Karnataka Weather report: ಇಂದಿನಿಂದ ಡಿ.9 ರವರೆಗೆ ಕರಾವಳಿ, ಮಲೆನಾಡಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: (Karnataka Weather report) ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಡಿಸೆಂಬರ್‌ 9ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಕೊಡಗು, ಮೈಸೂರು ಸೇರಿದಂತೆ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ.

ಡಿಸೆಂಬರ್‌ 9 ರಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು ಸೇರಿದಂತೆ ರಾಜ್ಯದ (Karnataka Weather report) ಹಲವು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಕೆಲವು ಕಡೆಗಳಲ್ಲಿ ಬೆಳಗ್ಗಿನ ಜಾವ ಮಂಜು ಮುಸುಕಿನ ವಾತಾವರಣವಿತ್ತು.

ಇಂದಿನಿಂದ ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗುವ ಮುನ್ಸೂಚನೆ ಇದೆ. ಇಂದು ಅಂಡಮಾನ್ ದ್ವೀಪದ ದಕ್ಷಿಣ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರಿನಲ್ಲಿ ಡಿ. 14ರವರೆಗೆ ಮೋಡ ಕವಿದ ವಾತಾವರಣವಿರಲಿದ್ದು, ಮಳೆ ಹೆಚ್ಚಾಗಲಿದೆ. ಡಿಸೆಂಬರ್ 8ರ ಸುಮಾರಿಗೆ ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನ ಕರಾವಳಿಗೆ ಮಳೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಧಾರಾಕಾರ ಮಳೆಯಾಗಲಿದೆ.

Karnataka Weather report: ಇಂದು ಯಾವ ರಾಜ್ಯಗಳಲ್ಲಿ ಮಳೆ?

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೇರಳ – ಮಾಹೆಯಲ್ಲಿ ನಿನ್ನೆಯ ದಿನ ಮಿಂಚು ಸಹಿತ ಮಳೆಯಾಗಿದ್ದು, ಇಂದು ಕೂಡ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ : Karnataka weather report: ನಾಳೆಯಿಂದ ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ : ಕರಾವಳಿಯಲ್ಲಿ ಇಂದು‌ ಮಳೆ ಸಾಧ್ಯತೆ

ಇದನ್ನೂ ಓದಿ : Coastal weather: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಿಂಚು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಇದನ್ನೂ ಓದಿ : CM Bommai announcement: ವಿಕಲಚೇತನ ಮಕ್ಕಳಿಗೆ ವಿಶೇಷ ಯೋಜನೆ : ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ

(Karnataka Weather report) Meteorological department has said that there will be moderate rain in the coastal and southern interior of the state from today till December 9. It will rain in some places including Dakshina Kannada, Uttara Kannada, Chamarajanagar, Kodagu, Mysore today.

Comments are closed.