ವಿಜಯಪುರ : ಕ್ಯಾಬ್ ಚಾಲಕನೋರ್ವ ಅಪ್ತಾಪ್ತ ಶಾಲಾ ಬಾಲಕಿಯೋರ್ವಳನ್ನು ಕಿಡ್ನಾಪ್ ಮಾಡಿ ನಂತರ ಅತ್ಯಾಚಾರವೆಸಗಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗೋನಾಳ್ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಅತ್ಯಾಚಾರವೆಸಗಿದ ಆರೋಪಿಯನ್ನು ದಾಮಣ್ಣ ಎಂದು ಗುರುತಿಸಲಾಗಿದೆ. ಮದುವೆಯಾಗಿ ಮೂರು ಮಕ್ಕಳಿದ್ದರೂ ಕೂಡ ಕ್ಯಾಬ್ ಚಾಲಕ ದಾಮಣ್ಣ ಹೈಸ್ಕೂಲು ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳ ಮೇಲೆ ಕಣ್ಣು ಹಾಕಿದ್ದ. ಬಾಲಕಿಯ ಬಳಿಯಲ್ಲಿ ಪ್ರೇಮ ನಿವೇದನೆಯನ್ನು ಮಾಡಿದ್ದಾನೆ. ಆದರೆ ಬಾಲಕಿ ಪ್ರೀತಿಸೋದಕ್ಕೆ ಒಪ್ಪಿಗೆ ನೀಡದೇ ಇದ್ದಾಗ ನಿನ್ನ ತಂದೆ ತಾಯಿಯನ್ನು ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ. ಅಷ್ಟೇ ಅಲ್ಲದೇ ನಿರಂತರವಾಗಿ ಪೀಡಿಸೋದಕ್ಕೆ ಶುರು ಮಾಡಿದ್ದ.
ಬಾಲಕಿ ಶೌಚಾಲಯಕ್ಕೆ ತೆರಳಿದ್ದ ವೇಳೆಯಲ್ಲಿ ಕ್ಯಾಬ್ ಚಾಲಕ ದ್ಯಾಮಣ್ಣ ಬಾಲಕಿಯನ್ನು ಕಿಡ್ನಾಪ್ ಮಾಡಿದ್ದಾನೆ. ನಂತರ ಮನೆಯೊಂದಕ್ಕೆ ಕರೆದೊಯ್ದು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ಕುರಿತು ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆಯನ್ನು ಮುಂದುವರಿಸಿದ್ದಾರೆ.
ಬಾಲಕಿ ತನ್ನ ಮೇಲೆ ಅತ್ಯಾಚಾರವೆಸಗಿರುವ ಕುರಿತು ದೂರು ನೀಡಿದ್ದರು, ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ. ಆದರೆ ಪೊಲೀಸರ ತನಿಖೆ ಇದೀಗ ಪೋಷಕರಿಗೆ ಅನುಮಾನ ಮೂಡಿಸಿದೆ ಎಂದು ಆರೋಪಿಸಿದ್ದಾರೆ. ಮೈಸೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣ ನಡೆದ ಬೆನ್ನಲೇ ಇದೀಗ ವಿಜಯಪುರ ಜಿಲ್ಲೆಯಲ್ಲಿಯೂ ಶಾಲಾ ಬಾಲಕಿಯೋರ್ವಳ ಮೇಲೆ ಕಾಮುಕನೋರ್ವ ಅತ್ಯಾಚಾರ ವೆಸಗಿದ್ದಾನೆ. ಅಪ್ರಾಪ್ತ ಬಾಲಕಿಯರ ಮೇಲೆ ಇಂತಹ ಕೃತ್ಯ ನಡೆಯುತ್ತಿವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಮುಕರಿಗೆ ತಕ್ಕ ಶಾಸ್ತಿ ಮಾಡಿದ್ರೆ ಮಾತ್ರ ಇಂತಹ ಅಪರಾಧ ಕೃತ್ಯವನ್ನು ಕಡಿಮೆ ಮಾಡಬಹುದು ಅನ್ನೋ ಮಾತುಗಳು ಕೇಳಿಬರುತ್ತಿದೆ.
ಮಂಗಳೂರು : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ
ಅಪ್ರಾಪ್ತ ಬಾಲಕಿಯೋರ್ವಳನ್ನು ಅಪಹರಿಸಿ ಮತ್ತು ಬರುವ ಚಾಕೋಲೇಟ್ ನೀಡಿ ನಂತರ ಸಾಮಾಹಿಕವಾಗಿ ಅತ್ಯಾಚಾರವೆಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಟಾಡಿ ಎಂಬಲ್ಲಿ ನಡೆದಿದೆ.
ಆಟೋ ಸ್ಟ್ಯಾಂಡ್ ಬಳಿಯಲ್ಲಿ ನಿಂತಿದ್ದ ಬಾಲಕಿಯನ್ನೇ ಪರಿಚಿತರೇ ಅಪಹರಿಸಿದ್ದಾರೆ. ನಂತರದ ಆಕೆಗೆ ಮತ್ತು ಬರಿಸುವ ಚಾಕಲೇಟ್ ನೀಡಿ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರವನ್ನು ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಸದ್ಯ ಅತ್ಯಾಚಾರಕ್ಕೆ ಒಳಗಾಗಿರುವ ಸಂತ್ರಸ್ತೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಈ ಕುರಿತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
( Minor school girl kidnapped Cab driver for rape )