ತುಮಕೂರು : ವಿದ್ಯಾರ್ಥಿಗಳಿಗೆ ನಕಲಿ ವಿಮಾ ಬಾಂಡ್ ಹಂಚಿಕೆ ಆರೋಪ ಎದುರಿಸುತ್ತಿರುವ ತುಮಕೂರು ಗ್ರಾಮಾಂತರ ಶಾಸಕ ಗೌರಿ ಶಂಕರ್‌ಗೆ ಸಂಕಷ್ಟ ಎದುರಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಖುದ್ದು ವಿಚಾರಣೆಗೆ ಹಾಜರಾಗುವಂತೆ ಹೇಳಿದೆ.
2018 ವಿಧಾನ ಸಭಾ ಚುನಾವಣೆ ವೇಳೆಯಲ್ಲಿ ಗೌರಿಶಂಕರ್ ಅವರ ತಂದೆ ಚೆನ್ನಿಗಪ್ಪ ಅಧ್ಯಕ್ಷರಾಗಿರುವ ಮಾರುತಿ ಸೇವಾ ಟ್ರಸ್ಟ್‌ನಿಂದ ಗ್ರೂಪ್ ಇನ್ಶುರೆನ್ಸ್‌ನ್ನು ನ್ಯೂ ಇಂಡಿಯನ್ ಅಶ್ಯೂರೆನ್ಸ್ ಕಂಪೆನಿಯ ಮೂಲಕ ಅಸಿಸ್ಟ್ ಬಾಂಡ್ ಹಂಚಿಕೆ ಮಾಡಲಾಗಿತ್ತು. ಸುಮಾರು 16386 ವಿದ್ಯಾರ್ಥಿಗಳಿಗೆ ನಕಲಿ ಹೆಲ್ತ್ ಇನ್ಶ್ಯೂರೆನ್ಸ್ ಬಾಂಡ್ ಹಂಚಿಕೆ ಮಾಡಿರುವ ಆರೋಪ ಕೇಳಿಬಂದಿತ್ತು. ವಿಮಾ ಕಾರ್ಡ್ ಜೊತೆಗೆ ಜೆಡಿಎಸ್ ನಾಯಕರ ಪೋಟೋ ಇರುವ ದಾಖಲೆಗಳ ಹಂಚಿಕೆ ಮಾಡಿರುವುದು ಸಿಐಡಿ ಅಧಿಕಾರಿಗಳ ತನಿಖೆಯಲ್ಲಿ ಬಯಲಾಗಿತ್ತು. ಅಲ್ಲದೇ ಗೌರಿ ಶಂಕರ್ ಅಕ್ರಮ ಎಸಗಿರುವುದನ್ನು ಬಯಲು ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಗೌರಿಶಂಕರ್, ಚೆನ್ನಿಗಪ್ಪ, ಕಿಶೋರ್ ವರದಾಚಾರ್, ಗೌರಮ್ಮ ಹಾಗೂ ಅನಂತು ವಿರುದ್ದ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದರು.
ನಕಲಿ ಬಾಂಡ್ ಹಂಚಿಕೆ ಮಾಡಿರುವ ಕುರಿತು ದೂರು ದಾಖಲಾದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ತನಿಖೆಯನ್ನು ನಡೆಸಿದ್ದ ರಮೇಶ್ ಬೆಟ್ಟಯ್ಯ ಸುಮಾರು 4 ಸಾವಿರು ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದರು. ಪ್ರಕರಣ ರದ್ದು ಮಾಡುವಂತೆ ಕೋರಿ ಶಾಸಕ ಗೌರಿಶಂಕರ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಪ್ರಕರಣ ರದ್ದತಿಗೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಸುಪ್ರೀಂ ಕೊರ್ಟ್ ಆದೇಶದ ಹಿನ್ನೆಲೆಯಲ್ಲಿ ತನಿಖೆಯನ್ನು ನಡೆಸಿ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದರು.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ಟೋಬರ್ 22 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಗೌರಿಶಂಕರ್‌ಗೆ ಸಮನ್ಸ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲೀಗ ಪ್ರಕರಣ ಗಂಭೀರ ಸ್ವರೂಪವನ್ನು ಪಡೆದುಕೊಳ್ಳುವ ಸಾಧ್ಯತೆ ದಟ್ಟವಾಗುತ್ತಿದೆ. ಕೇವಲ ಶಾಸಕ ಗೌರಿಶಂಕರ್‌ಗೆ ಮಾತ್ರವಲ್ಲ ತಂದೆ ಚೆನ್ನಿಗಪ್ಪ ಅವರಿಗೂ ಪ್ರಕರಣ ಮುಳುವಾಗುವ ಸಾಧ್ಯತೆಯಿದೆ.
ಇದನ್ನೂ ಓದಿ : ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆಯ ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ
ಇದನ್ನೂ ಓದಿ : ಪ್ರಧಾನಿ ನರೇಂದ್ರ ಮೋದಿ ಏಕವಚನದಲ್ಲಿ ನಿಂದಿಸಿದ ಸಿದ್ದರಾಮಯ್ಯ : ಎಚ್ಚರಿಕೆ ಕೊಟ್ಟ ಬಿಜೆಪಿ
( Fake insurance bond allocation case for students, Court issues summons to Tumkur village MLA Gauri Shankar )