ಭಾನುವಾರ, ಏಪ್ರಿಲ್ 27, 2025
Homekarnatakaಶಕ್ತಿ ಯೋಜನೆ ವಿಸ್ತರಣೆ, ಖಾಸಗಿ ಬಸ್‌ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣ

ಶಕ್ತಿ ಯೋಜನೆ ವಿಸ್ತರಣೆ, ಖಾಸಗಿ ಬಸ್‌ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣ

- Advertisement -

Shakti Yojana Extension : ರಾಜ್ಯ ಸರಕಾರ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಕರ್ನಾಟಕ ಸಾರಿಗೆ ಇಲಾಖೆಯ ನಾಲ್ಕು ಕರ್ನಾಟಕ ಸಾರಿಗೆ ನಿಗಮದ ರಾಜ್ಯದ ಸರಕಾರಿ ಸಾಮಾನ್ಯ ಬಸ್ಸುಗಳಲ್ಲಿ (Govt Bus Free Travel)  ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದೀಗ ಖಾಸಗಿ ಬಸ್ಸುಗಳಲ್ಲಿ (Private Bus Free Travel) ಉಚಿತ ಪ್ರಯಾಣಿಸಲು ಅವಕಾಶ ಕಲ್ಪಿಸುವಂತೆ ಸರಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

Karnataka Shakti Yojana Extension free travel for women even in private buses
Image Credit to Original Source

ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶಕ್ತಿ ಯೋಜನೆ ಜಾರಿಯಲ್ಲಿದೆ. ಇದರ ಬೆನ್ನಲ್ಲೇ ಖಾಸಗಿ ಬಸ್‌ಗಳಿಗೂ ಶಕ್ತಿ ಯೋಜನೆಯನ್ನು ವಿಸ್ತರಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆಯ ಬೆನ್ನಲ್ಲೇ ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಯ ಕಾರ್ಕಳದ ಖಾಸಗಿ ಬಸ್ ಮಾಲೀಕ ಶರತ್ ಶೆಟ್ಟಿ ಅವರು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ಪೀಠ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಲ್ಲದೇ ಮುಂದಿನ ಎರಡು ತಿಂಗಳ ಒಳಗಾಗಿ ಕಾನೂನು ಪ್ರಕಾರ ಖಾಸಗಿ ಬಸ್‌ಗಳಿಗೆ ಶಕ್ತಿ ಯೋಜನೆಯ ಜಾರಿಗೊಳಿಸುವಂತೆ ಸರಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ.

ಇದನ್ನೂ ಓದಿ : 10 ಲಕ್ಷ ಸಾಲ 3 ಲಕ್ಷ ಸಬ್ಸಿಡಿ, ಅತ್ಯಂತ ಕಡಿಮೆ ಬಡ್ಡಿಗೆ PM ನರೇಂದ್ರ ಮೋದಿ ಸರಕಾರದಿಂದ ಹೊಸ ಯೋಜನೆ

ಶಕ್ತಿ ಯೋಜನೆ ಜಾರಿಯ ಬೆನ್ನಲ್ಲೇ ಖಾಸಗಿ ಬಸ್‌ ಮಾಲೀಕರು ಸಂಕಷ್ಟದಲ್ಲಿ ಇದ್ದಾರೆ. ಹೀಗಾಗಿ ಈ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಣೆಯನ್ನು ಮಾಡಬೇಕು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪುತ್ತಿಗೆ ರಮೇಶ್‌ ಅವರು ವಾದ ಮಂಡಿಸಿದ್ದರು.

ಕರ್ನಾಟಕದಲ್ಲಿ ಜೂನ್‌ 11 2023 ರಲ್ಲಿ ಶಕ್ತಿ ಯೋಜನೆಯನ್ನು ಆರಂಭಿಸಲಾಗಿದೆ. ಕರ್ನಾಟಕದ ನಿವಾಸಿಗಳಾಗಿರುವ ಎಲ್ಲಾ ಮಹಿಳೆಯರು ಕೂಡ ಶಕ್ತಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಸರಕಾರ ಶಕ್ತಿ ಸ್ಮಾರ್ಟ್‌ ಕಾರ್ಡ್‌ ಪಡೆದುಕೊಂಡು ಉಚಿತ ಪ್ರಯಾಣ ಬೆಳೆಸುವಂತೆ ಸೂಚನೆಯನ್ನು ನೀಡಿದೆ.

ಇದನ್ನೂ ಓದಿ : ಯುವನಿಧಿ ಯೋಜನೆ : ಅರ್ಜಿ ಸಲ್ಲಿಸಿದ ಎಲ್ಲರಿಗೂ ಸಿಗಲ್ಲ ಯುವನಿಧಿ ಹಣ, ಇಲ್ಲಿದೆ ಯುವನಿಧಿ ಅರ್ಹತಾ ಪಟ್ಟಿ

ಶಕ್ತಿ ಸ್ಮಾರ್ಟ್‌ ಕಾರ್ಡ್‌ ಇನ್ನೂ ಜಾರಿಗೆ ಬಾರದ ಹಿನ್ನೆಲೆಯಲ್ಲಿ ಸದ್ಯ ಆಧಾರ್‌ ಕಾರ್ಡ್‌, ಓಟರ್‌ ಐಡಿ ಸೇರಿದಂತೆ ಸರಕಾರದ ದಾಖಲಾತಿಗಳನ್ನು ತೋರಿಸಿ ಉಚಿತ ಪ್ರಯಾಣಕ್ಕೆ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಬಿಎಂಟಿಸಿ, ಕೆಎಸ್‌ ಆರ್‌ಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಾಮಾನ್ಯ ಸರಕಾರಿ ಬಸ್ಸುಗಳಲ್ಲಿ ಮಾತ್ರವೇ ಉಚಿತ ಪ್ರಯಾಣಕ್ಕೆ ಅವಕಾಶವಿದೆ.

Karnataka Shakti Yojana Extension free travel for women even in private buses
Image Credit to Original Source

ಆದರೆ ರಾಜಹಂಸ, ಐರಾವತ, ಅಂಬಾರಿ, ಫ್ಲೈಬಸ್‌ ಸೇರಿದಂತೆ ಲಕ್ಸುರಿ ಹಾಗೂ ಹವಾನಿಯಂತ್ರಿತ ಬಸ್ಸುಗಳಲ್ಲಿ ಮಹಿಳೆಯರಿಗೆ ಪ್ರಯಾಣಕ್ಕೆ ಅವಕಾಶವಿಲ್ಲ. ಸರಕಾರದ ಶಕ್ತಿ ಯೋಜನೆಯ ಬೆನ್ನಲ್ಲೇ ಸರಕಾರಿ ಬಸ್ಸುಗಳಲ್ಲಿ ಪ್ರಯಾಣಿಕರ ಓಡಾಟದ ಸಂಖ್ಯೆಯೂ ಏರಿಕೆಯಾಗಿದೆ. ಖಾಸಗಿ ಬಸ್‌ ಗಳನ್ನು ಬಿಟ್ಟು ಮಹಿಳೆಯರು, ಪುರುಷರು ಸರಕಾರಿ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದಾರೆ.

ಇದನ್ನೂ ಓದಿ : ತೆಲಂಗಾಣ ಬೆನ್ನಲ್ಲೇ ಕರ್ನಾಟಕದಲ್ಲೂ ರದ್ದಾಗುತ್ತಾ ಗೃಹಲಕ್ಷ್ಮೀ ಯೋಜನೆ ? ರಾಜ್ಯ ಸರಕಾರದಿಂದ ಮಹತ್ವದ ಆದೇಶ

Karnataka Shakti Yojana Extension free travel for women even in private buses

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular