Karnataka Rain Alert : ಕರಾವಳಿ, ಮಲೆನಾಡಲ್ಲಿ ಎರಡು ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಆರ್ಭಟಿಸುತ್ತಿರುವ ಮಳೆ ಇನ್ನೂ ಎರಡು ದಿನಗಳ ಕಾಲ ಸುರಿಯಲಿದೆ. ಅದ್ರಲ್ಲೂ ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ.

ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಮಾತ್ರವಲ್ಲದೇ ಉತ್ತರ ಕರ್ನಾಟಕ ಭಾಗದ ಬೀದರ್‌, ಕಲಬುರಗಿ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಯಾದಗಿರಿ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಹಲವು ವರ್ಷಗಳಿಗೆ ಹೋಲಿಕೆ ಮಾಡಿದ್ರೆ ಈ ವರ್ಷ ಅತೀ ಹೆಚ್ಚು ಪ್ರಮಾಣದಲ್ಲಿ ಮಳೆ ಸುರಿದಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೃಷಿ ಚಟುವಟಿಕೆಗಳಿಗೆ ತೊಡಕಾಗಿ ಪರಿಣಮಿಸಿದೆ.

ಇದನ್ನೂ ಓದಿ : ಒಂದೇ ಕುಟುಂಬಕ್ಕೆ ಸೇರಿದ 29 ಜಾನುವಾರು ನಿಗೂಢ ಸಾವು : ಸಾಂತ್ವಾನ ಹೇಳಿದ ಎಚ್.ಡಿ.ಕುಮಾರಸ್ವಾಮಿ

ಇದನ್ನೂ ಓದಿ : ಹಿಂದೂ ದೇವಾಲಯಗಳ ತೆರವು ವಿವಾದ : ಮೈಸೂರು ಜಿಲ್ಲಾಡಳಿತಕ್ಕೆ ಪ್ರಶ್ನೆಗಳ ಸುರಿಮಳೆಗೈದ ಸಂಸದ ಪ್ರತಾಪ್ ಸಿಂಹ

(Karnataka Rain Alert : Two days heavy rain in coastal, Malanad )

Comments are closed.