Yellow Alert : ಕರಾವಳಿ ಸೇರಿ ರಾಜ್ಯದಲ್ಲಿ 4 ದಿನಗಳ ಭಾರೀ ಮಳೆ : ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಹೀಗಾಗಿ ಕರಾವಳಿ ಸೇರಿದಂತೆ ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 24 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಮಲೆನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಕರಾವಳಿ ಮಾತ್ರವಲ್ಲದೇ ರಾಜ್ಯದ ಸಿಲಿಕಾನ್‌ ಸಿಟಿ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ರಾಮನಗರ, ಕೋಲಾರ, ಮಂಡ್ಯ, ಬಳ್ಳಾರಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಧಾರವಾಡ, ಬೆಳಗಾವಿ, ಹಾವೇರಿ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಮಳೆ ಮುಂದುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ : ಯುವತಿ ಹೆಸರಲ್ಲಿ ಯುವಕರಿಗೆ ಪಾಕ್ ISI ಗಾಳ : ಫೇಸ್‌ಬುಕ್‌ನಲ್ಲಿ ಮಿಲಿಟರಿ ಮಾಹಿತಿ ಲೀಕ್ ಮಾಡಿದ್ದಾತ ಅರೆಸ್ಟ್‌

ಇದನ್ನೂ ಓದಿ : ಮಂಗಳೂರು ಡಯಟ್‌ನಲ್ಲಿ ತಲವಾರು ದಾಳಿ : ಆರೋಪಿ ಕುಂದಾಪುರದ ನವೀನ್‌ ಅರೆಸ್ಟ್‌

( Yellow Alert Announces 4 Days of Heavy Rain in Karnataka )

Comments are closed.