HD Revanna Arrest : ಜೆಡಿಎಸ್‌ ಮುಖಂಡ ಎಚ್‌ಡಿ ರೇವಣ್ಣ ಬಂಧನ : ದೇವೇಗೌಡರ ನಿವಾಸದಲ್ಲೇ ವಶಕ್ಕೆ ಪಡೆದ ಎಸ್‌ಐಟಿ

HD Revananna Arrest : ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣದ ಆರೋಪಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಜೆಡಿಎಸ್‌ ಮುಖಂಡ ಎಚ್‌ಡಿ ರೇವಣ್ಣ ಅವರಿಗೆ ಜಾಮೀನು ನೀಡಲು ನಿರಾಕರಿಸಿದ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ.

HD Revananna Arrest : ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣದ ಆರೋಪಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಜೆಡಿಎಸ್‌ ಮುಖಂಡ ಎಚ್‌ಡಿ ರೇವಣ್ಣ ಅವರಿಗೆ ಜಾಮೀನು ನೀಡಲು ನಿರಾಕರಿಸಿದ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಪದ್ಮನಾಭ ನಗರದಲ್ಲಿರುವ ನಿವಾಸದಿಂದಲೇ ರೇವಣ್ಣ ಅವರನ್ನು ಬಂಧಿಸಿರುವ ಎಸ್‌ಐಟಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ನಡೆಸಲಿದ್ದಾರೆ.

Karnataka News Kidnap Case Sit arrest JDS Leader HD Revananna
Image Credit : india Today

ಪ್ರಕರಣವನ್ನು ಮುಚ್ಚಿ ಹಾಕಲು ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಈ ಕುರಿತು ಎಚ್‌ಡಿ ರೇವಣ್ಣ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನುಕೋರಿ ಅರ್ಜಿ ಸಲ್ಲಿಸಿದ್ದರು. ಇನ್ನೊಂದೆಡೆಯಲ್ಲಿ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದ್ದರೂ ಕೂಡ ಎಚ್‌ಡಿ ರೇವಣ್ಣ ವಿಚಾರಣೆಗೆ ಹಾಜರಾಗಿರಲಿಲ್ಲ. ಜೊತೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದ ಜಾಮೀನು ಅರ್ಜಿ ತಿರಸ್ಕಾರ ಗೊಂಡಿತ್ತು.

ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆ 80 ಸಾವಿರ ಅರ್ಜಿ ತಿರಸ್ಕಾರ :ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ರೆ ಮಾತ್ರ ಸಿಗುತ್ತೆ ಹಣ

ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ನಿವಾಸದಲ್ಲಿ ಇರುವ ಕುರಿತು ಮಾಹಿತಿ ಪಡೆದ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಇಂದು ಬಂಧಿಸಿದ್ದಾರೆ. ಮೈಸೂರಿನ ಕೆಆರ್ ನಗರದ ನಿವಾಸಿಯಾಗಿರುವ ಸಂತ್ರಸ್ತ ಮಹಿಳೆಯನ್ನು ಕಿಡ್ನಾಪ್‌ ಮಾಡಿರುವ ಆರೋಪ ರೇವಣ್ಣ ಅವರ ಮೇಲಿತ್ತು. ಈ ಪ್ರಕರಣದಲ್ಲಿ ಎಚ್‌ಡಿ ರೇವಣ್ಣ ಅವರು ಮೊದಲ ಆರೋಪಿಯಾಗಿದ್ದರೆ, ಎರಡನೇ ಆರೋಪಿ ಸತೀಶ್‌ ಬಾಬು ಅವರನ್ನು ನಿನ್ನೆಯೇ ಬಂಧಿಸಲಾಗಿತ್ತು.

Karnataka News Kidnap Case Sit arrest JDS Leader HD Revananna
Image Credit to Original Source

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ (Prajwal Revanna) ಅವರು ವಿದೇಶದಲ್ಲಿ ತಲೆ ಮರೆಯಿಸಿಕೊಂಡಿದ್ದು, ಅವರನ್ನು ಸ್ವದೇಶಕ್ಕೆ ಕರೆತರುವ ಕಾರ್ಯ ನಡೆಯುತ್ತಿದೆ. ಇನ್ನೊಂದೆಡೆಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಜೆಡಿಎಸ್‌ ಮುಖಂಡರಾದ ಜಿಟಿ ದೇವೇಗೌಡ, ಸಿಎಸ್‌ ಪುಟ್ಟರಾಜು, ನಿಖಿಲ್‌ ಕುಮಾರಸ್ವಾಮಿ ಸೇರಿದಂತೆ ಹಲವು ಮುಖಂಡರ ಜೊತೆಗೆ ಸಭೆಯನ್ನು ನಡೆಸಿದ್ದಾರೆ.

ಇದನ್ನೂ ಓದಿ : PM Awas Yojana : ಹೊಸ ಮನೆ ಕಟ್ಟಿಸುವವರಿಗೆ ಕೇಂದ್ರ ಸರಕಾರದಿಂದ ಸಿಗಲಿದೆ 30 ಲಕ್ಷ ರೂಪಾಯಿ

ಸಂತ್ರಸ್ತ ಮಹಿಳೆಯ ಕಿಡ್ನಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೇ 6 ರಂದು ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಲಿದೆ. ಅಲ್ಲದೇ ಎಸ್‌ಐಟಿ ಎಚ್‌ಡಿ ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆಯನ್ನು ನಡೆಸಲಿದೆ.

Karnataka News Kidnap Case Sit arrest JDS Leader HD Revananna

Comments are closed.