Boat Fire : ಅರಬ್ಬಿ ಸಮುದ್ರದಲ್ಲಿ ಬೆಂಕಿ ಅವಘಡ : ಸುಟ್ಟು ಕರಕಲಾಯ್ತು ಬೋಟ್‌ : 7 ಮೀನುಗಾರರ ರಕ್ಷಣೆ

ಕಾರವಾರ : ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಬೋಟ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಕಾರವಾಡದಲ್ಲಿ ನಡೆದಿದೆ. ಘಟನೆ ನಡೆಯುತ್ತಿದ್ದಂತೆಯೇ ರಕ್ಷಣೆಗೆ ಧಾವಿಸಿದ ಭಾರತೀಯ ಕರಾವಳಿ ಕಾವಲು ಪಡೆ ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿದೆ.

ಉಡುಪಿಯ ಮಲ್ಪೆಯ ವರದಾ ವಿನಾಯಕ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಕಾರವಾರದಿಂದ ಲೈಟ್‌ ಹೌಡ್‌ ನಡುಗುಡ್ಡೆಯಿಂದ ಹತ್ತು ನಾಟಿಕಲ್‌ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆಯಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸುದ್ದಿ ತಿಳಿದ ಕೋಸ್ಟ್‌ ಗಾರ್ಡ್‌ ಸಿಬ್ಬಂದಿ, ರಕ್ಷಣೆಗೆ ಧಾವಿಸಿದ್ದಾರೆ.

ಕೂಡಲೇ ಸ್ಥಳದಲ್ಲಿದ್ದ ಇತರ ಬೋಟುಗಳ ಸಹಾಯದೊಂದಿಗೆ ಬೋಟಿನಲ್ಲಿದ್ದ ಏಳು ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಬೋಟ್‌ನ ಬೆಂಕಿಯನ್ನು ಸಂಪೂರ್ಣ ನಂದಿಸಲಾಗಿದೆ. ಕಾರವಾರದ ಬೈತಖೋಲ್‌ ಬಂದರಿಗೆ ಬೋಟ್‌ನ್ನು ತರಲಾಗಿದೆ. ಮೇಲ್ನೋಟಕ್ಕೆ ಇಂಜಿನ್‌ನಲ್ಲಿನ ತಾಂತ್ರಿಕ ದೋಷವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಈ ಕುರಿತು ಕೋಸ್ಟ್‌ ಗಾರ್ಡ್‌ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ : Boat Tragedy : ಮೀನುಗಾರಿಕಾ ಬೋಟ್‌ ಬಂಡೆಗೆ ಢಿಕ್ಕಿ : 6 ಮಂದಿ ಮೀನುಗಾರರ ರಕ್ಷಣೆ

ಇದನ್ನೂ ಓದಿ : Alpha Covid Variant : ನಾಯಿ ಹಾಗೂ ಬೆಕ್ಕಿನಲ್ಲಿ ಪತ್ತೆಯಾಯ್ತು ಕೋವಿಡ್‌ ಆಲ್ಫಾ

( Boat fire Arabian sea near Karwar, 7 fisherman Rescued )

Comments are closed.