Karnataka Weather Report : ಕರ್ನಾಟಕದಲ್ಲಿ ಅ.27ರ ವರೆಗೂ ಭಾರಿ ಮಳೆ : ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದಲೂ ಭಾರಿ ಮಳೆ ಸುರಿಯುತ್ತಿದೆ. ಕರಾವಳಿ, ಬೆಂಗಳೂರು, ಉತ್ತರ ಕರ್ನಾಟಕ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಭಾರಿ ಮಳೆ ಸುರಿದಿದೆ. ಮಳೆಯ ಆರ್ಭಟ ಇನ್ನೂ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

Heavy rains in Hyderabad, two missing

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಹದಿನೈದು ದಿನಗಳಿಂದಲೂ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಅದ್ರಲ್ಲೂ ಗುಡುಗು, ಸಿಡಿಲು ಸಹಿತ ಮಳೆಗೆ ಜನರು ಕಂಗಾಲಾಗಿದ್ದಾರೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ.

Yellow Alert announces five days of heavy rains in Bangalore and Coastal Districts

ಇನ್ನು ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಯಗಳಲ್ಲಿ ಇಂದು ಹಾಗೂ ನಾಳೆ ಭಾರಿ ಮಳೆ ಸುರಿಯಲಿದೆ. ಅಲ್ಲದೇ ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಯಲ್ಲಿ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ : ಕೇಳಿದ್ದು ಗ್ರೈಪ್‌ ವಾಟರ್‌, ಕೊಟ್ಟಿದ್ದು ಪಾಯಿಸನ್ ! ಮೆಡಿಕಲ್‌ ಮಾಲೀಕರ ಮಹಾ ಎಡವಟ್ಟು

ಇದನ್ನೂ ಓದಿ : GOOD NEWS ಕೊಟ್ಟ ರಾಜ್ಯ ಸರ್ಕಾರ : 30 ಲಕ್ಷ ರೈತರಿಗೆ ಸಿಗಲಿದೆ 20,810 ಕೋಟಿ ಕೃಷಿ ಸಾಲ

heavy rain
ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ

ಕೇರಳ, ತಮಿಳುನಾಡು ರಾಜ್ಯಗಳಲ್ಲಿಯೂ ಮಳೆ ಆರ್ಭಟಿಸುವ ಸಾಧ್ಯತೆಯಿದೆ. ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಮಳೆಯಾಗುವ ಕುರಿತು ಮಾಹಿತಿಯನ್ನು ರವಾನಿಸಿದೆ. ಇಷ್ಟು ವರ್ಷಗಳಿಗೆ ಹೋಲಿಕೆ ಮಾಡಿದ್ರೆ ಈ ಬಾರಿ ವಾಡಿಕೆಗಿಂತಲೂ ಅಧಿಕ ಮಳೆ ಸುರಿದಿದೆ.

Heavy rain in Karnataka till 27th: Yellow alert announced

Comments are closed.