Anand Mamani Passed away : ವಿಧಾನಸಭೆಯ ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ ವಿಧಿವಶ

ಬೆಂಗಳೂರು : ಸವದತ್ತಿ ವಿಧಾನಸಭಾ ಕ್ಷೇತ್ರದ ಶಾಸಕ,ಕರ್ನಾಟಕ ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ (Anand Mamani Passed away) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರನ್ನು ಹಲವು ದಿನಗಳ ಹಿಂದೆಯೇ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ನಂತರದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದ್ರೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ವಿಧಿವಶರಾಗಿದ್ದಾರೆ.

ಆನಂದ ಮಾಮನಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ. ನಮ್ಮ ಪಕ್ಷದ ಶಾಸಕರು, ರಾಜ್ಯ ವಿಧಾನಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಆತ್ಮೀಯ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ ಅವರ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಜೆಡಿಎಸ್ ಮೂಲಕ ರಾಜಕೀಯ ಪ್ರವೇಶಿಸಿ 2008ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. 2008ರಿಂದ ಸತತವಾಗಿ 3 ಬಾರಿ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದು, ಹ್ಯಾಟ್ರಿಕ್ ಗೆಲುವಿನ ಮೂಲಕ ಸವದತ್ತಿ ಕ್ಷೇತ್ರದಲ್ಲಿ ಇತಿಹಾಸ ಸೃಷ್ಠಿಸಿದ್ದರು. 2020ರ ಮಾರ್ಚ್‍ನಲ್ಲಿ ಡೆಪ್ಯೂಟಿ ಸ್ಪೀಕರ್ ಆಗಿ ಆಯ್ಕೆಯಾಗಿದ್ದರು. ಇವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಆನಂದ ಮಾಮನಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿ ಜಿಲ್ಲೆಯ ಸವದತ್ತಿಗೆ ಶಿಫ್ಟ್ ಮಾಡಲಾಗುತ್ತದೆ. ಭಾನುವಾರ ಮಧ್ಯಾಹ್ನ ಅಂತ್ಯಕ್ರೀಯೆ ನಡೆಯಲಿದೆ. ಶಾಸಕ ಮಾಮನಿ ಅವರ ನಿಧನಕ್ಕೆ ರಾಜಕೀಯ ಗಣ್ಯರು, ಶಾಸಕರು, ಸಚಿವರು ಸಂತಾಪ ಸೂಚಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಸವದತ್ತಿ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಆನಂದ ಚೋಪ್ರಾ ಅವರನ್ನು ಸೋಲಿಸುವ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದರು. ಆನಂದ ಮಾಮನಿ ಅವರ ತಂದೆ ಚಂದ್ರಶೇಖರ್ ಮಾಮನಿ ಅವರು ಕೂಡ ವಿಧಾನಸಭೆಯ ಉಪಸಭಾಧ್ಯಕ್ಷರಾಗಿದ್ದರು. ಕೇವಲ ಜನಪ್ರತಿನಿಧಿಯಾಗಿ ಮಾತ್ರವಲ್ಲದೇ ಸಮಾಜ ಸೇವೆಯಲ್ಲಿ ಅವರನ್ನು ತಮ್ಮನ್ನು ತೊಡಗಿಸಿಕೊಂಡಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ಕಾಡಸಿದ್ದೇಶ್ವರ ಉಚಿತ ಪ್ರಸಾದ ನಿಲಯ, ಚಂದ್ರಮ ಅರ್ಬನ್ ಕೋ ಅಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ : gang-raped : ಸಾಫ್ಟ್​ವೇರ್​ ಇಂಜಿನಿಯರ್​ಗೆ ಥಳಿಸಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

ಇದನ್ನೂ ಓದಿ : 100rs controversy : ಸರ್ಕಾರಿ ಶಾಲೆಗಳಲ್ಲಿ ದೇಣಿಗೆ ವಸೂಲಿ; ತನ್ನ ಪಾತ್ರವಿಲ್ಲ ಎಂದ ಶಿಕ್ಷಣ ಸಚಿವ

Karnataka vidhan sabha Deputy Speaker Anand Mamani Passed away

Comments are closed.