DA Hike : ರಾಜ್ಯ ಸರಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌ : ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರಕಾರದ ಆದೇಶ

ಬೆಂಗಳೂರು : ದೀಪಾವಳಿಗೂ ಮುನ್ನವೇ ಸರಕಾರಿ ನೌಕರರಿಗೆ ರಾಜ್ಯ ಸರಕಾರ ಭರ್ಜರಿ ಗಿಫ್ಟ್‌ ಕೊಟ್ಟಿದೆ. ಸರಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.21.50 ರಿಂದ ಶೇ.24.50 ಕ್ಕೆ ಪರಿಷ್ಕರಿಸಿದ್ದು, ಈ ಕುರಿತು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಜುಲೈ 1 2021ರಿಂದಲೇ ತುಟ್ಟಿ ಭತ್ಯೆ ಪರಿಷ್ಕರಣೆ ಅನ್ವಯವಾಗಲಿದೆ.

DA Hike: BIG Diwali Gift For Central Government Employees. Details Here
ಸಾಂದರ್ಭಿಕ ಚಿತ್ರ

2008ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರಕಾರಿ ನೌಕರರು ಜುಲೈ 1 2021ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ದರಗಳನ್ನು ಪ್ರಸ್ತುತ ಮೂಲಕ ವೇತನದ ಶೇಖಡಾ 21.50ರಿಂದ ಶೇ.24.50ಕ್ಕೆ ಪರಿಷ್ಕರಿಸಿ ಸರಕಾರ ಆದೇಶಿಸಿದೆ. ರಾಜ್ಯದ ಸರಕಾರಿ ನೌಕರರು, ಸರಕಾರದ ನಿವೃತ್ತಿ ವೇತನದಾರರು ಅಥವಾ ಕುಟುಂಬ ನಿವೃತ್ತಿ ವೇತನದಾರರು, ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು ಅಥವಾ ಕುಟುಂಬ ನಿವೃತ್ತಿ ವೇತನದಾರರಿಗೂ ತುಟ್ಟಿಭತ್ಯೆ ಪರಿಷ್ಕರಣೆ ಅನ್ವಯವಾಗಲಿದೆ.

vidhana soudha

ತುಟ್ಟಿಭತ್ಯೆ ಪರಿಷ್ಕರಣೆಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ ಉಮಾ ಕೆ. ಅವರು ತುಟ್ಟಿಭತ್ಯೆಯ ದರಗಳ ಪರಿಷ್ಕರಣೆಯ ನಡವಳಿಯನ್ನು ಹೊರಡಿಸಿದ್ದಾರೆ.

ಇದನ್ನೂ ಓದಿ : ಹೊಸ ವಾಹನ ಖರೀದಿಸುವವರಿಗೆ; ಗುಡ್ ನ್ಯೂಸ್ ಕೊಟ್ಟ ಸರಕಾರ

ಇದನ್ನೂ ಓದಿ : ಹಳೆ ನೋಟು ಬದಲಾಯಿಸೋ ನೆಪದಲ್ಲಿ ಜೆರಾಕ್ಸ್‌ ನೋಟು ಕೊಟ್ಟ ಖದೀಮರು

( Good News : Karnataka State govt has increased the DA of state Government employees )

Comments are closed.