Karnataka Rain Updates : ಜೂನ್ 8 ರಂದು ರಾಜ್ಯದ ಕೆಲವೆಡೆ ಬಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : (Karnataka Rain Updates) ರಾಜ್ಯದಲ್ಲಿ ಕಳೆದ ರಾತ್ರಿ ಕರಾವಳಿಯಲ್ಲಿ ಜೋರಾದ ಗಾಳಿಯೊಂದಿಗೆ ಕೆಲವು ಕಡೆಗಳಲ್ಲಿ ಜೋರಾಗಿ ಮಳೆ ಸುರಿದಿದ್ದು, ಇನ್ನು ಕೆಲವೆಡೆ ಹನಿ ಹನಿ ಮಳೆಯಾಗಿರುತ್ತದೆ. ವಾಡಿಕೆಯಂತೆ ಮುಂದಿನ ವಾರದಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆ ಇರುತ್ತದೆ. ಇನ್ನು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜೂನ್‌ 8ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಸೂಚಿಸಿದೆ. ಅಷ್ಟೇ ಅಲ್ಲದೇ ಹಾಸನ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂದಿನ 24ಗಂಟೆಗಳಲ್ಲಿ ಜೋರಾದ ಬಿರುಗಾಳಿಯೊಂದಿಗೆ ಗಂಟೆಗೆ 40-45 ಕಿ.ಮೀ ಯಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇರುವುದರಿಂದ, ಮೀನುಗಾರರು ಸಮುದ್ರಕ್ಕೆ ಹೋಗದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಇನ್ನು ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : Shakti Smart Card : ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಸ್ಮಾರ್ಟ್‌ ಕಾರ್ಡ್‌ ಕಡ್ಡಾಯ : ಅರ್ಜಿ ಸಲ್ಲಿಸುವುದು ಹೇಗೆ ?

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ವಾಡಿಕೆಯಂತೆ ಮಾನ್ಸೂನ್‌ ಮಾರುತಗಳು ಕೇರಳದತ್ತ ಆಗಮಿಸುತ್ತಿದ್ದು, ಆಗ್ನೇಯ ಅರೇಬಿಯನ್‌ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವಾಗಿ ಅಭಿವೃದ್ಧಿ ಆಗಲಿರುವ ಚಂಡಮಾರುತದ ಪರಿಚಲನೆ ಇನ್ನೆರಡು ದಿನಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Karnataka Rain Updates : Heavy rain in many parts of the state on June 8, yellow alert announced

Comments are closed.