ಸಾರಿಗೆ ನೌಕರರ ಬಂದ್ ರಸ್ತೆಗೆ ಇಳಿದ ಸರಕಾರಿ ಬಸ್ : ಕರ್ನಾಟಕಕ್ಕೆ ತಟ್ಟುತ್ತಾ ಬಂದ್ ಬಿಸಿ

ಬೆಂಗಳೂರು : ಕರ್ನಾಟಕದಲ್ಲಿ ಸಾರಿಗೆ ನೌಕರರ ಬಂದ್ ರಾಜ್ಯದಾದ್ಯಂತ ತೀವ್ರ ಪರಿಣಾಮ ಬೀರಲಿದೆ. ಬಸ್‌ಗಳನ್ನು ರಸ್ತೆ ಇಳಿಸದೇ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ಮತ್ತು ಇತರ ಪ್ರಾದೇಶಿಕ ನಿಗಮಗಳ ನೌಕರರು ಮುಷ್ಕರ ನಡೆಸುತ್ತಿದ್ದಾರೆ.
ರಾಜ್ಯದಾದ್ಯಂತ KSRTC ಮತ್ತು BMTC ಬಸ್ ಸೇವೆಗಳು ಸ್ಥಗಿತಗೊಂಡಿದ್ದು, ಲಕ್ಷಾಂತರ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಪ್ರತಿದಿನ ಬಸ್ ಮೇಲೆ ಅವಲಂಬಿತರಾಗಿರುವ ವಿದ್ಯಾರ್ಥಿಗಳು, ನೌಕರರು ಹಾಗೂ ದಿನಗೂಲಿ ಕಾರ್ಮಿಕರಿಗೆ ತೀವ್ರ ಸಮಸ್ಯೆ ಎದುರಾಗಿದೆ.
ಸಾರ್ವಜನಿಕರು ಆಟೋರಿಕ್ಷಾ, ಟ್ಯಾಕ್ಸಿಗಳು, ಮತ್ತು ಖಾಸಗಿ ಬಸ್‌ಗಳ ಮೇಲೆ ಹೆಚ್ಚಾಗಿ ಅವಲಂಬಿತರಾಗಿದ್ದಾರೆ. ಇದರ ಪರಿಣಾಮವಾಗಿ ಖಾಸಗಿ ವಾಹನಗಳ ದರಗಳು ಹೆಚ್ಚಾಗುವ ಸಾಧ್ಯತೆಯಿದೆ.
ಸಾರಿಗೆ ಬಂದ್ ಪರಿಣಾಮವನ್ನು ಕಡಿಮೆ ಮಾಡಲು ಸರ್ಕಾರವು ಖಾಸಗಿ ಬಸ್ ಮತ್ತು ಶಾಲಾ ಬಸ್‌ಗಳನ್ನು ಬಳಸಿಕೊಂಡಿವೆ. ಆದರೆ ಎಲ್ಲಾ ಮಾರ್ಗದಲ್ಲಿಯೂ ಖಾಸಗಿ ಬಸ್‌ಗಳನ್ನು ಅವಲಂಭಿಸುವುದು ಕಷ್ಟಸಾಧ್ಯ.
ಇದನ್ನೂ ಓದಿ : ಧರ್ಮಸ್ಥಳದಲ್ಲಿ ಎಸ್‌ಐಟಿ ಉತ್ಕನನದ ವೇಳೆ ಸಿಕ್ಕಿದ್ದೇನು ?
ಸಾರಿಗೆ ನೌಕರರಿಗೆ ಹೈಕೋರ್ಟ್ ಎಚ್ಚರಿಕೆ
ಕರ್ನಾಟಕ ಹೈಕೋರ್ಟ್ ಸೋಮವಾರ (ಆಗಸ್ಟ್ 4) ಮುಷ್ಕರವನ್ನು ಒಂದು ದಿನ ಮುಂದೂಡುವಂತೆ ಮಧ್ಯಂತರ ಆದೇಶ ನೀಡಿತ್ತು. ಆದರೂ, ಸಾರಿಗೆ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ.
ಮುಷ್ಕರದಲ್ಲಿ ಪಾಲ್ಗೊಳ್ಳುವ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಮತ್ತು “ಕೆಲಸ ಇಲ್ಲ, ಸಂಬಳ ಇಲ್ಲ” ಎಂಬ ನೀತಿಯನ್ನು ಜಾರಿಗೊಳಿಸುವುದಾಗಿ ಸಾರಿಗೆ ನಿಗಮಗಳು ಎಚ್ಚರಿಕೆ ನೀಡಿವೆ.
ಆದರೆ ಸಾರಿಗೆ ನೌಕರರು ಮಾತ್ರ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ನಡೆಸಲು ದೃಢ ನಿರ್ಧಾರ ಮಾಡಿದ್ದಾರೆ.
ಸಾರಿಗೆ ನೌಕರರ ಬೇಡಿಕೆಗಳೇನು ?
ಸಾರಿಗೆ ನೌಕರರು ಪ್ರಮುಖವಾಗಿ ಶೇ. 25ರಷ್ಟು ವೇತನ ಹೆಚ್ಚಳ ಮತ್ತು ಬಾಕಿ ಉಳಿದಿರುವ 38 ತಿಂಗಳ ವೇತನವನ್ನು ಪಾವತಿಸುವಂತೆ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಂಧಾನ ಸಭೆಯು ವಿಫಲವಾದ ಕಾರಣ, ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.
ಇದನ್ನೂ ಓದಿ : ಧರ್ಮಸ್ಥಳದಲ್ಲಿ 13 ಜಾಗದಲ್ಲಿ ಉತ್ಕನನದ ನಂತ್ರ ಮುಂದೇನು ?
ಈ ಮುಷ್ಕರವು ರಾಜ್ಯದ ಸಾರ್ವಜನಿಕ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಸಾರ್ವಜನಿಕರಿಗೆ ತೀವ್ರ ಅನಾನುಕೂಲ ಉಂಟಾಗಿದೆ. ಹೈಕೋರ್ಟ್ ಆದೇಶದ ಹೊರತಾಗಿಯೂ ನೌಕರರು ಮುಷ್ಕರ ಮುಂದುವರಿಸುತ್ತಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ.
Karnataka Transport Employees Strike Effect



