ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸದ್ಯಕ್ಕೆ ಲಾಕ್‌ಡೌನ್ ಜಾರಿ ಮಾಡದೇ ಇರಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಸಂಪೂರ್ಣವಾಗಿ ಇಳಿಕೆಯಾಗಿಲ್ಲ. ಮುಂದಿನ ಎರಡು ವಾರಗಳ ಕಾಲ ಪ್ರಸ್ತುತ ನಿಯಮಗಳೇ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ರಾಜ್ಯದ ಗಡಿ ಜಿಲ್ಲೆಗಳು ಹಾಗೂ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಅಧಿಕಾರಿಗಳು ಹಾಗೂ ತಜ್ಞರ ಜೊತೆಗೆ ಸಭೆ ನಡೆಸಿದ್ದಾರೆ. ಸಭೆಯ ನಂತರ ಮಾತನಾಡಿದ ಅವರು,ಪಾಸಿಟಿವಿಟಿ ರೇಟ್ ಹೆಚ್ಚಳವಾಗಿರುವ ಕೇರಳ ಹಾಗೂ ಮಹಾರಾಷ್ಟ್ರ ಗಡಿಯಲ್ಲಿರುವ ದಕ್ಷಿಣ ಕನ್ನಡ, ಚಿಕ್ಕಗಳೂರು, ಉಡುಪಿ, ಶಿವಮೊಗ್ಗ, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ವ್ಯಾಕ್ಸಿನೇಷನ್ ಪ್ರಮಾಣವನ್ನು ಹೆಚ್ಚಳ ಮಾಡಬೇಕು. ಗಡಿಭಾಗದ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ವ್ಯಾಕ್ಸಿನೇಷನ್ ಮಾಡಬೇಕು. ರಾಯಚೂರು, ಗುಲ್ಬರ್ಗಾ, ಹಾವೇರಿ, ಬೀದರ್ , ತುಮಕೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೊರೊನಾ ಟೆಸ್ಟಿಂಗ್ ಹೆಚ್ಚಿಸಲು ಸೂಚಿಸಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ : ಕೊರೊನಾ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲಾರಂಭ ಇಲ್ಲ : ಬಸವರಾಜ್ ಬೊಮ್ಮಾಯಿ

ಡೆಲ್ಟಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಜನೋಮ್ ಲ್ಯಾಬ್ ಆರಂಭಿಸಲಾಗುತ್ತಿದ್ದು, ಡೆಲ್ಟಾ ಕುರಿತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮೊದಲ ಅಲೆ ಆರಂಭವಾಗಿದ್ದು ಕೇರಳದಲ್ಲಿ. ಎರಡನೇ ಅಲೆ ಕೂಡ ಅಲ್ಲಿಂದಲೇ ಆರಂಭವಾಗಿದೆ. ಹೀಗಾಗಿ ಅದನ್ನು ನಿಯಂತ್ರಣ ಮಾಡಲೇ ಬೇಕು. ರಾಜ್ಯದ ಜನರ ಜೀವ ರಕ್ಷಣೆ ನಮ್ಮ ಜವಾಬ್ದಾರಿ. ಹೈಕೋರ್ಟ್‌ನಲ್ಲಿ ಕೇಸ್ ಹಾಕುವ ಬದಲು ಕೇರಳ ಕೊರೊನಾ ನಿಯಂತ್ರಣ ಮಾಡುವ ಸೂಕ್ತ ಎಂದಿದ್ದಾರೆ.