Karnataka weather forecast: ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: (Karnataka weather forecast) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ. ಕೆಲವು ದಿನಗಳಂದ ಮಳೆಯ ಆರ್ಭಟ ಕಡಿಮೆಯಾಗಿತ್ತು. ಆದರೆ ಇದೀಗ ಮತ್ತೆ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್‌ ನ ಮೊದಲ ವಾರದಲ್ಲಿ ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿತ್ತು. ಮ್ಯಾಂಡಸ್‌ ಚಂಡಮಾರುತದಿಂದಾಗಿ ಇಡೀ ರಾಜ್ಯವೇ ತತ್ತರಗೊಂಡಿತ್ತು. ಅದಾದ ನಂತರ ಮಳೆ ಸ್ವಲ್ಪ ದಿನಗಳ ಕಾಲ ಬಿಡುವು ಪಡೆದುಕೊಂಡಿದ್ದು, ಇದೀಗ ಕೆಲವು ದಿನಗಳಿಂದ ಬಿಡುವು ಪಡೆದುಕೊಂಡಿದ್ದ ಮಳೆ ರಾಜ್ಯದಲ್ಲಿ ಮತ್ತೆ ಸುರಿಯಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಒಂಬತ್ತು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ (ಡಿ. 29) ಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Karnataka weather forecast) ತಿಳಿಸಿದೆ.

ಡಿಸೆಂಬರ್ 27 ಮತ್ತು 28 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಹಲವು ಭಾಗಗಳಾದ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕೂಡ ಮಳೆಯಾಗಲಿದ್ದು, ಈವರೆಗೆ ತಂಪಾದ ವಾತಾವರಣವಿತ್ತು. ಇನ್ನೂ ಎರಡು ದಿನಗಳ ಕಾಲ ತಂಪಾದ ವಾತಾವರಣ ಮುಂದುವರೆಯಲಿದ್ದು, ಅದರ ಜೊತೆಗೆ ಚಳಿಯ ವಾತಾವರಣ ಹಾಗೂ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : Corona in state : ರಾಜ್ಯದಲ್ಲಿ ಕೊರೊನಾ ಭೀತಿ : ವಿದೇಶಿ ಪ್ರಯಾಣಿಕರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ : ಸಚಿವ ಡಾ. ಸುಧಾಕರ್

ಇದನ್ನೂ ಓದಿ : Covid School holiday :ಕೋವಿಡ್ ಪ್ರಕರಣ ಹೆಚ್ಚಳ : ಕರ್ನಾಟಕದ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟ

ಇದನ್ನೂ ಓದಿ : Surathkal Stab : ಸುರತ್ಕಲ್ ನಲ್ಲಿ ಯುವಕನಿಗೆ ಚಾಕು ಇರಿತ : ಕರಾವಳಿಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ

ಇದನ್ನೂ ಓದಿ : corona alert: ಕೊರೊನಾ ಆತಂಕದ ಬೆನ್ನಲ್ಲೇ ಬಿಎಂಟಿಸಿ ಪ್ರಯಾಣಿಕರಿಗೆ ಮಾಸ್ಕ್​ ಧರಿಸುವಂತೆ ಸೂಚನೆ

(Karnataka weather forecast) There has been a depression in the Bay of Bengal and rain will continue in Karnataka for the next four days. For some days the rain was less. But now there is a possibility of rain in Karnataka again according to Meteorological Department.

Comments are closed.