Kuppuru Swamiji : ಕುಪ್ಪೂರು ಮಠದ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

ತುಮಕೂರು : ಚಿಕ್ಕನಾಯಕನಹಳ್ಳಿ ಕುಪ್ಪುರೂ ಮಠದ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ (55ವರ್ಷ) ಅವರು ಲಿಂಗೈಕ್ಯರಾಗಿದ್ದಾರೆ. ಅವರು ಹೃದಯಾಘಾತದಿಂದ ವಿದಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಕಳೆದ ಕಲೆವು ದಿನಗಳ ಹಿಂದೆ ಕೊರೊನಾ ವೈರಸ್‌ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಚಿಕಿತ್ಸೆಯನ್ನು ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅವರು, ಹೃದಯಾಘಾತದಿಂದ ವಿದಿವಶರಾಗಿದ್ದಾರೆ.

ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ತುಮಕೂರಿನಿಂದ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆಯಲ್ಲಿ ಅವರಿಗೆ ಉಸಿರಾಟದ ಸಮಸ್ಯೆ ಕಂಡು ಬಂದಿದೆ ಎಂದು ತಿಳಿದು ಬಂದಿದೆ.

( Yatishwara Swamiji-of-kuppuru Mutt is no more in Tumkur )

Comments are closed.