Karnataka Unlock 4.0: ಪದವಿ ಕಾಲೇಜು, ಸಿನಿಮಾ ಥಿಯೇಟರ್‌ ತೆರೆಯಲು ಗ್ರೀನ್‌ ಸಿಗ್ನಲ್‌

ಬೆಂಗಳೂರು : ರಾಜ್ಯದಲ್ಲಿ ಅನ್ ಲಾಕ್ 4.0 ಮಾರ್ಗಸೂಚಿ ನಾಳೆಯಿಂದ ಜಾರಿಗೆ ಬರಲಿದೆ. ಈ ಹಿನ್ನೆಲೆ ಯಲ್ಲಿ ಸಿನಿಮಾ ಥಿಯೇಟರ್‌ ಹಾಗೂ ಪದವಿ ಕಾಲೇಜುಗಳ ಆರಂಭಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಅಲ್ಲದೇ ನೈಟ್‌ ಕರ್ಪ್ಯೂ ಅವಧಿಯನ್ನು ವಿಸ್ತರಣೆ ಮಾಡಲು ರಾಜ್ಯ ಸರಕಾರ ಮುಂದಾಗಿದ್ದು, ಇಂದು ಸಂಜೆ ಅಧಿಕೃತ ಆದೇಶ ಹೊರಬೀಳಲಿದೆ.

ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅನ್‌ಲಾಕ್‌ ಮಾರ್ಗಸೂಚಿಯನ್ನು ಸಡಿಲಿಕೆ ಮಾಡಲು ರಾಜ್ಯ ಸರಕಾರ ಮುಂದಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ತಮ್ಮ ನಿವಾಸದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಸಿದ್ದಾರೆ. ನಾಳೆಯಿಂದಲೇ ರಾಜ್ಯದಲ್ಲಿ ಅನ್‌ಲಾಕ್‌ 4.0 ಜಾರಿಗೆ ಬರಲಿದೆ. ಅದರಂತೆಯೇ ಕಳೆದ ಎರಡೂ ತಿಂಗಳಿ ನಿಂದ ಬಾಗಿಲು ಮುಚ್ಚಿದ್ದ ಸಿನಿಮಾ ಥಿಯೇಟರ್‌ ತೆರೆಯಲು ಒಪ್ಪಿಗೆ ಸೂಚಿಸಿದ್ದು, ಶೇ. 50ರಷ್ಟು ಪ್ರೇಕ್ಷಕ ರೊಂದಿಗೆ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ. ನಾಳೆಯಿಂದಲೇ ಚಿತ್ರಮಂದಿರ ಆರಂಭವಾಗಲಿದೆ.

ಮೆಡಿಕಲ್‌ ಕಾಲೇಜುಗಳ ಆರಂಭಕ್ಕೆ ಅವಕಾಶವನ್ನು ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ಪದವಿ ಕಾಲೇಜುಗಳ ಆರಂಭಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಜುಲೈ 26 ರಿಂದಲೇ ಪದವಿ ಕಾಲೇಜುಗಳು ಕಾರ್ಯಾರಂಭ ಮಾಡಲಾಗುತ್ತಿದೆ. ತರಗತಿಗಳಿಗೆ ವಿದ್ಯಾರ್ಥಿಗಳು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಒಂದು ಡೋಸ್‌ ಕೊರೊನಾ ಲಸಿಕೆಯನ್ನು ಪಡೆದಿರಬೇಕು. ಅಲ್ಲದೇ ಕಾಲೇಜುಗಳಲ್ಲಿ ಕೊರೊನಾ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಹೇಳಿದೆ. ಅಲ್ಲದೇ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಗಳಿಗೆ ಹಾಜರಾಗಲು ಕೂಡ ಅವಕಾಶ ಕಲ್ಪಿಸಲಾಗಿದೆ.

ರಾಜ್ಯದಲ್ಲಿ ನೈಟ್‌ ಕರ್ಪ್ಯೂ ಅವಧಿಯನ್ನು ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೆ ವಿಸ್ತರಣೆಯನ್ನು ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನು ದೇವಸ್ಥಾನದಲ್ಲಿ ಭಕ್ತರಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ. ದೇವಸ್ಥಾನದಲ್ಲಿ ಅನ್ನಸಂತರ್ಪಣೆ, ದೇವರ ದರ್ಶನ, ವಿಶೇಷ ಪೂಜೆ, ತೀರ್ಥ ಪ್ರಸಾದ ವಿತರಣೆಗೆ ಕೂಡ ಅವಕಾಶ ಕಲ್ಪಿಸಲಾಗಿದೆ. ಆದರೆ ಜಾತ್ರೆಯನ್ನು ಹೊರತು ಪಡಿಸಿ ಉಳಿದೆಲ್ಲವುಗಳಿಗೂ ಅವಕಾಶ ನೀಡುವ ಕುರಿತು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಇದನ್ನೂ ಓದಿ : ನಕಲಿ ಚಿನ್ನಕ್ಕೆ 72 ಲಕ್ಷ ಸಾಲ ಕೊಟ್ಟ ಕೆನರಾ ಬ್ಯಾಂಕ್…!!!

ಇನ್ನು ಕೊರೊನಾ ಮೂರನೇ ಅಲೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಚಿವರಿಗೆ ಸಿಎಂ ಯಡಿಯೂರಪ್ಪ ಸೂಚನೆಯನ್ನು ನೀಡಿದ್ದಾರೆ. ಆದರೆ ಮದುವೆ, ಅಂತ್ಯಸಂಸ್ಕಾರಕ್ಕೆ ಈ ಹಿಂದೆ ಇದ್ದ ನಿರ್ಬಂಧಗಳನ್ನು ಮುಂದುವರಿಸಲು ನಿರ್ಧರಿಸಲಾಗಿದೆ. ಅಲ್ಲದೇ ಸಭೆಯಲ್ಲಿ ಪಬ್‌ ಆರಂಭದ ಕುರಿತು ಚರ್ಚೆ ನಡೆಸಲಾಗಿದೆ.

Comments are closed.