Karnataka Rains : ಕರ್ನಾಟಕದಲ್ಲಿ ಮುಂದುವರಿದ ಮಳೆಯ ಅಬ್ಬರ ; ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : (Karnataka Rains ) ಕರ್ನಾಟಕದ ರಾಜ್ಯದಲ್ಲಿ ಮತ್ತೆ ಮಳೆ ಆರಂಭಗೊಂಡಿದೆ. ಅದರಲ್ಲಿಯೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರದಿಂದಲೇ ಮೋಡ ಕವಿದ ವಾತಾವರಣವಿದ್ದು, ಯಾದಗಿರಿ, ರಾಯಚೂರು, ಚಿತ್ರದುರ್ಗ, ಚಾಮರಾಜನಗರ, ಮಂಡ್ಯ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆ(Karnataka Rains)ಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

ಅಕ್ಟೋಬರ್ 5ರ ವರೆಗೆ ಉತ್ತರ ಕನ್ನಡ, ಶಿವಮೊಗ್ಗ, ಬೀದರ್, ಕಲಬುರ್ಗಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳು ಕಳೆದ ವರ್ಷದ ಮಳೆ ಕೊರತೆಯನ್ನು ಎದುರಿಸಿತ್ತು. ಆದರೆ ಗದಗ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ(Karnataka Rains)ಯಾಗಿದೆ.ಬೆಂಗಳೂರಿನಲ್ಲಿ ಕಳೆದ ಕೆಲವು ವಾರಗಳಿಂದ ಮಳೆ, ಚಳಿಯ ವಾತಾವರಣವಿದ್ದು, ಮುಂದಿನ ಕೆಲವು ದಿನಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಬುಧವಾರ ಕೂಡ ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬೆಳಗಾವಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಇದನ್ನೂ ಓದಿ : Uddhav Takre Ekant shinde : ಉದ್ಧವ್, ಶಿಂಧೆ ಬಣಕ್ಕೆ ಹೊಸ ಹೆಸರು, ಹೊಸ ಚಿಹ್ನೆ

ಇದನ್ನೂ ಓದಿ : Cow National animal : ಹಸುವನ್ನು ರಾಷ್ಟ್ರೀಯ ಪ್ರಾಣಿಯೆಂದು ಘೋಷಿಸಿ ; ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಬೆಳಗಾವಿ, ಗದಗ, ಯಾದಗಿರಿ ಜಿಲ್ಲೆಗಳಲ್ಲಿ ಹಲವು ದಿನಗಳ ಬಳಿಕ ಮತ್ತೆ ಮಳೆಯಾಗುತ್ತಿದೆ. ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಮಧ್ಯ ಕರ್ನಾಟಕದ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ.​ ಕರ್ನಾಟಕದಲ್ಲಿ ಹವಾಮಾನ ವೈಪರೀತ್ಯದಿಂದ ಮಳೆಯಾಗುತ್ತಿದೆ. ಮಳೆಯ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ : kannada must : ಪದವಿ ಶಿಕ್ಷಣದಲ್ಲಿ ಕನ್ನಡ ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ನಡೆಗೆ ಹಿನ್ನಡೆ

ತಮಿಳುನಾಡಿನ ಕರಾವಳಿಯ ಸಮುದ್ರದಲ್ಲಿ 1.8 ಮೀ. ಎತ್ತರದಲ್ಲಿ ಮೇಲ್ಮೈ ಸುಳಿಗಾಳಿ, ನೈರುತ್ಯ ಬಂಗಾಳಕೊಲ್ಲಿ ಮೇಲ್ಮೈ ಸುಳಿಗಾಳಿ, ಹಾಗೂ ರಾಜಸ್ಥಾನದಿಂದ ಈಶಾನ್ಯ ಭಾಗದವರೆಗೂ ತಗ್ಗಿದ ಸುಳಿಗಾಳಿ ಇರುವ ಪರಿಣಾಮ ರಾಜ್ಯಾದ್ಯಂತ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಜಿಲ್ಲೆಗಳಲ್ಲಿ ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅ.13ರ ವರೆಗೂ ಮಳೆ ಮುಂದುವರಿಯಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಇದನ್ನೂ ಓದಿ : Gyanvapi mosque: ಜ್ಞಾನವಾಪಿ ಮಸೀದಿ ವಿವಾದ ಇಂದು ಅಂತಿಮ ತೀರ್ಪು

ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಗಂಗಾ ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ವಿದರ್ಭ, ಛತ್ತೀಸ್‌ಗಢ, ರಾಯಲಸೀಮಾ, ಪುದುಚೇರಿ, ತಮಿಳುನಾಡುಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

(Karnataka Rains) Rains have started again in the state of Karnataka. In that too, the rain has increased in the districts of North Karnataka. The Meteorological Department (IMD) has said that there will be heavy rains for the next four days.

Comments are closed.