Karnataka Rain Alert : ಉಡುಪಿ, ದಕ್ಷಿಣ ಕನ್ನಡ, ಮಲೆನಾಡಲ್ಲಿ ಭಾರೀ ಮಳೆ : ಹಳದಿ ಅಲರ್ಟ್‌ ಘೋಷಣೆ

ಬೆಂಗಳೂರು : Karnataka Rain Alert :ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಾರ್ಚ್‌ 24ರ ವರೆಗೆ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಎರಡು ದಿನಗಳ ಕಾಲ ಹಳದಿ ಅಲರ್ಟ್‌ ಘೋಷಣೆ ಮಾಡಿದೆ. ಅಂಡಮಾನ್‌ ನಿಕೋಬಾರ್‌ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿದ್ದು, ಎರಡು ದಿನಗಳ ಕಾಲ ಮಳೆಯ ಆರ್ಭಟ ಹೆಚ್ಚಾಗಿರಲಿದೆ. ಅದ್ರಲ್ಲೂ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಸುರಿಯಲಿದೆ. ಇನ್ನು ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ.

ಕರಾವಳಿ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು ಸಂಜೆಯ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದ್ರಲ್ಲೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಕುರಿತು ಭಾರತೀಯ ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ. ಈ ಹಿನ್ನೆಲೆಯಲ್ಲೀಗ ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಬಾರಿ ಮಾರ್ಚ್‌ ತಿಂಗಳಿನಲ್ಲಿ ವಾಡಿಕೆಗಿಂತಲೂ ಅಧಿಕ ಪ್ರಮಾಣದಲ್ಲಿ ಮಳೆ ಸುರಿದಿದೆ. ಕಳೆದ ವರ್ಷ ಮಳೆಗಾಲದ ಆರಂಭದಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದ್ದರೂ ಕೂಡ ಸಪ್ಟೆಂಬರ್‌, ಅಕ್ಟೋಬರ್‌ ತಿಂಗಳಲ್ಲಿ ಮಳೆ ಆರ್ಭಟ ಜೋರಾಗಿತ್ತು. ಈ ಬಾರಿ ಇದೀಗ ಮಾರ್ಚ್‌ ಅಂತ್ಯದಲ್ಲಿಯೇ ಮಳೆಯ ಆರ್ಭಟ ಶುರುವಾಗಿದೆ.

ಇದನ್ನೂ ಓದಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ 60 ಕಿಮೀ ವ್ಯಾಪ್ತಿಯೊಳಗೆ ಟೋಲ್‌ ತೆರಿಗೆ ಇಲ್ಲ : ಸಚಿವ ನಿತಿನ್‌ ಗಡ್ಕರಿ

ಇದನ್ನೂ ಓದಿ : Hyderabad Fire Accident : ಭೀಕರ ಅಗ್ನಿದುರಂತ : 11 ಮಂದಿ ಸಜೀವ ದಹನ

(Karnataka Rain Alert next two days Yellow Alert Declare)

Comments are closed.