Karnataka Next CM : ಡಿಕೆ ಶಿವಕುಮಾರ್‌ ಸಿಎಂ, ಜಗದೀಶ್‌ ಶೆಟ್ಟರ್‌ ಡಿಸಿಎಂ ?

ಬೆಂಗಳೂರು : ( Karnataka Next CM) : ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರದ ಗದ್ದುಗೆಗೆ ಏರುತ್ತಿದ್ದಂತೆಯೇ ಮುಂದಿನ ಮುಖ್ಯಮಂತ್ರಿ ಯಾರು ಅನ್ನೋ ಕುತೂಹಲ ಹೆಚ್ಚಾಗುತ್ತಿದೆ. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಈಗಾಗಲೇ ಆರಂಭಗೊಂಡಿದ್ದು, ಸಿಎಂ ಹುದ್ದೆಗಾಗಿ ಡಿಕೆ ಶಿವಕುಮಾರ್‌, ಸಿದ್ದರಾಮಯ್ಯ ನಡುವೆ ಪ್ರಬಲ ಪೈಪೋಟಿ ನಡೆಯುತ್ತಿದೆಯಾದ್ರೂ, ಡಾ.ಜಿ.ಪರಮೇಶ್ವರ್‌ ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದ್ದಾರೆ. ಆದರೆ ಕಾಂಗ್ರೆಸ್‌ ಮೂಲಗಳ ಪ್ರಕಾರ ಪ್ರಬಲ ಒಕ್ಕಲಿಗ ನಾಯಕ ಡಿಕೆ ಶಿವಕುಮಾರ್‌ (DK Sivakumar CM) ಕರ್ನಾಟಕದ ಸಿಎಂ ಆಗುವ ಸಾಧ್ಯತೆಯಿದ್ದು, ಲಿಂಗಾಯಿತ ನಾಯಕ ಜಗದೀಶ್‌ ಶೆಟ್ಟರ್‌ ಡಿಸಿಎಂ (Jagadish Shettar DCM) ಆಗಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

ಬಿಜೆಪಿ ಪಕ್ಷದ ವಿರುದ್ದ ಮುನಿಸಿಕೊಂಡು ಕಾಂಗ್ರೆಸ್‌ ಸೇರ್ಪಡೆಯಾಗಿರುವ ಜಗದೀಶ್‌ ಶೆಟ್ಟರ್‌ ಈ ಬಾರಿ ಹುಬ್ಬಳಿ ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಆದರೆ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧೆ ಮಾಡಿರುವುದನ್ನು ಕ್ಷೇತ್ರದ ಮತದಾರ ಒಲವು ತೋರಿಲ್ಲ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಜಗದೀಶ್‌ ಶೆಟ್ಟರ್‌ ಸೋಲನ್ನು ಕಂಡಿದ್ದಾರೆ. ಆದರೆ ಜಗದೀಶ್‌ ಶೆಟ್ಟರ್‌ ಚುನಾವಣೆಯ ಹೊತ್ತಲ್ಲೇ ಬಿಜೆಪಿ ವಿರುದ್ದ ಮಾಡಿರುವ ಆರೋಪ, ಲಿಂಗಾಯಿತ ನಾಯಕರ ಕಡೆಗಣನೆಯ ಕುರಿತು ಆಡಿರುವ ಮಾತುಗಳು ಬಿಜೆಪಿಯ ಸೋಲಿಗೆ ಕಾರಣವಾಗಿದೆ ಎನ್ನುವ ಮಾತುಗಳು ಕೇಳಿಬಂದಿವೆ.

ಕಾಂಗ್ರೆಸ್‌ ಸೇರ್ಪಡೆಯ ಹೊತ್ತಲೇ ಜಗದೀಶ್‌ ಶೆಟ್ಟರ್‌ (Jagadish Shettar DCM) ಅವರಿಗೆ ಸರಕಾರದಲ್ಲಿ ಪ್ರಮುಖ ಹುದ್ದೆಯನ್ನು ನೀಡುವ ಭರವಸೆಯನ್ನು ಕಾಂಗ್ರೆಸ್‌ ವರಿಷ್ಠರು ನೀಡಿದ್ದಾರೆ ಎನ್ನಲಾಗುತ್ತಿದೆ. ಇನ್ನೊಂದೆಡೆಯಲ್ಲಿ ಕಾಂಗ್ರೆಸ್‌ ಪಕ್ಷದ ಉತ್ತರ ಕರ್ನಾಟಕ ಭಾಗದಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿತ್ತು. ಇದಕ್ಕೂ ಕೂಡ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ಸೇರ್ಪಡೆಯೇ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಹೀಗಾಗಿ ಈ ಬಾರಿಯ ಕಾಂಗ್ರೆಸ್‌ ಸರಕಾರದಲ್ಲಿ ಜಗದೀಶ್‌ ಶೆಟ್ಟರ್‌ ಅವರಿಗೆ ಪ್ರಬಲ ಖಾತೆಯ ಜೊತೆಗೆ ಡಿಸಿಎಂ ಹುದ್ದೆಯನ್ನು ನೀಡಲು ಕಾಂಗ್ರೆಸ್‌ ಹೈಕಮಾಂಡ್‌ ಸಮ್ಮತಿಸಿದೆ ಎನ್ನಲಾಗುತ್ತಿದೆ. 1994 ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡುತ್ತಲೇ ಬಂದಿರುವ ಜಗದೀಶ್‌ ಶೆಟ್ಟರ್‌ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧೆ ಮಾಡುವ ಮೂಲಕ ಸೋಲನ್ನು ಕಂಡಿದ್ದರು. ಹೀಗಾಗಿ ಜಗದೀಶ್‌ ಶೆಟ್ಟರ್‌ ಅವರ ವರ್ಚಸ್ಸು ಧಕ್ಕೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಕಾಂಗ್ರೆಸ್‌ ಪಕ್ಷದ ಮೇಲಿದೆ. ಇದೇ ಕಾರಣಕ್ಕೆ ಕಾಂಗ್ರೆಸ್‌ ಹಲವರು ಲೆಕ್ಕಾಚಾರಗಳನ್ನು ನಡೆಸುತ್ತಿದ್ದಾರೆ.

ಇನ್ನು ಸಿದ್ದರಾಮಯ್ಯ ಕಾಂಗ್ರೆಸ್‌ ಪಕ್ಷದಿಂದ ಈಗಾಗಲೇ ಒಂದು ಬಾರಿ ಸಿಎಂ ಆಗಿ ಆಯ್ಕೆಯಾಗಿದ್ದು, ಐದು ವರ್ಷಗಳ ಕಾಲ ಕರ್ನಾಟಕದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ನಾಯಕ ಅನ್ನೋ ಖ್ಯಾತಿಯನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ಒಂದು ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಅವರ ಬದಲು ಡಿಕೆ ಶಿವಕುಮಾರ್‌ (DK Sivakumar CM) ಅವರಿಗೆ ಸಿಎಂ ಹುದ್ದೆ ನೀಡಬೇಕೆಂಬ ಒತ್ತಡ ಕೇಳಿಬಂದಿದೆ. ಇನ್ನೊಂದೆಡೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದವರೇ ಸಿಎಂ ಆಗುವುದು ರಾಜ್ಯದಲ್ಲಿ ನಡೆದುಕೊಂಡು ಬಂದಿರುವ ಸಂಪ್ರದಾಯ. ಇದೆ ಕಾರಣಕ್ಕೆ ಡಿಕೆ ಶಿವಕುಮಾರ್‌ ಈ ಬಾರಿ ಸಿಎಂ (Karnataka Next CM) ಆಗಿ ಆಯ್ಕೆಯಾಗುವುದು ಬಹುತೇಕ ಖಚಿತ. ಇದನ್ನೂ ಓದಿ : ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಬಣಗಳ ನಡುವೆ ಜಟಾಪಟಿ

ಚುನಾವಣೆಯ ಸೋಲಿನ ಎರಡು ದಿನಗಳ ನಂತರ ಜಗದೀಶ್‌ ಶೆಟ್ಟರ್‌ ಅವರನ್ನು ಕಾಂಗ್ರೆಸ್‌ ನಾಯಕರು ಬೆಂಗಳೂರಿಗೆ ಬರುವಂತೆ ಆಹ್ವಾನಿಸಿ ಮಾತುಕತೆಯನ್ನು ನಡೆಸಿದ್ದಾರೆ. ಜಗದೀಸ್‌ ಶೆಟ್ಟರ್‌ ಅವರಿಗೆ ಪ್ರಮುಖ ಖಾತೆಯನ್ನು ನೀಡುವ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಉತ್ತರ ಕರ್ನಾಟಕದಲ್ಲಿ ಭದ್ರ ಮಾಡಿಸಿಕೊಳ್ಳಲು ಕಾಂಗ್ರೆಸ್‌ ಯೋಜನೆಯನ್ನು ರೂಪಿಸಿದೆ. ಆದರೆ ಇದೀಗ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಯಾರು ಮುಂದಿನ ಸಿಎಂ ಆಗಲಿದ್ದಾರೆ ಅನ್ನೋದು ನಿರ್ಧಾರವಾಗಲಿದೆ. ಇದನ್ನೂ ಓದಿ : ಹುಬ್ಬಳ್ಳಿ-ಧಾರವಾಡ ಸೋಲಿನ ಬಗ್ಗೆ ಬಿಜೆಪಿಗೆ ತಿರುಗೇಟು ನೀಡಿದ ಜಗದೀಶ ಶೆಟ್ಟರ್

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಲಿಂಗಾಯಿತ ಸಮುದಾಯ ಕೈ ಹಿಡಿದಿದೆ. ಹೀಗಾಗಿ ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಲಿಂಗಾಯತರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಸಾಧ್ಯತೆಯಿದೆ. ಇನ್ನೊಂದೆಡೆಯಲ್ಲಿ ಮುಸ್ಲೀಂ ಸಮುದಾಯವರಿಗೂ ಡಿಸಿಎಂ ಹುದ್ದೆ ನೀಡಬೇಕೆಂಬ ಕೂಗು ಕೇಳಿಬಂದಿದೆ. ಒಂದೊಮ್ಮೆ ಒಕ್ಕಲಿಗ ಸಮುದಾಯದ ಡಿಕೆ ಶಿವಕುಮಾರ್‌ ಸಿಎಂ ಆಗಿ ಆಯ್ಕೆಯಾದ್ರೆ ಲಿಂಗಾಯಿತ ಸಮುದಾಯ ಜಗದೀಶ್‌ ಶೆಟ್ಟರ್‌, ದಲಿತ ಸಮುದಾಯದ ಡಾ.ಜಿ.ಪರಮೇಶ್ವರ್‌, ಮುಸ್ಲೀಂ ಸಮುದಾಯದ ಯು.ಟಿ.ಖಾದರ್‌ ಡಿಸಿಎಂ ಆಗುವ ಸಾಧ್ಯತೆಯಿದೆ. ಈ ಅಸ್ತ್ರವನ್ನು ಪ್ರಯೋಗಿಸಿದ್ರೆ ಕಾಂಗ್ರೆಸ್‌ ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ, ಮಧ್ಯ ಕರ್ನಾಟಕ ಭಾಗದಲ್ಲಿಯೂ ಕಾಂಗ್ರೆಸ್‌ ಪಕ್ಷ ಪ್ರಾಶಸ್ತ್ಯ ನೀಡಿದಂತಾಗುತ್ತದೆ ಅನ್ನೋ ಲೆಕ್ಕಾಚಾರವೂ ನಡೆಯುತ್ತಿದೆ. ಇದನ್ನೂ ಓದಿ : ಬೈಂದೂರಿನಲ್ಲಿ ಗೋಪಾಲ ಪೂಜಾರಿ ಮಿನಿಸ್ಟರ್‌ ಆಗಿ ಆಯ್ತು!

Comments are closed.