ಗಣೇಶೋತ್ಸವ ನಿಯಮ ಸಡಿಲಿಕೆ : ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು : ಸಿಲಿಕಾನ್‌ ಸಿಟಿಯಲ್ಲಿ ಗಣೇಶೋತ್ಸವ ಆಚರಣೆಯ ಕುರಿತಂತೆ ರಾಜ್ಯ ಸರಕಾರ ಹೊರಡಿಸಿರುವ ಆದೇಶ ಇದೀಗ ಹಿಂದೂಪರ ಸಂಘಟನೆಗಳು ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಮಹತ್ವದ ಸೂಚನೆಯನ್ನು ನೀಡಿದ್ದು, ಕಂದಾಯ ಸಚಿವ ಆರ್.‌ ಅಶೋಕ್‌ ಅವರಿಗೆ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸುವಂತೆ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು, ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸಂಬಂಧಿಸಿದ ನಿಯಮಗಳಲ್ಲಿ ಸಡಿಕೆ ಮಾಡುವಂತೆ ಸಚಿವ ಆರ್.‌ ಅಶೋಕ್‌ ಅವರಿಗೆ ಸೂಚನೆಯನ್ನು ನೀಡಿದ್ದು, ಸಭೆಯನ್ನು ನಡೆಸಿ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದಿದ್ದಾರೆ.

ರಾಜ್ಯದಲ್ಲಿ ಈ ಬಾರಿ ಗಣೇಶೋತ್ಸವ ಆಚರಣೆಗೆ ಕೇವಲ ಮೂರು ದಿನಗಳ ಕಾಲ ಮಾತ್ರವೇ ಅವಕಾಶವನ್ನು ನೀಡಲಾಗಿದೆ. ಗಣೇಶ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆಗೆ ಸೇರಿದಂತೆ ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಲು ಸರಕಾರ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ರಾಜ್ಯ ಸರಕಾರದ ಆದೇಶದ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಸರಕಾರದ ಕ್ರಮವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್‌, ಭಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಮತ್ತು ಗಣೇಶೋತ್ಸವ ಆಚರಣಾ ಸಮಿತಿಗಳ ಹೋರಾಟದ ಬೆನ್ನಲ್ಲೇ ಸಿಎಂ ನಿಯಮ ಸಡಿಲಿಕೆಯ ಸೂಚನೆಯನ್ನು ನೀಡಿದ್ದಾರೆ. ಹೀಗಾಗಿ ಬಿಬಿಎಂಪಿ ಯಾವೆಲ್ಲಾ ನಿಯಮಗಳಲ್ಲಿ ಸಡಿಲಿಕೆ ಮಾಡುತ್ತೆ ಅನ್ನೋದನ್ನು ಕಾದು ನೋಡಬೇಕಾಗಿದೆ.

ಇದನ್ನೂ ಓದಿ : ಪ್ರಪಂಚವನ್ನು ಕಾಡಲಿರುವ ಆಪತ್ತುಗಳು : ಕೋಡಿಮಠದ ಶ್ರೀಗಳಿಂದ ಸ್ಪೋಟಕ ಭವಿಷ್ಯ

ಇದನ್ನೂ ಓದಿ : ಚರ್ಚ್‌ಗೆ ಭೇಟಿ ನೀಡಿದ ವಿಘ್ನವಿನಾಶಕ ಗಣಪತಿ ! ಸ್ಪೇನ್ ನಲ್ಲಿ ನಡೆಯಿತು ಅಪರೂಪದ ಘಟನೆ

(Ganesh festival rule relaxation: CM Bommai notice)

Comments are closed.