ಮಂಗಳವಾರ, ಏಪ್ರಿಲ್ 29, 2025
HomeBreakingKarnataka Unlock 3.0 : ವೀಕೆಂಡ್ ಕರ್ಪ್ಯೂ ರದ್ದು, ಧಾರ್ಮಿಕ ಕೇಂದ್ರ, ಮಾಲ್ ಓಪನ್ :...

Karnataka Unlock 3.0 : ವೀಕೆಂಡ್ ಕರ್ಪ್ಯೂ ರದ್ದು, ಧಾರ್ಮಿಕ ಕೇಂದ್ರ, ಮಾಲ್ ಓಪನ್ : ಯಾವುದಕ್ಕೆಲ್ಲಾ ಅವಕಾಶ ಗೊತ್ತಾ ?

- Advertisement -

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಪಾಟಸಿಟಿವಿಟಿ ರೇಟ್ ಕಡಿಮೆಯಾದ ಬೆನ್ನಲ್ಲೇ ಕರ್ನಾಟಕದಲ್ಲಿ ಅನ್ ಲಾಕ್ 3.0 ಮಾರ್ಗ ಸೂಚಿಯನ್ನು ಜಾರಿ ಮಾಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಜುಲೈ 5 ರಿಂದಲೇ ಹೊಸ ಆದೇಶ ಜಾರಿಗೆ ಬರುತ್ತಿದ್ದು, ಜುಲೈ 19ರ ವರಗೆ ಆದೇಶ ಜಾರಿಯಲ್ಲಿರಲಿದೆ. ರಾಜ್ಯದಲ್ಲಿ ಜಾರಿಯಲ್ಲಿದ್ದ ವೀಕೆಂಡ್ ಕರ್ಪ್ಯೂ ರದ್ದು ಮಾಡಲಾಗಿದ್ದು, ನೈಟ್ ಕರ್ಪ್ಯೂ ಆದೇಶ ವನ್ನು ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಗೆ ಸೀಮಿತಗೊಳಿ ಸಲಾಗಿದೆ. ಮದುವೆ ಸಮಾರಂಭಗಳಲ್ಲಿ 100 ಜನರು ಹಾಗೂ ಅಂತ್ಯ ಸಂಸ್ಕಾರದಲ್ಲಿ 20 ಮಂದಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯದಲ್ಲಿನ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ರಾಜ್ಯ ಸರಕಾರ ಅನುಮತಿಯನ್ನು ನೀಡಿದೆ. ದೇವಸ್ಥಾನಗಳು ಓಪನ್ ಆಗುತ್ತಿದ್ದು, ಜುಲೈ 5 ರಿಂದ ಭಕ್ತರು ದೇವರ ದರ್ಶನ ಪಡೆಯಲು ಹಾಗೂ ಆರತಿ ಸೇವೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದರೆ ಯಾವುದೇ ರೀತಿಯ ಹೋಮ-ಹವನ ಮಾಡುವುದಕ್ಕೆ ಅವಕಾಶ ಇಲ್ಲ, ಪ್ರಸಾದ ವಿತರಣೆ ಮಾಡುವಂತಿಲ್ಲ. ದೇವಳಕ್ಕೆ ಬರುವ ಭಕ್ತರು ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳ ಬೇಕು.

ಸರಕಾರಿ ಹಾಗೂ ಖಾಸಗಿ ಕಛೇರಿ,  ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ.100 ರಷ್ಟು ಸಿಬ್ಬಂದಿ ಯೊಂದಿಗೆ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ. ಇನ್ನು ಈಜುಕೊಳಗಳಲ್ಲಿ ಕ್ರೀಡಾ ಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ. ಕ್ರೀಡಾ ಸಂಕೀರ್ಣ ಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ. ಅಲ್ಲದೇ ಬಾರ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ಆದರೆ ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭ ಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶ ವಿಲ್ಲ. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿ ಸಲಾಗುವುದು ಎಂದಿದ್ದಾರೆ. ಪಬ್ ಗಳು ಕಾರ್ಯನಿರ್ವ ಹಿಸಲು ಅವಕಾಶ ವಿಲ್ಲ. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ. ಅಲ್ಲದೇ ಜಿಲ್ಲೆಯಲ್ಲಿರುವ ಪರಿಸ್ಥಿತಿ ಅನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular