Karnataka Weather Report : ಕರಾವಳಿ ಸೇರಿದಂತೆ 10ಜಿಲ್ಲೆಗಳಲ್ಲಿ ಬಾರೀ ಮಳೆ : ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದಲೂ ಮಳೆ ಸುರಿಯುತ್ತಿದ್ದು, ಇನ್ನೆರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ. ಅದ್ರಲ್ಲೂ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಸಿಲಿಕಾನ್‌ ಸಿಟಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ರಾಮನಗರ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

ಕರಾವಳಿ ಭಾಗದಲ್ಲಿ ಕಳೆದೊಂದು ವಾರದಿಂದಲೂ ಮಳೆ ಸುರಿಯುತ್ತಿದ್ದು, ಎರಡು ದಿನಗಳಿಂದಲೂ ಮೋಡ ಕವಿದ ವಾತಾವರಣವಿದೆ. ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ, ತೆಲಂಗಾಣ, ಕೇರಳ, ತಮಿಳುನಾಡು, ಚೆನ್ನೈನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

ಇದನ್ನೂ ಓದಿ : Corona Updates : ಭಾರತದಲ್ಲಿ 5ನೇ ದಿನವೂ ಕೋವಿಡ್ ಪ್ರಕರಣಗಳ ಏರಿಕೆ

ಇದನ್ನೂ ಓದಿ : ಕಾಬೂಲ್ ವಿಮಾನ ನಿಲ್ದಾಣದಲ್ಲಿ ಮತ್ತೆ ಉಗ್ರ ದಾಳಿ ಸಾಧ್ಯತೆ : ಅಮೇರಿಕ ಎಚ್ಚರಿಕೆ

Comments are closed.