Unlock : ಮೈಸೂರಲ್ಲಿ ಲಾಕ್ ಡೌನ್, ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಮುಂದುವರಿಕೆ : ಸಿಎಂ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ಆಧಾರ ಮೇಲೆ ಅನ್ ಲಾಕ್ ಆದೇಶ ಜಾರಿ ಮಾಡಲಾಗಿದೆ. ಶೇ.10ಕ್ಕೀಂತ ಹೆಚ್ಚು ಪಾಸಿಟಿವಿಟಿ ದರ ಹೆಚ್ಚಿರುವ ಮೈಸೂರಿನಲ್ಲಿ ಲಾಕ್ ಡೌನ್ ಮುಂದುವರಿಸಲಾಗಿದ್ದು, ಉಳಿದ ಜಿಲ್ಲೆಗಳಿಗೆ ಅನ್ ಲಾಕ್ ಜಾರಿ ಮಾಡಲಾಗಿದೆ. ಆದರೆ ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್,ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜೊತೆಗೆ ಕೊರೊನಾ ಅನ್ ಲಾಕ್ ಮಾರ್ಗಸೂಚಿಯ ಕುರಿತು ಸಭೆ ನಡೆಸಿ ಚರ್ಚಿಸಿದ್ದಾರೆ. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಹೊಂದಿರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ, ಗದಗ, ರಾಯಚೂರು, ಬಾಗಲಕೋಟೆ, ಕಲಬುಬರಗಿ, ಹಾವೇರಿ, ರಾಮಗನರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಂಗಡಿಗಳನ್ನು ಬೆಳಗ್ಗೆಯಿಂದ ಸಂಜೆ 5 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಎಸಿ ಚಾಲನೆ ಮಾಡದೆ ಹೋಟೆಲ್, ಕ್ಲಬ್, ರೆಸ್ಟೋರೆಂಟ್ ಗಳಲ್ಲಿ ಶೇ.50 ಸಾಮರ್ಥ್ಯದೊಂದಿಗೆ ತೆರೆಯಲು ಅವಕಾಶ ನೀಡಲಾಗಿದೆ.

ಅಲ್ಲದೇ ಹೊರಾಂಗಣ ಚಿತ್ರೀಕರಣ, ಬಸ್ ಹಾಗೂ ಮೆಟ್ರೋ ಸಂಚಾರಕ್ಕೆ ಅವಕಾಶ, ಹೊರಾಂಗಣ ಕ್ರೀಡೆ ( ವೀಕ್ಷಕರಿಲ್ಲದೇ), ಸರಕಾರಿ, ಖಾಸಗಿ ಕಚೇರಿಯಲ್ಲಿ ಶೇ.50ರ ಸಾಮರ್ಥ್ಯದಲ್ಲಿ ಕಾರ್ಯನಿರ್ವಹರಣೆ ಅವಕಾಶ, ಲಾಡ್ಜ್, ರೆಸಾರ್ಟ್, ಜಿಮ್ ತೆರೆಯಲು ಅವಕಾಶ ನೀಡಲಾಗಿದೆ. ಬಿಎಂಟಿಸಿ, ಕೆಎಸ್ಆರ್ ಟಿಸಿ ಬಸ್ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಶೇ,50ರಷ್ಟು ಪ್ರಯಾಣಿಕರು ಬಸ್ ಗಳಲ್ಲಿ ಸಂಚಾರ ನಡೆಸಬಹುದಾಗಿದೆ. ಅಷ್ಟೇ ಅಲ್ಲದೇ ಮೆಟ್ರೋ ರೈಲುಗಳಲ್ಲಿಯೂ ಪ್ರಯಾಣಿಕರ ಸಂಚಾರಕ್ಕೆ ಅನುಮತಿಯನ್ನು ನೀಡಲಾಗಿದೆ.

ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಹೊಂದಿರುವ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಅನ್ ಲಾಕ್ ಆದೇಶ ಜಾರಿಯಲ್ಲಿದ್ದರೂ ಕೂಡ, ಅನ್ ಲಾಕ್ 1.0 ಆದೇಶ ಮುಂದುವರಿಯಲಿದ್ದು, ಕೇವಲ ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಗ್ನ 2 ಗಂಟೆಯ ವರೆಗೆ ಮಾತ್ರವೇ ಅವಕಾಶವನ್ನು ಕಲ್ಪಿಸಲಾಗಿದೆ. ಆದರೆ ಬಸ್ ಸಂಚಾರಕ್ಕೆ ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿದೆ.

ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್ ಕರ್ಪ್ಯೂ ಹಾಗೂ ವೀಕೆಂಡ್ ಕರ್ಪ್ಯೂವನ್ನು ಮುಂದುವರಿಸಲಾಗಿದೆ. ಆದರೆ ಹಲವು ಜಿಲ್ಲೆಗಳಲ್ಲಿ ಅನ್ ಲಾಕ್ ಆದೇಶ ಜಾರಿಯಲ್ಲಿದ್ದರೂ ಕೂಡ ಈಜುಕೋಳ, ಸಭೆ, ಸಮಾರಂಭ, ಪೂಜಾ ಕಾರ್ಯಕ್ರಮ, ಶಿಕ್ಷಣ ಸಂಸ್ಥೆಗಳು, ಸಿನಿಮಾ ಮಂದಿರ, ಶಾಪಿಂಗ್ ಕಾಂಪ್ಲೆಕ್ಸ್, ಅಮ್ಯೂಸ್ ಮೆಂಟ್ ಪಾರ್ಕ್, ಪಬ್ ಗಳ ಮೇಲಿನ ನಿರ್ಬಂಧವನ್ನು ರಾಜ್ಯದಾದ್ಯಂತ ಮುಂದುವರಿಸಲಾಗಿದೆ.

Comments are closed.