Karnataka Rain Alert : ಬಿಪರ್‌ಜಾಯ್‌ ಚಂಡಮಾರುತ ಪ್ರಭಾವ : ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು : (Karnataka Rain Alert) ಕರ್ನಾಟಕದಲ್ಲಿ ಬಿಪರ್‌ಜಾಯ್‌ ಚಂಡಮಾರುತ ಪ್ರಭಾವ ಬೀಡುವ ಸಂಭವಿದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಜೋರಾದ ಮಳೆ ಆಗಲಿದೆ. ಅದರಲ್ಲೂ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮಳೆಯಿಂದ ಭಾರೀ ಪ್ರಮಾಣದ ತೊಂದರೆ ಕಾದಿದೆ ಎನ್ನಲಾಗಿದೆ.

ಜೂನ್‌ 21ರವರೆಗೆ ಕರಾವಳಿಯಲ್ಲಿ ಮಾತ್ರ ದಿನಗಳ ಕಾಲ ಮಳೆ ಅಬ್ಬರಗೊಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚೆರಿಕೆ ನೀಡಿದೆ. ಆದರೆ ಈಗ ಮಾತ್ರ ಕರಾವಳಿ ಭಾಗದಲ್ಲಿ ಒಣಹವೆ ವಾತಾವರಣದಿಂದ ಕೂಡಿದೆ. ಮೊದಲ ಎರಡು ದಿನ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣವಾಗಿ ಮಳೆಯಾಗಲಿದೆ.

ಇನ್ನು ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ತುಮಕೂರು ಜಿಲ್ಲೆಗಳಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ ವ್ಯಾಪಕ ಮಳೆಯಾಗಲಿದ್ದು, ಈ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಇದನ್ನೂ ಓದಿ : Gruha Lakshmi Scheme : ಗೃಹಲಕ್ಷ್ಮೀ ಯೋಜನೆಗೆ ನಿಮ್ಮ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಬಹುದು : ಇಲ್ಲಿದೆ ಕಂಪ್ಲೀಟ್‌ ಮಾಹಿತಿ

ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಸೂಚಿಸಿದೆ. ಈ ಜಿಲ್ಲೆಗಳಲ್ಲಿ ಮುಂದಿನ ಐದು ದಿನವೂ ಗುಡುಗು ಗಾಳಿ ಸಹಿತ ಧಾರಾಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

Karnataka Rain Alert : Cyclone Biparjoy Impact : Heavy rain is likely in the state for the next 5 days

Comments are closed.