Online Gambling Ban : ಕರ್ನಾಟಕದಲ್ಲಿ ಆನ್‌ಲೈನ್‌ ಗ್ಯಾಂಬ್ಲಿಂಗ್‌ ಗೇಮ್‌ ನಿಷೇಧ

ಬೆಂಗಳೂರು : ರಾಜ್ಯದಲ್ಲಿ ಆನ್‌ಲೈನ್‌ ಗೇಮ್‌ ನಿಷೇಧ ಮಾಡುವ ಕುರಿತು ರಾಜ್ಯ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಮುಂದಿನ ಅಧಿನವೇಶನದ ಅವಧಿಯಲ್ಲಿ ತಿದ್ದುಪಡಿ ಕಾಯ್ದೆ ಮಸೂದೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಆನ್‌ಲೈನ್‌ ಗೇಮ್‌ಗಳನ್ನು ನಿಷೇಧಿಸುವ ಕುರಿತು ಸಾಕಷ್ಟು ಒತ್ತಡ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಲಾಟರಿ ಹೊರತು ಪಡಿಸಿ ಮೊಬೈಲ್‌, ಕಂಪ್ಯೂಟರ್‌ ಸೇರಿ ಎಲೆಕ್ಟ್ರಾನಿಕ್‌ ಡಿವೈಸ್‌ ಮೂಲಕ ಹಣದ ವ್ಯವಹಾರ ನಡೆಸುವ ಆನ್‌ಲೈನ್‌ ಗ್ಯಾಂಬ್ಲಿಗ್‌ ಗೇಮ್‌ಗಳಿಗೆ ಸರಕಾರ ನಿಷೇಧ ಹೇರಲಾಗಿದೆ.

ಆನ್‌ಲೈನ್‌ ಗ್ಯಾಂಬ್ಲಿಂಗ್‌ಗೆ ಸಂಬಂಧಿಸಿದಂತೆ ಪೊಲೀಸ್‌ ಕಾಯ್ದೆಗೆ ತಿದ್ದುಪಡಿ ತರಲಾಗುತ್ತದೆ. ಅಷ್ಟೇ ಅಲ್ಲದೇ ಪಂಚಾಯತ್‌ ರಾಜ್‌ ಡಿಲಿಮಿಟೇಷನ್‌ ಆಕ್ಟ್‌ ತಿದ್ದುಪಡಿಗೆ ಸಹ ಒಪ್ಪಿಗೆಯನ್ನು ನೀಡಿದೆ ಎಂದು ಮಾಧುಸ್ವಾಮಿ ತಿಳಿಸಿದ್ದಾರೆ.

ಇದನ್ನೂ ಓದಿ : 8 ರೂ. ಬೆಲೆಯ ಬಟ್ಟೆ ಬ್ಯಾಗ್ 52 ರೂ.ಗೆ ಖರೀದಿ : ರೋಹಿಣಿ ಸಿಂಧೂರಿ ವಿರುದ್ದ ಸಾ.ರಾ.ಮಹೇಶ್‌ 6 ಕೋಟಿ ಕಿಕ್‌ಬ್ಯಾಕ್‌ ಆರೋಪ

ಇದನ್ನೂ ಓದಿ : ಪ್ರಧಾನಿ ನರೇಂದ್ರ ಮೋದಿ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ

( Karnataka Government to ban online gambling games decide cabinate meeting )

Comments are closed.