CM Meeting Highlights : ಟೆಸ್ಟಿಂಗ್ ಹೆಚ್ಚಳವೂ ಇಲ್ಲ: ಸದ್ಯ ನಿಯಮದಲ್ಲಿ ಸಡಿಲಿಕೆಯೂ ಇಲ್ಲ: ಇಲ್ಲಿದೆ ಸಿಎಂ ಮೀಟಿಂಗ್ ಹೈಲೈಟ್ಸ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಹಾಗೂ ಓಮೈಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ವಿಶೇಷ ಸಭೆ ನಡೆಸಿದ್ದು, ಕೊವೀಡ್ ತಾಂತ್ರಿಕ ಸಮಿತಿ, ಸಚಿವರ ಜೊತೆ ಸಿಎಂ ಚರ್ಚೆ (CM Meeting Highlights) ನಡೆಸಿದ್ದಾರೆ.

ಸಿಎಂ ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್, ಆರೋಗ್ಯ ಸಚಿವ ಸುಧಾಕರ್ ಕೂಡ ಪಾಲ್ಗೊಂಡಿದ್ದರು. ಇನ್ನು ರಾಜ್ಯದಲ್ಲಿ ಕೊರೋನಾ ಹಾಗೂ ಓಮೈಕ್ರಾನ್ ಹೆಚ್ಚಾಗಿದ್ದರೂ ಕೂಡ ಆಸ್ಪತ್ರೆಗೆ ದಾಖಲಾಗುವವರ ಹಾಗೂ ಸಾವಿನ ಸಂಖ್ಯೆ ಕಡಿಮೆ‌ಇದೆ. ಹೀಗಾಗಿ ಸದ್ಯ ರೂಲ್ಸ್ ಗಳಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಲು ನಿರ್ಧರಿಸಲಾಗಿದ್ದು ಶುಕ್ರವಾರ ರಾಜ್ಯಕ್ಕೆ ನಿಯಮ ಸಡಿಲಿಕೆ ಶುಭ ಸುದ್ದಿ ಸಿಗಲಿದೆ ಎಂದು ನಿರ್ಲಕ್ಷಿಸಲಾಗುತ್ತಿದೆ. ಸಿಎಂ ಸಭೆಯಲ್ಲಿ ಚರ್ಚಿಸಿ ನಿರ್ಣಯಿಸಲಾದ ನಿಯಮಗಳೇನು ಅನ್ನೋದನ್ನು ನೋಡೋದಾದರೇ ಇಲ್ಲಿದೆ ಮಾಹಿತಿ.

  • ಬೆಂಗಳೂರಿನಲ್ಲಿ ಒಪಿಡಿಗಳಿಗೆ ಹೆಚ್ಚಿನ ಗಮನ ಕೊಡಲು ಸೂಚಿಸಲಾಯಿತು. ಹೆಚ್ಚು ಸಿಬ್ಬಂದಿ ನಿಯೋಜಿಸಲು ಸಿಎಂ ಸೂಚಿಸಿದ್ದಾರೆ.
  • ಜನ ಟ್ರಯಾಜಿಂಗ್ ಗೆ ದಾಖಲಾಗುವುದನ್ನು ನಿಯಂತ್ರಿಸಲು ಸಲಹೆ ನೀಡಿದ್ದಾರೆ.
  • ಹೋಮ್ ಐಸೊಲೇಷನ್ ಕಾಲ್ಸ್ ಹೆಚ್ಚಿಸಲು ಸೂಚಿಸಲಾಯಿತು. ಕೊ-ಮಾರ್ಬಿಡಿಟಿ ಇರುವವರಿಗೆ ದಿನಕ್ಕೆ ಒಂದು ಬಾರಿ ಕರೆ ಮಾಡಿ ಅವರ ಆರೋಗ್ಯ ಸ್ಥಿತಿ ಅವಲೋಕಿಸಬೇಕು ಹಾಗೂ ವಿಶ್ವಾಸ ಮೂಡಿಸಬೇಕು ಎಂದು ಸಿಎಂ ಆದೇಶಿಸಿದ್ದಾರೆ.
  • ಸೋಂಕಿತರಿಂದ ಮನೆಯವರಿಗೆ ಹರಡದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚಿಸಿದ್ದಾರೆ.
  • ಔಷಧಿ ಕಿಟ್ ಗಳನ್ನು ಮನೆಗಳಿಗೆ ಪರಿಣಾಮಕಾರಿಯಾಗಿ ತಲುಪಿಸಲು ಕ್ರಮಕೈಗೊಳ್ಳುವಂತೆ ಸೂಚನೆ.
  • ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಕಾರ್ಯನಿರ್ವಹಿಸುವ ಮೂಲಕ ಜನರಲ್ಲಿರುವ ನಕಾರಾತ್ಮಕ ಮನೋಭಾವವನ್ನು ತೊಡೆಯಲು ಸಲಹೆ ನೀಡಿದ್ದಾರೆ.
  • ಸ್ಥಳೀಯ ವೈದ್ಯರು ಕನ್ಸಲ್ಟೇಷನ್ ಮಾಡುವಂತಾಗಬೇಕು.
  • ಸೋಂಕಿತ ಮಕ್ಕಳ ಕುರಿತು, ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಪೋಷಕರಿಗೆ ಧೈರ್ಯ ಹೇಳಬೇಕು. ಔಷಧಿ ಕಿಟ್ ಗಳನ್ನು ನೀಡಬೇಕು. ಮಕ್ಕಳಿಗೆ ಪ್ರತ್ಯೇಕ ಔಷಧಿ ಕಿಟ್ ಸಿದ್ಧಪಡಿಸಬೇಕು.
  • ಗ್ರಾಮೀಣ ಪ್ರದೇಶದಲ್ಲಿ ಜನರಲ್ಲಿ ವಿಶ್ವಾಸ ಮೂಡಿಸಬೇಕು.
  • ಆಕ್ಸಿಜನ್ ಪ್ಲಾಂಟ್ಗಳನ್ನು ಸಜ್ಜುಗೊಳಿಸಿ, ಸಿಬ್ಬಂದಿ, ಇಂಧನ ಮೊದಲಾದವುಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚಿಸಲಾಗಿದೆ.
  • ಆಸ್ಪತ್ರೆಗಳಲ್ಲಿ ಜನರೇಟರುಗಳ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದರು.
  • ಮಕ್ಕಳು ಮತ್ತು 60 ವರ್ಷ ಮೇಲ್ಪಟ್ಟವರ ಕುರಿತು ಹೆಚ್ಚಿನ ನಿಗಾ ವಹಿಸಬೇಕು.
  • ಲಸಿಕೆ ಅಭಿಯಾನ ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು.
  • ಔಷಧಿಗಳನ್ನು ಕೂಡಲೇ ಒದಗಿಸಬೇಕು. ಅವುಗಳನ್ನು ಸಕಾಲದಲ್ಲಿ ಆಸ್ಪತ್ರೆಗಳಿಗೆ ತಲುಪಿಸಲು ಕ್ರಮ ವಹಿಸಲು ಸೂಚಿಸಿದರು.
  • ಜನರು ಕೋವಿಡ್-ಸೂಕ್ತ ನಡವಳಿಕೆಯನ್ನು ಅನುಸರಿಸುವ ಬಗ್ಗೆ ಮಾಧ್ಯಮಗಳಲ್ಲಿ ಜಾಗೃತಿ ಮೂಡಿಸಲು ತೀರ್ಮಾನಿಸಲಾಯಿತು.
  • ಭಾರತ ಸರ್ಕಾರದ ನಿಯಮಾವಳಿಗಳಂತೆ ಐ.ಸಿ.ಎಂ.ಆರ್ ಸೂಚಿಸಿರುವ ಶ್ರೇಣೀಕೃತ ಮಾದರಿಯಲ್ಲಿ ಪರೀಕ್ಷೆ ನಡೆಸಲು ಅನುಸರಿಸಲು ಸೂಚಿಸಿದ್ದಾರೆ
  • ಎರಡನೇ ಡೋಸ್ ಲಸಿಕೆ ಪಡೆದವರ ಸಂಖ್ಯೆ ಕಡಿಮೆ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಸಿಇಒ ಗಳೊಂದಿಗೆ ವಿಡಿಯೋ ಸಂವಾದ ನಡೆಸಲು ನಿರ್ಧರಿಸಲಾಯಿತು.
  • 15 ರಿಂದ 18 ವರ್ಷ ವಯೋಮಾನದವರಿಗೆ ಲಸಿಕಾ ಅಭಿಯಾನವನ್ನು ಚುರುಕುಗೊಳಿಸಲು ಸೂಚಿಸಿದ್ದಾರೆ.

ಒಟ್ಟಿನಲ್ಲಿ ಸದ್ಯ ಸಿಎಂ ಹಾಗೂ ತಜ್ಞರ ಸಭೆ ಜನರ ಆತಂಕವನ್ನು ದೂರ ಮಾಡಿದ್ದು ಶುಕ್ರವಾರ ಸಭೆಯಲ್ಲಿ ಯಾವ ರೀತಿ ಕ್ರಮಕೈಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ : ಭಾರತೀಯ ಸ್ಟೇಟ್‌ ಬ್ಯಾಂಕ್ ಗ್ರಾಹಕರಿಗೆ ಸಂತಸದ ಸುದ್ದಿ! ಫಿಕ್ಸೆಡ್‌ ಡೆಪಾಸಿಟ್‌ ಬಡ್ಡಿದರ ಏರಿಕೆ

ಇದನ್ನೂ ಓದಿ : ಲಾಕ್‌ಡೌನ್‌ ಇಲ್ಲ, ನೈಟ್‌ ಕರ್ಪ್ಯೂ ಮುಂದುವರಿಕೆ, ವೀಕೆಂಡ್‌ ಕರ್ಪ್ಯೂ ಬಗ್ಗೆ ಶುಕ್ರವಾರ ನಿರ್ಧಾರ : ಸಚಿವ ಆರ್.‌ ಅಶೋಕ್‌

(There is no increase in Covid-19 testing, no relaxation in the present rule: Here’s CM Meeting Highlights)

Comments are closed.