Karnataka Rainfall Alert‌ : ರಾಜ್ಯದ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ : ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ರಾಜ್ಯದ ಕರಾವಳಿ ಭಾಗದಲ್ಲಿ ಬೆಳ್ಳಂಬೆಳಗ್ಗೆ ಹಲವು ಕಡೆಗಳಲ್ಲಿ ಜೋರಾಗಿ, ಇನ್ನುಳಿದ ಕಡೆಗಳಲ್ಲಿ ಗುಡುಗಿನಿಂದ ಕೂಡಿದ (Karnataka Rainfall Alert‌) ಸಾಧಾರಣ ಮಳೆಯಾಗಿದೆ. ಮೋಡ ಕವಿದ ವಾತಾವರಣದಿಂದ ಕೂಡಿದ್ದು, ಭಾರೀ ಮಳೆ ಆಗುವ ಸಾಧ್ಯತೆ ಕೂಡ ಇದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ ಎನ್ನಲಾಗಿದೆ. ಹಾಗೆಯೇ ಈ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್‌ ಕೂಡ ಘೋಷಣೆಯಾಗಿದೆ.

ಇನ್ನು ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗುವ ಮೊದಲು ಒಂದಷ್ಟು ಜಿಲ್ಲೆಗಳಲ್ಲಿ ವರುಣ ಆರ್ಭಟ ಜೋರಾಗಿದ್ದು, ಇನ್ನುಳಿದ ಭಾಗದಲ್ಲಿ ಸಾಧಾರಣ ಮಳೆ ಆಗಿರುತ್ತದೆ. ಆದರೆ ಕರಾವಳಿ ಭಾಗದಲ್ಲಿ ಕಳೆದ ವರ್ಷದಷ್ಟು ಇನ್ನು ಮಳೆ ಸುರಿದಿರುವುದಿಲ್ಲ. ಹಾಗಾಗಿ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಕಷ್ಟವಾಗಿದೆ. ಪ್ರತಿ ವರ್ಷ ಈ ಹೊತ್ತಿನ ಒಳಗೆ ಕೃಷಿ ಚಟುವಟಿಕೆಗಳು ಆರಂಭಗೊಳ್ಳುತ್ತಿತ್ತು. ಈ ವರ್ಷ ಕೃಷಿಗೆ ಸಂಬಂಧಪಟ್ಟ ಚಟುವಟಿಕೆ ಭಾಗಶಃ ಕೂಡ ಶುರುವಾಗಿರುವುದಿಲ್ಲ.

ರಾಜ್ಯದ ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡುಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ. ಉಡುಪಿ, ಉತ್ತರಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ, ಒಂದೆರಡು ಕಡೆ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ : Mysore accident : ಮೈಸೂರು ಅಪಘಾತದಲ್ಲಿ 10 ಮಂದಿ ಸಾವು : ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬಾಳೆಹೊನ್ನೂರು, ಕಣಬರ್ಗಿ, ಸವಣೂರು, ಶ್ರೀಮಂಗಲ, ಗೋಣಿಕೊಪ್ಪಲು, ಹಾವೇರಿ, ಬೆಳಗಾವಿ ನಗರ, ಪೊನ್ನಂಪೇಟೆ, ಮೂಡಿಗೆರೆಯಲ್ಲಿ ಮಳೆಯಾಗಿದೆ. ರಾಜ್ಯುದಾದ್ಯಂತ ಬಿರುಗಾಳಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rainfall Alert : Heavy rain with thunder in 11 districts of south interior of the state : Yellow alert announced

Comments are closed.