Karnataka rains: ರಾಜ್ಯದಲ್ಲಿ ಮುಂದುವರಿದ ಮಳೆ: ತಮಿಳುನಾಡಿನ ಶಾಲೆಗಳಿಗೆ ಇಂದು ರಜೆ ಘೋಷಣೆ

ಬೆಂಗಳೂರು: (Karnataka rains) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿಯಲಿದೆ.

ಬೆಂಗಳೂರಿ(Karnataka rains)ನಲ್ಲಿ ತುಂತುರು ಮಳೆ ಮುಂದುವರೆದಿದ್ದು, ಕರ್ನಾಟಕದ ಉತ್ತರ ಒಳನಾಡು, ಮಲೆನಾಡು, ಕರಾವಳಿಯ ಸುಮಾರು 20 ಜಿಲ್ಲೆಗಳಲ್ಲಿ ನ. 17ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಮಳೆ ಮುಂದುವರೆಯಲಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಇಂದೂ ಕೊಂಚ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕರಾವಳಿ ಜಿಲ್ಲೆಗಳು, ಮಲೆನಾಡು ಪ್ರದೇಶಗಳು, ಮೈಸೂರು, ಮಂಡ್ಯ, ಕೋಲಾರ, ರಾಮನಗರ ಮತ್ತು ತುಮಕೂರಿನಲ್ಲಿ ನಿರಂತರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : Heavy rain for 3 days: ರಾಜ್ಯದಲ್ಲಿ 3 ದಿನ ಭಾರೀ ಮಳೆ : ಹವಾಮಾನ ಇಲಾಖೆ ಸೂಚನೆ

ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಕೇರಳದ ಅಲ್ಲಲ್ಲಿ ತುಂತುರು ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕ, ತಮಿಳುನಾಡು, ಲಕ್ಷದ್ವೀಪ, ಲಡಾಖ್, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಹಿಮಾಚಲ ಪ್ರದೇಶದಲ್ಲಿ ಹಿಮಪಾತವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : Uniform color for schools: ಶಾಲೆಗಳಿಗೆ ಏಕರೂಪದ ಬಣ್ಣ :8,100 ಶಾಲಾ- ಕಾಲೇಜು ಕೊಠಡಿಗೆ ವಿವೇಕಾನಂದರ ಹೆಸರಿಡಲು ಶಿಕ್ಷಣ ಇಲಾಖೆ ಚಿಂತನೆ

ತಮಿಳುನಾಡಿನಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿಂದೆಯೂ ಕೂಡ ತಮಿಳುನಾಡಿನಲ್ಲಿ ಮಳೆಯು ಅಬ್ಬರಿಸಿದ್ದು, ಮಳೆಗೆ ತಮಿಳುನಾಡಿನ ಜನರು ಹೈರಾಣಾಗಿದ್ದರು. ಶಾಲಾ ಕಾಲೇಜುಗಳಿಗೆ ಎರಡು ದಿನಗಳ ಕಾಲರಜೆಯನ್ನು ಘೋಷಿಸಲಾಗಿತ್ತು. ಇಂದೂ ಕೂಡ ತಮಿಳುನಾಡಿನಲ್ಲಿ ಮಳೆ ಅಬ್ಬರ ಜೋರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

(Karnataka rains) It is raining in most of the districts of Karnataka due to the collapse of air pressure in the Bay of Bengal, and many districts including Bengaluru are likely to receive heavy rains from today for 2 days. Today there is a possibility of moderate rain in many parts of the coast and some parts of the northern interior will receive rain.

Comments are closed.