ್ಕೆ ಸಿದ್ದರಾಮಯ್ಯ ಸಿಎಂ, ಡಿಕೆಶಿವಕುಮಾರ್‌ ಮಾತ್ರವೇ ಡಿಸಿಎಂ : ಅಧಿಕೃತ ಘೋಷಣೆ

ಇದನ್ನೂ ಓದಿ : ಲೋಕಸಭಾ ಚುನಾವಣೆ : ಚಿಕ್ಕಮಗಳೂರು – ಉಡುಪಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕೆ.ಜಯಪ್ರಕಾಶ್‌ ಹೆಗ್ಡೆ

Comments are closed.