Karnataka weather report: ಚಳಿಗೆ ಕರ್ನಾಟಕ ತತ್ತರ : ಡಿಸೆಂಬರ್ 16ರ ವರೆಗೆ ಮಳೆ ಮುಂದುವರಿಕೆ, 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: (Karnataka weather report) ಬಂಗಾಳಕೊಲ್ಲಿಯಲ್ಲಿ ಮ್ಯಾಂಡಸ್‌ ಚಂಡಮಾರುತ ಎದ್ದಿರುವ ಹಿನ್ನಲೆಯಲ್ಲಿ ರಾಜ್ಯ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇಂದೂ ಕೂಡ ಅದೇ ರೀತಿಯಲ್ಲಿ ಮಳೆ ಮುಂದುವರಿಯಲಿದ್ದು, ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ (Karnataka weather report) ವಿವಿಧೆಡೆ ಡಿಸೆಂಬರ್ 16ರವರೆಗೆ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮ್ಯಾಂಡಸ್ ಚಂಡಮಾರುತದ ಹಿನ್ನಲೆಯಲ್ಲಿ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಪರಿಣಾಮ ಕರ್ನಾಟಕದ ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ನಿನ್ನೆ ಕೂಡ ಕರಾವಳಿ ಭಾಗಗಳಲ್ಲಿ ಗಾಳಿ ಜೊತೆಗೆ ಮಳೆಯು ಕೂಡ ಹೆಚ್ಚಾಗಿತ್ತು. ಇಂದೂ ಕೋಡ ಅದೇ ರೀತಿಯ ವಾತಾವರಣ ಮುಂದುವರಿಯಲಿದ್ದು, ಕೋಲಾರ, ಬೆಂಗಳೂರು, ಮಾಲೂರು, ಗೌರಿಬಿದನೂರು, ದೇವನಹಳ್ಳಿ, ಬೆಂಗಳೂರು ನಗರ, ಯಲಹಂಕ, ಹೆಸರಘಟ್ಟ, ದೊಡ್ಡಬಳ್ಳಾಪುರ, ಚಿತ್ರದುರ್ಗ, ಬೆಂಗಳೂರು,ಶ್ರೀರಂಗಪಟ್ಟಣ, ದಾವಣಗೆರೆ, ಚನ್ನಗಿರಿ, ಹೊನ್ನಾಳಿ, ಶಿವಮೊಗ್ಗ, ಕುಣಿಗಲ್​ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿದ್ದು, ಡಿಸೆಂಬರ್ 12ರಂದು ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ರಾಜ್ಯದಲ್ಲಿ ಈಗಾಗಲೇ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಇಂದು ಚಳಿಯ ಜೊತೆಗೆ ಮಳೆಯ ಪ್ರಮಾಣವು ಹೆಚ್ಚಾಗಲಿದ್ದು, ದಕ್ಷಿಣ ಮತ್ತು ಕರಾವಳಿ ಕರ್ನಾಟಕದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇಂದು ಬೆಂಗಳೂರು, ಕೋಲಾರ, ಚಿಕ್ಕಮಗಳೂರು ಮತ್ತು ಮಲೆನಾಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : ಮಾಂಡೌಸ್ ಚಂಡಮಾರುತ ನಿರಂತರ ಮಳೆ : ಶಾಲೆಗಳಿಗೆ ರಜೆ ಘೋಷಣೆ

ಇದನ್ನೂ ಓದಿ : mandous cyclone Yellow Alert : ಕರ್ನಾಟಕದಲ್ಲಿ ಮಳೆ ಮುಂದುವರಿಕೆ : 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಹಳದಿ ಅಲರ್ಟ್

ಇದನ್ನೂ ಓದಿ : Karnataka weather report: ಕರ್ನಾಟಕದಲ್ಲಿ 5 ದಿನ ಮಳೆ: ತಮಿಳುನಾಡಿನಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಇಂದು ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿಯಲ್ಲಿ ಮಳೆ ಮುಂದುವರೆಯಲಿದ್ದು, ದಕ್ಷಿಣ ಪೆನಿನ್ಸುಲಾದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರ, ಛತ್ತೀಸ್‌ಗಢ, ಒಡಿಶಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ.

(Karnataka weather report) In the background of cyclone Mandus in the Bay of Bengal, there is heavy rain in many places including the state. Rain will continue in the same manner today as well and yellow alert has been announced for four districts of the state.

Comments are closed.