ಭಾನುವಾರ, ಜೂನ್ 15, 2025
HomekarnatakaKarnataka Weather Report : ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರೆಂಜ್‌...

Karnataka Weather Report : ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರೆಂಜ್‌ ಅಲರ್ಟ್‌ ಘೋಷಣೆ

- Advertisement -

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ( IMD ) ಮಾಹಿತಿ ನೀಡಿದೆ.

ಇಂದು ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿಂದು ಆರೆಂಜ್‌ ಅಲರ್ಟ್ (Orange Alert) ಘೋಷಣೆ ಮಾಡಲಾಗಿದೆ.

heavy rain

ಕಳೆದ ಒಂದು ವಾರದಿಂದಲೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡು, ಮಲೆನಾಡು, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಅಕ್ಟೋಬರ್‌ 17 ರ ವರೆಗೆ ಭಾರಿ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆಯನ್ನು ನೀಡಿದೆ.

( Orange Alert announces three days of heavy rains in Karnataka )

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular