Umesh Reddy : ಉಮೇಶ್‌ ರೆಡ್ಡಿ ಗಲ್ಲು ಖಾಯಂ : ಹೈಕೋರ್ಟ್‌ ಮಹತ್ವದ ತೀರ್ಪು

ಬೆಂಗಳೂರು : ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಕಾಮುಕ ಉಮೇಶ್‌ ರೆಡ್ಡಿಗೆ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿ ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. ಹೈಕೋರ್ಟ್‌ ನ್ಯಾಯಮೂರ್ತಿ ಪ್ರದೀಪ್‌ ಸಿಂಗ್‌ ಯೆರೂರ್‌ ನೇತೃತ್ವದ ನ್ಯಾಯಪೀಠ ಈ ತೀರ್ಪು ಹೊರಡಿಸಿದೆ.

ಬೆಂಗಳೂರಿನಲ್ಲಿ 1998ರ ಫೆಬ್ರವರಿ 28 ರಂದು ಮಹಿಳೆಯೋರ್ವರನ್ನು ಅತ್ಯಾಚಾರಗೈದು ಕೊಲೆ ನಾಪತ್ತೆಯಾಗಿದ್ದ. ಆರು ಬಾರಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಉಮೇಶ್‌ ರೆಡ್ಡಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದರು. ಚಿತ್ರದುರ್ಗ ಮೂಲದ ಈ ಸೈಕೋ ಕಿಲ್ಲರ್‌ ವಿರುದ್ದ ಕರ್ನಾಟಕ ಮಾತ್ರವಲ್ಲದೇ ಆಂಧ್ರಪ್ರದೇಶ, ಮುಂಬೈನಲ್ಲಿಯೂ ಎಂಟಕ್ಕೂ ಅಧಿಕ ಪ್ರಕರಣ ದಾಖಲಾಗಿತ್ತು.

ಬೆಂಗಳೂರು ಮಹಿಳೆಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸೆಷನ್ಸ್‌ ಕೋರ್ಟ್‌ ಗಲ್ಲು ಶಿಕ್ಷೆ ವಿಧಿಸಿ ಆದೇಶಿಸಿತ್ತು. ಸೆಷನ್ಸ್‌ ಕೋರ್ಟ್‌ ನೀಡಿರುವ ತೀರ್ಪನ್ನು ಸವೋಚ್ಚ ನ್ಯಾಯಾಲಯ ಕೂಡ ಎತ್ತಿಹಿಡಿದಿತ್ತು.

ಈ ಹಿನ್ನೆಲೆಯಲ್ಲಿ ಉಮೇಶ್‌ ರೆಡ್ಡಿ ರಾಷ್ಟ್ರಪತಿಗಳಿಗೆ ಕ್ಷಮಾಧಾನಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ರಾಷ್ಟ್ರಪತಿಗಳು ೨೦೧೩ರಲ್ಲಿಯೇ ಕ್ಷಮಾದಾನದ ಅರ್ಜಿಯನ್ನು ತಿರಸ್ಕರಿಸಿದ್ದರು. ತಮಗೆ ವಿಧಿಸಿರುವ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತನೆ ಮಾಡುವಂತೆ ಉಮೇಶ್‌ ರೆಡ್ಡಿ ಹೈಕೋರ್ಟ್‌ ಮೊರೆ ಹೋಗಿದ್ದ. ಇದೀಗ ಹೈಕೋರ್ಟ್‌ ಗಲ್ಲು ಶಿಕ್ಷೆಯನ್ನೇ ಖಾಯಂಗೊಳಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ : ಕೊರೊನಾದಿಂದ 20 ಲಕ್ಷ ಸಾಲದ ಹೊರೆ, 4 ಹೆಣ್ಣು ಮಕ್ಕಳೊಂದಿಗೆ ಹೊಳೆಗೆ ಹಾರಿದ ಮಹಿಳೆ

ಇದನ್ನೂ ಓದಿ : ಯುವತಿಯನ್ನು ನಗ್ನಗೊಳಿಸಿ ವಿಡಿಯೋ : ಹಣಕ್ಕೆ ಡಿಮ್ಯಾಂಡ್‌ ಇಟ್ಟ ಆರೋಪಿಗಳ ಬಂಧನ

( Karnataka High Court Announced Death Sentence to Psychotic Rapist Killer Umesh Reddy )

Comments are closed.