Cyclone Gulab: ಗುಲಾಬ್‌ ಚಂಡ ಮಾರುತದ ಭೀತಿ : ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಇಂದಿನಿಂದ ಭಾರೀ ಮಳೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ. ಅಲ್ಲದೇ ಆಂಧ್ರಪ್ರದೇಶ ಹಾಗೂ ಒರಿಸ್ಸಾದಲ್ಲಿ ಗುಲಾಬ್‌ ಚಂಡಮಾರುತದ ಭೀತಿ ಎದುರಾಗಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನು ನೀಡಿದೆ.

ಅಲ್ಲದೇ ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಉತ್ತರ ಒಳನಾಡಿನ ಹಾವೇರಿ, ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಇಂದಿನಿಂದ ಸೆ. 28ರ ವರೆಗೂ ಮಳೆಯಾಗಲಿದೆ. ಕರಾವಳಿ ಸೇರಿದಂತೆ ರಾಜ್ಯ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ರೆಡ್‌ ಅಲರ್ಟ್‌ ಘೋಷಣೆಯನ್ನು ಮಾಡಲಾಗಿದೆ.

ಗುಲಾಬ್‌ ಚಂಡಮಾರುತದ ಆರ್ಭಟದಿಂದಾಗಿ ಆಂಧ್ರಪ್ರದೇಶದ, ಒರಿಸ್ಸಾ ಹಾಗೂ ಗುಜರಾತ್‌ ರಾಜ್ಯದಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಅಷ್ಟೇ ಅಲ್ಲದೇ ತಮಿಳುನಾಡು, ಹಿಮಾಚಲ ಪ್ರದೇಶ, ರಾಜಸ್ಥಾನ, ಪಂಚಾಜ್‌, ಹರಿಯಾಣ, ಗೋವಾ, ಮಧ್ಯಪ್ರದೇಶ, ಉತ್ತರಾಖಂಡ್‌, ತ್ರಿಪುರ, ಕೇರಳ, ತೆಲಂಗಾಣ, ಬಿಹಾರ, ಅಸ್ಸಾಂ, ಮೇಘಾಲಯ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿಯೂ ವರುಣ ಆರ್ಭಟಿಸಲಿದ್ದಾನೆ.

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಜನರು ಎಚ್ಚರದಿಂದ ಇರುವಂತೆಯೂ ಹವಾಮಾನ ಇಲಾಖೆ ಸೂಚನೆಯನ್ನು ನೀಡಿದೆ. ಕೇವಲ ಸಪ್ಟೆಂಬರ್‌ 28ರ ವರೆಗೆ ಮಾತ್ರವಲ್ಲದೇ ಮುಂದಿನ ದಿನಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ. ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಪಡೆದ ಭಾರತೀಯರಿಗೆ ಗುಡ್ ನ್ಯೂಸ್ ಕೊಟ್ಟ ಇಟಲಿ

ಇದನ್ನೂ ಓದಿ : ಪ್ರತಿದಿನ ಸ್ನಾನ ಮಾಡದ ಪತ್ನಿ : ಇದೇ ಕಾರಣ ವಿಚ್ಛೇದನ ನೀಡಿದ ಪತಿ

( Heavy rains in Andhra Pradesh and Odisha are likely due to the impact of the Gulab storm. Orange Alert has been announced in many districts of Karnataka )

Comments are closed.