Earthquake : ಕಲಬುರಗಿ, ವಿಜಯಪುರದಲ್ಲಿ ಮತ್ತೆ ಭೂಕಂಪನ : ಭಾರೀ ಶಬ್ದಕ್ಕೆ ಬೆಚ್ಚಿಬಿದ್ದ ಜನರು

ಬೆಳಗಾವಿ /ವಿಜಯಪುರ : ಕಳೆದ ಕೆಲವು ದಿನಗಳಿಂದಲೂ ಉತ್ತರ ಕರ್ನಾಟಕ ಭಾಗದ ಜನರಿಗೆ ಸರಿಯಾಗಿ ನಿದ್ದೆ ಮಾಡುವುದಕ್ಕೆ ಆಗುತ್ತಿಲ್ಲ. ಕತ್ತಲಾದ್ರೆ ಸಾಕು ಅಲ್ಲಿನ ಜನರಿಗೆ ಜೀವಭಯ ಕಾಡೋದಕ್ಕೆ ಶುರುವಾಗುತ್ತೆ. ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಆತಂಕ ಮೂಡಿಸಿದ್ದ ಭೂಕಂಪನ ಇದೀಗ ಮತ್ತೆ ಕಾಣಿಸಿಕೊಂಡಿದೆ.ಇಂದು ಬೆಳಗ್ಗೆ ಭಾರೀ ಸದ್ದು ಕೇಳಿಬಂದಿದ್ದು, ಕೆಲ ಕಾಲ ಭೂಮಿ ಕಂಪಿಸಿದೆ.

ಬೆಳಗಾವಿ ಜಿಲ್ಲೆಯ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಲಗೇರಾ ಮತ್ತು ಗಡಿಗೇಶ್ವರ ಗ್ರಾಮಗಳಲ್ಲಿ ನಿನ್ನೆ ರಾತ್ರಿಯ ವೇಳೆಯಲ್ಲಿ ಭೂಮಿ ಕಂಪಿಸಿದೆ. ಬೆಳಗ್ಗೆ 6 ವೇಳೆಯಲ್ಲಿ ಭಾರೀ ಪ್ರಮಾಣದ ಸದ್ದು ಕೇಳಿಬಂದಿದ್ದು ನಂತರದಲ್ಲಿ ಭೂಮಿ ಕಂಪಿಸಿದೆ. ಇದರಿಂದಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಗಡಿಗೇಶ್ವರ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದಲೂ ನಿರಂತರವಾಗಿ ಭೂಮಿ ಕಂಪಿಸಿದ ಅನುಭವವಾಗುತ್ತಿದ್ದು, ಭೂಕಂಪನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಇನ್ನೊಂದೆಡೆಯಲ್ಲಿ ವಿಜಯಪುರದಲ್ಲಿಯೂ ಭೂ ಕಂಪನ ಸಂಭವಿಸಿದೆ. ಜಿಲ್ಲೆಯ ಮಸೂತಿ ಮತ್ತು ಮಲಘಾಣ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಮಿ ಕಂಪಿಸುತ್ತಿದ್ದಂತೆಯೇ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಕಳೆದೊಂದು ತಿಂಗಳ ಅವಧಿಯಲ್ಲಿ ಅತೀ ಹೆಚ್ಚು ಭಾರಿ ಭೂ ಕಂಪನ ಸಂಭವಿಸಿದ ಹಿನ್ನೆಲೆಯಲ್ಲೀಗ ಜನರು ಭಯದಲ್ಲಿಯೇ ದಿನದೂಡುತ್ತಿದ್ದಾರೆ.

ಉತ್ತರ ಕರ್ನಾಟಕ ಭಾಗದ ಹಲವು ಗ್ರಾಮಗಳಲ್ಲಿ ನಿರಂತರವಾಗ ಭೂಮಿ ಕಂಪಿಸುತ್ತಿದ್ದು, ಜನರು ಆತಂಕದಲ್ಲಿದ್ದಾರೆ. ಭೂಮಿ ಕಂಪನಕ್ಕೆ ಕಾರಣ ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಪರಿಶೀಲನೆಯನ್ನು ನಡೆಸುತ್ತಿದೆ. ಭಾರೀ ಸದ್ದು ಕೇಳಿಬಂದು ಭೂಮಿ ಕಂಪಿಸಿದ ಹಿನ್ನೆಲೆಯಲ್ಲೀಗ ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ.

ಇದನ್ನೂಓದಿ :  ಲೈಸೆನ್ಸ್‌ ಇಲ್ಲದೇ ಇನ್ಮುಂದೆ ಮನೆಯಲ್ಲಿ ನಾಯಿ ಸಾಕುವಂತಿಲ್ಲ; ಕದ್ದು ಮುಚ್ಚಿ ಸಾಕಿದ್ರೆ ಬೀಳುತ್ತೆ ಭಾರೀ ದಂಡ !

ಇದನ್ನೂ ಓದಿ : ಕರ್ನಾಟಕಕ್ಕೆ ಪವರ್‌ ಶಾಕ್‌ : ಕಲ್ಲಿದ್ದಲ ಕೊರತೆಯಿಂದ ವಿದ್ಯುತ್‌ ಅಭಾವ

(People who were shocked by the earthquake and heavy noise again in Vijayapur)

Comments are closed.