BIG Breaking : ಕರ್ನಾಟಕಕ್ಕೆ ಸಿದ್ದರಾಮಯ್ಯ ಸಿಎಂ, ಡಿಕೆಶಿವಕುಮಾರ್‌ ಮಾತ್ರವೇ ಡಿಸಿಎಂ : ಅಧಿಕೃತ ಘೋಷಣೆ

ಬೆಂಗಳೂರು : (Karnataka New CM) ಕರ್ನಾಟಕದ ರಾಜಕೀಯ ಹೈಡ್ರಾಮಾಕ್ಕೆ ಕೊನೆಗೂ ಬ್ರೇಕ್‌ ಬಿದ್ದಿದೆ. ಕರ್ನಾಟಕದಲ್ಲಿ ಎರಡನೇ ಬಾರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು, ಡಿಕೆ ಶಿವಕುಮಾರ್‌ ಅವರನ್ನು ಡಿಸಿಎಂ ಆಗಿ ನೇಮಕ ಮಾಡಲಾಗಿದೆ. ಮೇ 20 ರಂದು ಮಧ್ಯಾಹ್ನ 12.30 ಕ್ಕೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಘೋಷಣೆ ಮಾಡಿದ್ದಾರೆ.

ಡಿಕೆ ಶಿವಕುಮಾರ್‌ ಅವರು ಉಪಮುಖ್ಯಮಂತ್ರಿಯಾಗುವುದು ಮಾತ್ರವಲ್ಲ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ. ಮೇ ೨೦ರಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿ ಹಾಗೂ ಡಿಕೆ ಶಿವಕುಮಾರ್‌ ಅವರು ಉಪಮುಖ್ಯಮಂತ್ರಿ ಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ನಂತರದಲ್ಲಿ ಸಂಪುಟ ರಚನೆಯಾಗಲಿದೆ ಎಂದು ತಿಳಿಸಿದ್ದಾರೆ.

ಆದರೆ ಸಚಿವ ಸಂಪುಟದ ರಚನೆ, ಅಧಿಕಾರ ಹಂಚಿಕೆ. ಯಾವ ಬಣಕ್ಕೆ ಎಷ್ಟು ಸೀಟ್‌ ಅನ್ನುವ ಕುರಿತು ಯಾವುದೇ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಚುನಾವಣೆಯ ನಂತರ ಮುಖ್ಯಮಂತ್ರಿ ಹುದ್ದೆಗಾಗಿ ಡಿಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ನಡುವೆ ಹಗ್ಗ ಜಗ್ಗಾಟ ನಡೆದಿತ್ತು. ಇದರ ಬೆನ್ನಲ್ಲೇ ಹಲವು ಸುತ್ತಿನ ಮಾತುಕತೆಯ ಬಳಿಯ ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಲು ಡಿಕೆ ಶಿವಕುಮಾರ್‌ ಸಮ್ಮತಿ ಸೂಚಿಸಿದ್ದರು. ಹಲವು ಷರತ್ತುಗಳ ನಡುವೆ ಡಿಕೆ ಶಿವಕುಮಾರ್‌ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಜೊತೆಗೆ ಎರಡು ಪ್ರಭಾವಿ ಖಾತೆಗಳನ್ನೂ ತನ್ನ ಹೆಗಲಿಗೆ ಹಾಕಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಇಂದು ಸಂಜೆ 7 ಗಂಟೆಗೆ ಬೆಂಗಳೂರಿನ ಕ್ವೀನ್ಸ್‌ ರಸ್ತೆಯ ಇಂದಿರಾಗಾಂಧಿ ಭವನದಲ್ಲಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದ್ದು, ಈ ಸಭೆಯಲ್ಲಿಯೇ ಕರ್ನಾಟಕದ ಮುಖ್ಯಮಂತ್ರಿಯ ಅಧಿಕೃತ ಘೋಷಣೆಯಾಗಲಿದೆ. ಸಭೆಗೆ ಶಾಸಕರು, ವಿಧಾನ ಪರಿಷತ್‌ ಸದಸ್ಯರು ಹಾಗೂ ಕಾಂಗ್ರೆಸ್‌ ಸಂಸದರನ್ನು ಸಭೆಗೆ ಆಹ್ವಾನಿಸಲಾಗಿದೆ. ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್‌ ಅವರು ರಾಜ್ಯಪಾಲರನ್ನು ಭೇಟಿಯಾಗಿ ಕೆಪಿಸಿಸಿ ಅಧ್ಯಕ್ಷರು ನೀಡಿರುವ ಪತ್ರವನ್ನು ನೀಡಿ ಬಂದಿದ್ದಾರೆ. ಶನಿವಾರ ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಕಾರ್ಯ ನಡೆಯುವ ಹಿನ್ನೆಲೆಯಲ್ಲಿ ಸಿದ್ದತೆಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ.‌

Karnataka New CM : 2 ವರ್ಷ ಸಿದ್ದು 3 ವರ್ಷ ಡಿಕೆಶಿ ಸಿಎಂ

ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಲಾಗಿದೆ. ಆರಂಭದ ಎರಡು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರಲಿದ್ದಾರೆ. ನಂತರದ ಮೂರು ವರ್ಷಗಳ ಕಾಲ ಡಿಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಲಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರವನ್ನು ಎರಡು ವರ್ಷಗಳ ನಂತರ ಬಿಟ್ಟುಕೊಡುವುದಿಲ್ಲ ಅನ್ನೋ ವಿಚಾರವನ್ನು ಹೈಕಮಾಂಡ್‌ ಮುಂದೆ ಡಿಕೆಶಿ ಮಂಡನೆ ಮಾಡಿದಾಗ, ಈ ವಿಚಾರವನ್ನು ತಮಗೆ ಬಿಟ್ಟುಕೊಡಿ ಅನ್ನೋ ಹೇಳಿಕೆಯನ್ನು ನೀಡಿದ್ದಾರೆ. ಲೋಕಸಭಾ ಚುನಾವಣೆಯ ವರೆಗೆ ಮಾತ್ರವೇ ಸಿದ್ದು ಸಿಎಂ ಆಗಿ ಮುಂದುವರಿಯುವ ಸಾಧ್ಯತೆಯಿದೆ.

ಇದನ್ನೂ ಓದಿ : ಮಹಿಳೆಯನ್ನು ಕಚ್ಚಿದ ಸಾಕು ನಾಯಿ : ಮಾವನಿಂದ ದೂರು ದಾಖಲು

ಇದನ್ನೂ ಓದಿ : ಸಿದ್ದರಾಮಯ್ಯ ಸಿಎಂ, ಡಿಕೆ ಡಿಸಿಎಂ : ಹೈಕಮಾಂಡ್ ಸಂಧಾನ ಸಕ್ಸಸ್‌

Comments are closed.