ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಮತ್ತೊಂದು ವಾರ ವಿಸ್ತರಣೆ ಮಾಡಲು ರಾಜ್ಯ ಸರಕಾರ ಮುಂದಾಗಿದೆ. ಈಗಾಗಲೇ ತಜ್ಞರ ಸಭೆ ನಡೆಸಿದ್ದು, ಸಿಎಂ ಯಡಿಯೂರಪ್ಪ ಅಧಿಕೃತ ಆದೇಶ ಹೊರಡಿಸಲಿದ್ದಾರೆ.

ಕರ್ನಾಟಕದಲ್ಲಿ ಲಾಕ್ ಡೌನ್ ಮುಂದುವರಿಸಬೇಕೆ ಅಥವಾ ಬೇಡವೇ ಅನ್ನುವ ಕುರಿತು ಸಿಎಂ ಯಡಿಯೂರಪ್ಪ ಇಂದು ಡಾ. ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಕಾರ್ಯಪಡೆಯೊಂದಿಗೆ ಸಭೆ ನಡೆಸಿ, ಚರ್ಚೆ ನಡೆಸಿದರು. ಸಭೆಯಲ್ಲಿ ಕಾರ್ಯಪಡೆಯ ತಜ್ಞರು ಲಾಕ್ ಡೌನ್ ಮುಂದುವರಿಸುವ ಕುರಿತು ಸಲಹೆಯನ್ನು ನೀಡಿದ್ದಾರೆ.

ಲಾಕ್ ಡೌನ್ ನಂತರದಲ್ಲಿ ಕೊರೊನಾ ವೈರಸ್ ಸೋಂಕು ಇಳಿಕೆ ಯಾಗಿದೆ. ಆದರೆ ಹಳ್ಳಗಳಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿಲ್ಲ. ಜೊತೆಗೆ ಬ್ಲ್ಯಾಕ್ ಫಂಗಸ್ ನಿಂದ ಸಾವು ಸಂಭವಿಸುತ್ತಿದೆ. ಜೊತೆಗೆ ಕೊರೊನಾ ಮೂರನೇ ಅಲೆಯನ್ನು ತಡೆಗಟ್ಟುವ ಕುರಿತು ಕೈಗೊಳ್ಳ ಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಒಂದು ವಾರದೊಳಗೆ ಕಾರ್ಯಪಡೆ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತನ್ನ ವರದಿಯನ್ನು ಸಲ್ಲಿಸಲಿದೆ. ರಾಜ್ಯದ ಪ್ರಸ್ತುತ ಪರಿಸ್ಥಿತಿ ಹಾಗೂ ಆಕ್ಸಿಜನ್ ಹಂಚಿಕೆಯ ಕುರಿತು ಚರ್ಚೆ ನಡೆಸಲಾಯಿತು.