Karnataka Rains : ಕರ್ನಾಟಕದಲ್ಲಿ ಮುಂದುವರಿದ ಮಳೆ : ಇನ್ನೂ 2 ದಿನ ಸಾಧಾರಣ ಮಳೆಯ ಸಾಧ್ಯತೆ

ಬೆಂಗಳೂರು : (Karnataka Rains)ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ 2 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು ,ಕರ್ನಾಟಕದ ಬಹುತೇಕ ಕಡೆ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇನ್ನೆರಡು ದಿನ ಕರ್ನಾಟಕದ ಬೆಂಗಳೂರು, ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಸಾಧಾರಣ ಮಳೆಯಾಗಲಿದ್ದು, ಇಂದಿನಿಂದ ನವೆಂಬರ್ 9ರವರೆಗೆ ರಾಜ್ಯಾದ್ಯಂತ(Karnataka Rains) ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ .

ಮಲೆನಾಡು, ಉತ್ತರ ಒಳನಾಡು, ಕರಾವಳಿ ಸೇರಿದಂತೆ ಬೆಂಗಳೂರಿನ ಕೆಲವು ಭಾಗದಲ್ಲಿ ಇಂದು ಕೊಂಚ ಮಳೆಯಾಗುವ(Karnataka Rains) ಸಾಧ್ಯತೆಯಿದ್ದು, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ. ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲೂ ಕೂಡ ಮಳೆ ಮುಂದುವರೆಯಲಿದೆ.

ಇದನ್ನೂ ಓದಿ : The secret of Chandrasekhar’s death : ಪೊಲೀಸರ ಕೈ ಸೇರಿದ ಡಯಾಟಮ್ ವರದಿ : ಬಯಲಾಗುತ್ತಾ ಹೊನ್ನಾಳಿ ಚಂದ್ರಶೇಖರ್ ಸಾವಿನ ರಹಸ್ಯ ?

ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು , ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಬೆಳಗಾವಿ, ಹಾವೇರಿ, ರಾಯಚೂರಿನಲ್ಲಿ ಹಗುರ ಮಳೆಯಾಗಲಿದ್ದು , ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ ನ. 9ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ನವೆಂಬರ್‌ 9ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಇದನ್ನೂ ಓದಿ : BBMP encroachment : ರಾಜಕಾಲುವೆ ಆಯ್ತು ಈಗ ಬೀದಿ ಬದಿ ವ್ಯಾಪಾರಿಗಳ ಸರದಿ: ಒತ್ತುವರಿ ತೆರವಿಗೆ ಸಜ್ಜಾದ ಬಿಬಿಎಂಪಿ

ಇದನ್ನೂ ಓದಿ : Tumakuru Death: ಚಿಕಿತ್ಸೆ ಸಿಗದೇ ಗರ್ಭಿಣಿ, ಅವಳಿ ಮಕ್ಕಳ ಸಾವಿನಿಂದ ಎಚ್ಚೆತ್ತ ಸರ್ಕಾರ: ಚಿಕಿತ್ಸೆ ನಿರಾಕರಿಸಿದರೆ ಕ್ರಿಮಿನಲ್ ಕೇಸ್

ಆಂಧ್ರಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಗುಜರಾತ್, ಹರಿಯಾಣ, ಮಧ್ಯಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು , ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ ಮತ್ತು ಕೇರಳ ಮತ್ತು ಮಾಹೆಯಲ್ಲಿ ಗುಡುಗು, ಮಿಂಚು ಸಹಿತ ಮಳೆಯು ಮುಂದುವರಿಯುವ ಸಾಧ್ಯತೆಯಿದೆ. ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಕಷ್ಟು ಮಳೆ ಬೀಳುವ ಸಾಧ್ಯತೆಯಿದ್ದು , ನವೆಂಬರ್ 11ರಂದು ತಮಿಳುನಾಡು-ಪುದುಚೇರಿ-ಕಾರೈಕಲ್‌ನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ನವೆಂಬರ್ 8ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು , ಉತ್ತರ ಪಂಜಾಬ್ ಮತ್ತು ಉತ್ತರ ಹರಿಯಾಣದಲ್ಲಿ ನವೆಂಬರ್ 9 ಮತ್ತು10 ರಂದು , ಉತ್ತರ ರಾಜಸ್ಥಾನದಲ್ಲಿ ನವೆಂಬರ್ 8ರಂದು ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 11 ರಿಂದ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಆಂಧ್ರಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇಂದು ಮತ್ತು ನವೆಂಬರ್ 9ರಿಂದ 10ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಹಿಮಪಾತ ಸಂಭವಿಸುವ ಸಾಧ್ಯತೆಯಿದೆ.

(Karnataka Rains) Due to the formation of surface cyclone in the Bay of Bengal, there is a possibility of moderate rains across the state including the coast and hilly areas for 2 days from today. Meteorological department has predicted that there will be moderate rain in some parts of Bengaluru, Malenadu, Coastal and North Karnataka in the next two days and from today till November 9 (Karnataka Rains) will continue across the state.

Comments are closed.