ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಕಾದ್ರೆ ಪೋಷಕರು ಕಡ್ಡಾಯವಾಗಿ ಎರಡು ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡಿರಬೇಕು. ಅಲ್ಲದೇ ಶಾಲೆ, ಕಾಲೇಜುಗಳಲ್ಲಿ ಯಾವುದೇ ಸಭೆ, ಸಮಾರಂಭಗಳನ್ನು ನಡೆಸದಂತೆ ನಿರ್ಬಂಧ ಹೇರಲಾಗಿದೆ. ಮದುವೆ ಸಮಾರಂಭಗಳಿಗೆ 500 ಜನರು ಮಾತ್ರವೇ ಪಾಲ್ಗೊಳ್ಳಲು ಆವಕಾಶ ಕಲ್ಪಿಸಿ ಕರ್ನಾಟಕ ರಾಜ್ಯ ಸರಕಾರ ಮಹತ್ವದ (Omicron New Guidelines) ಆದೇಶ ಹೊರಡಿಸಿದೆ.
ಕರ್ನಾಟಕದಲ್ಲಿ ಓಮಿಕ್ರಾನ್ ವೈರಸ್ ಸೋಂಕು ಪತ್ತೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಹಿರಿಯ ಸಚಿವರ ಜೊತೆಗೆ ತುರ್ತು ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಪ್ರಮುಖವಾಗಿ ಹಲವು ನಿರ್ಬಂಧಗಳನ್ನು ವಿಧಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲೀಗ ರಾಜ್ಯ ಸರಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ಕಂದಾಯ ಸಚಿವ ಆರ್. ಅಶೋಕ್ ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ.
ಶಾಲೆ, ಕಾಲೇಜುಗಳಲ್ಲಿ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಶಾಲೆಯ ಆವರಣವನ್ನು ಪ್ರವೇಶಿಸಲು ಕಡ್ಡಾಯವಾಗಿ ಎರಡನೇ ಡೋಸ್ ಲಸಿಕೆಯನ್ನು ಪಡೆದಿರಬೇಕು. ಇನ್ನು ಪೋಷಕರು ಎರಡು ಡೋಸ್ ಲಸಿಕೆ ಪಡೆದಿದ್ರೆ ಮಾತ್ರವೇ ಮಕ್ಕಳಿಗೆ ಶಾಲೆ, ಕಾಲೇಜುಗಳಿಗೆ ಪ್ರವೇಶಾವಕಾಶವನ್ನು ನೀಡಲು ಮುಂದಾಗಿದೆ. ಶಾಲೆಗಳಲ್ಲಿ ಯಾವುದೇ ಸಭೆ, ಸಮಾರಂಭ ಗಳನ್ನು ನಡೆಸುವಂತಿಲ್ಲ ಎಂದು ಸೂಚಿಸಿದೆ. ಇನ್ನು ಶಾಪಿಂಗ್ ಮಾಲ್, ಸಿನಿಮಾ ಥಿಯೇಟರ್, ಸಾರ್ವಜನಿಕ ಪ್ರದೇಶಗಳಲ್ಲಿ ಭಾಗಿಯಾಗಲು ಕಡ್ಡಾಯವಾಗಿ ಎರಡನೇ ಡೋಸ್ ವ್ಯಾಕ್ಸಿನ್ ಪಡೆದುಕೊಂಡಿರಬೇಕು ಎಂದು ಆದೇಶಿಸಲಾಗಿದೆ.
ರಾಜ್ಯದಲ್ಲಿ ನಿತ್ಯವೂ ಒಂದು ಲಕ್ಷ ಟೆಸ್ಟ್‌ಗಳನ್ನು ಮಾಡಲು ಸೂಚನೆಯನ್ನು ನೀಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಅಕ್ಸಿಜನ್ ಬೆಡ್‌ಗಳನ್ನು ಹೆಚ್ಚಳ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಲಾಗಿದ್ದು, ಮತ್ತೆ ಕಂಟ್ರೋಲ್ ರೂಮ್ ಆರಂಭಿಸಿ ಔಷಧಿ ಪೂರೈಕೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಶೋಕ್ ತಿಳಿಸಿದ್ದಾರೆ.
ಇದನ್ನೂ ಓದಿ : ಏನಿದು ಒಮಿಕ್ರಾನ್ ರೂಪಾಂತರಿ..? ಇದರ ಲಕ್ಷಣಗಳೇನು..?ಮುಂಜಾಗ್ರತಾ ಕ್ರಮಗಳೇನು..? ಇಲ್ಲಿದೆ ಮಾಹಿತಿ
ಇದನ್ನೂ ಓದಿ : Students Corona : ಮಡಿಕೇರಿ ಖಾಸಗಿ ಶಾಲೆಯ 9 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು
( Omicron New Guidelines: Restriction on marriage, parents compulsory 2 vaccines for children in Karnataka)