Red Alert School Holiday ಮಂಗಳೂರು : ಕರಾವಳಿ ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದ, ಭಾರತೀಯ ಹವಾಮಾನ ಇಲಾಖೆ ಬಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಜೂನ್ 27 ರಂದು ರೆಡ್ ಅಲರ್ಟ್ (Red Alert) ಘೋಷಣೆ ಮಾಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲೆಗಳಿಗೆ ರಜೆ ( School Holiday) ಘೋಷಣೆ ಮಾಡಿ ಜಿಲ್ಲಾಧಿಕಾರಿಗಲು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂನ್ 26 ರಂದು ಭಾರೀ ಮಳೆ ಸುರಿದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ಅಲ್ಲದೇ ನಾಳೆಯೂ ಮಳೆ ಮುಂದುವರಿಯಲಿದೆ ಈ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ರೆಡ್‌ಅಲರ್ಟ್ ಘೋಷಣೆ ಮಾಡಿದೆ.
ಇದನ್ನೂ ಓದಿ : Sleeping Tips : ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದ್ರೆ ಏನಾಗುತ್ತೆ ? ಯಾವ ದಿಕ್ಕಿಗೆ ಮಲಗೋದು ಸೂಕ್ತ, ಇಲ್ಲಿದೆ ವೈಜ್ಞಾನಿಕ ಕಾರಣ
ಉಡುಪಿ ಜಿಲ್ಲೆಯಲ್ಲಿಯೂ ಭಾರೀ ಮಳೆ
ಉಡುಪಿ ಜಿಲ್ಲೆಯಲ್ಲಿಯೂ ಮುಂಜಾನೆಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಸಮುದ್ರ ಹಾಗೂ ನದಿ ಪಾತ್ರದಲ್ಲಿನ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆಯನ್ನು ನೀಡಿದೆ. ಮುಂದಿನ ಕೆಲವು ಗಂಟೆಗಳ ಕಾಲ ಉಡುಪಿ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಸದ್ಯಕ್ಕೆ ಶಾಲೆಗಳಿಗೆ ಯಾವುದೇ ರಜೆ ಘೋಷಣೆ ಮಾಡಿಲ್ಲ, ಪರಿಸ್ಥಿತಿ ನೋಡಿಕೊಂಡು ರಜೆಯ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ : Karnataka New Schools : ಹೊಸ ಶಾಲೆಗಳಿಗೆ ಇನ್ನಿಲ್ಲದ ಬೇಡಿಕೆ: ಅನುಮತಿ ಕೋರಿ ಸಲ್ಲಿಕೆಯಾಗಿದೆ ಸಾವಿರಾರು ಅರ್ಜಿ
ಮುಂದಿನ ನಾಲ್ಕು ದಿನ ಬಾರೀ ಮಳೆ
ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ರಾಜ್ಯದ ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ರಾಜ್ಯದ ಉಡುಪಿ ಜಿಲ್ಲೆಯ ಕಾರ್ಕಳ, ಕೋಟ, ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ, ಧರ್ಮಸ್ಥಳ, ಪಣಂಬೂರು, ಮಂಗಳೂರು, ಉಪ್ಪಿನಂಗಡಿ, ಪುತ್ತೂರು, ಬೆಳ್ತಂಗಡಿಯಲ್ಲಿ ಭಾರೀ ಮಳೆಯಾಗಿದ್ದು, ಚಿಕಮಗಳೂರು ಜಿಲ್ಲೆಯ ಕೊಪ್ಪ, ಜಯಪುರ, ಕಮ್ಮರಡಿ, ಬಾಳೆಹೊನ್ನೂರು, ಕೊಟ್ಟಿಗೆಹಾರ, ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಯಲ್ಲಾಪುರ, ಕೊಡಗು ಜಿಲ್ಲೆಯ ಭಾಗಮಂಡಲ, ಸೋಮವಾರ ಪೇಟೆಯಲ್ಲಿ ಅತ್ಯಧಿಕ ಮಳೆ ಸುರಿದಿದೆ.
Karnataka School Holiday Dakshin Kannada Mangalore Heavy Rain Red Alert Declared