ಸೋಮವಾರ, ಏಪ್ರಿಲ್ 28, 2025
Homekarnatakaಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ

- Advertisement -

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ ಕಳೆದ ಹಲವು ದಿನಗಳಿಂದ (Karnataka rains) ವರುಣ ಆರ್ಭಟ ಜೋರಾಗಿದ್ದು, ಬೆಳಿಗ್ಗೆಯಿಂದ ಸಂಜೆವರೆಗೂ ಬಿಸಿಲಿನ ವಾತಾವರಣ ಇರುತ್ತದೆ. ಆದರೆ ಸಂಜೆಯಾಗುತ್ತಿದ್ದಂತೆ ಮಳೆರಾಯನ ಆರ್ಭಟದಿಂದ ಸಿಲಿಕಾನ್‌ ಸಿಟಿಯ ಜನರು ತತ್ತರಿಸಿ ಹೋಗಿದ್ದಾರೆ. ಇನ್ನು ರಾಜ್ಯದಲ್ಲಿ ಕರಾವಳಿ, ದಕ್ಷಿಣ ಒಳನಾಡಿನಲ್ಲಿ 4 ದಿನ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೆಲವೆಡೆ ಕೃಷಿ ಸಂಬಂಧಿಸಿದ ಚಟುವಟಿಕೆಗಳು ಪ್ರಾರಂಭವಾಗಿದ್ದು, ರೈತರು ಮುಂಗಾರು ಮಳೆಗಾಗಿ ಕಾಯುತ್ತಿದ್ದಾರೆ. ಮಳೆ ಅವಶ್ಯಕತೆ ಇರುವಲ್ಲಿ ಬರದೇ ಬೇರೆ ಕಡೆ ಸುರಿಯುವುದ್ದರಿಂದ ಜನರು ಆತಂಕಗೊಂಡಿದ್ದಾರೆ. ಹೀಗಾಗಿ ಕೃಷಿ ಚುಟುವಟಿಕೆ ಆರಂಭಿಸಲು ಸರಿಯಾದ ರೀತಿಯಲ್ಲಿ ಮಳೆರಾಯನ ಆಗಮನವಿಲ್ಲದೇ ಆತಂಕಗೊಂಡಿದ್ದಾರೆ.

ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡುಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ. ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಬಿಸಿಲಿನಿಂದ ಕೂಡಿದ ವಾತಾವರಣ ಇರಲಿದೆ.

ಹುಂಚದಕಟ್ಟೆ, ಕಮ್ಮರಡಿ, ಜಯಪುರ, ಶ್ರವಣಬೆಳಗೊಳ, ಧರ್ಮಸ್ಥಳ, ಅರಕಲಗೂಡು, ಬೆಂಗಳೂರು, ಗೋಪಲ್‌ನಗರ, ನಾಪೋಕ್ಲು, ಬೆಳ್ತಂಗಡಿ, ಚನ್ನಗಿರಿ, ಹೊಸದರ್ಗ, ಹಳಿಯಾಳ, ಮಹಾಲಿಂಗಪುರ, ಲೋಂಡಾ, ದೇವರಹಿಪ್ಪರಗಿ, ಕನಕಪುರ ಬಾಳೆಹೊನ್ನೂರು, ರಾಮನಗರ, ಬೇಲೂರು ಕೊಟ್ಟೂರಿನಲ್ಲಿ ಬಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ವರದಿ ಸೂಚಿಸಿದೆ.

ಇದನ್ನೂ ಓದಿ : ಸಿದ್ದರಾಮಯ್ಯರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ : ಬಿಜೆಪಿ ಶಾಸಕ ಹರೀಶ್‌ ಪೂಂಜಾ ವಿವಾದಾತ್ಮಕ ಹೇಳಿಕೆ

ಇದನ್ನೂ ಓದಿ : ಜೂನ್‌ 1 ರಿಂದ ಮೀನುಗಾರಿಕೆ ನಿಷೇಧ ; 2 ತಿಂಗಳು, ಕರಾವಳಿಯಲ್ಲಿ ಮೀನುಗಾರಿಕೆ ಬ್ರೇಕ್‌

ಆದರೆ ಕರಾವಳಿ ಭಾಗಕ್ಕೆ ವಾಡಿಕೆಯಂತೆ ಕೇರಳದಲ್ಲಿ ಮುಂಗಾರು ಮಳೆಯಾದ ನಂತರ ಮಳೆಯಾಗಲಿದೆ. ಅಂದರೆ ಜೂನ್‌ ತಿಂಗಳ ಎರಡನೇ ವಾರದಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಈಗಾಗಲೇ ಕರಾವಳಿ ಭಾಗದ ಹೆಚ್ಚಿನ ರೈತರು ಮುಂದಿನ ಭತ್ತದ ಬೆಳೆಗಾಗಿ ಬಿತ್ತನೆ ಕೆಲಸದ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ವರುಣನ ಆಗಮನಕ್ಕಾಗಿ ಮುಗಿಲು ನೋಡುತ್ತಿದ್ದಾರೆ. ನಿರೀಕ್ಷೆಯಂತೆ ಮಾನ್ಸೂನ್‌ ಮಾರುತಗಳ ಆಗಮನ ಒಂದಾರೆ ಮುಂದಿನ ವರ್ಷ ಉತ್ತಮ ಫಸಲು ಪಡೆಯಬಹುದಾಗಿದೆ.

Karnataka rains: Heavy rains in Karnataka for the next 4 days

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular