Fuel Price : ದೀಪಾವಳಿಗೆ ಬೊಮ್ಮಾಯಿ ಗಿಫ್ಟ್‌ : ಪೆಟ್ರೋಲ್‌, ಡಿಸೇಲ್‌ ಬೆಲೆಯಲ್ಲಿ 7 ರೂ. ಇಳಿಸಿದ ರಾಜ್ಯ : ಕರ್ನಾಟಕದಲ್ಲಿ ಎಷ್ಟಾಗುತ್ತೆ ಗೊತ್ತಾ ತೈಲ ಬೆಲೆ

ಬೆಂಗಳೂರು : ದೀಪಾವಳಿ ಹೊತ್ತಲೇ ಕೇಂದ್ರ ಸರಕಾರ ಪೆಟ್ರೋಲ್‌ ಹಾಗೂ ಡಿಸೇಲ್‌ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿದೆ. ಇದರಿಂದಾಗಿ ಡಿಸೇಲ್‌ ಬೆಲೆಯಲ್ಲಿ 10 ರೂಪಾಯಿ ಹಾಗೂ ಪೆಟ್ರೋಲ್‌ ಬೆಲೆಯಲ್ಲಿ 5 ರೂಪಾಯಿ ಇಳಿಕೆಯಾಗಿತ್ತು. ಇದರ ಬೆನ್ನಲ್ಲೇ ರಾಜ್ಯ ಸರಕಾರ ಕೂಡ ತೈಲ ಬೆಲೆ ಇಳಿಕೆ ಮಾಡುವ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆಯಷ್ಟೇ ಇಂಧನ ಬೆಲೆಯ ಹೊರೆಯನ್ನು ಇಳಿಸುವುದಾಗಿ ಘೋಷಣೆಯನ್ನು ಮಾಡಿದ್ದರು. ಇದರಿಂದಾಗಿ ವಾಹನ ಸವಾರರು ಸಂತಸ ಗೊಂಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರಕಾರ ಕೂಡ ರಾಜ್ಯದ ಜನತೆ ಭರ್ಜರಿ ಗಿಫ್ಟ್‌ ಕೊಟ್ಟಿದೆ. ರಾಜ್ಯದಲ್ಲಿ ಅಬಕಾರಿ ಸುಂಕ ಇಳಿಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪೆಟ್ರೋಲ್‌ ಹಾಗೂ ಡಿಸೇಲ್‌ ದರದಲ್ಲಿ ಪ್ರತೀ ಲೀಟರ್‌ಗೆ 7 ರೂಪಾಯಿ ಇಳಿಕೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಹೇಳಿದ್ದಾರೆ.

ರಾಜ್ಯ ಸರಕಾರದ ನಿರ್ಧಾರದಿಂದಾಗಿ ರಾಜ್ಯ ಸರಕಾರದ ಬೊಕ್ಕಸಕ್ಕೆ ಸುಮಾರು 2100 ಕೋಟಿ ರೂಪಾಯಿ ಹೊರೆಯಾಗಲಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅಬಕಾರಿ ಸುಂಕ ಇಳಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪೆಟ್ರೋಲ್‌ ಬೆಲೆಯಲ್ಲಿ 12ರೂಪಾಯಿ ಹಾಗೂ ಡಿಸೇಲ್‌ ಬೆಲೆಯಲ್ಲಿ 17 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಜನರಿಗೆ ಪೆಟ್ರೋಲ್‌ 95.90 ರೂಪಾಯಿ ಹಾಗೂ ಡಿಸೇಲ್‌ 81.50 ರೂಪಾಯಿ ಅಂದಾಜು ದರದಲ್ಲಿ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

( CM Basavaraj Bommai Gift for Diwali: Petrol and Diesel Price Rs.7 Reduced Karnataka )

Comments are closed.