Karnataka weather report: ರಾಜ್ಯದಲ್ಲಿ ಇಂದಿನಿಂದ ಡಿ. 12ರವರೆಗೆ ಭಾರೀ ಮಳೆ: ಮ್ಯಾಂಡಸ್‌ ಚಂಡಮಾರುತದ ಹಿನ್ನಲೆ ಹಳದಿ ಅಲರ್ಟ್‌ ಘೋಷಣೆ

ಬೆಂಗಳೂರು: (Karnataka weather report) ನೈಋತ್ಯ ಹಾಗೂ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಮ್ಯಾಂಡಸ್ ಚಂಡಮಾರುತದಿಂದ ನೆರೆಯ ರಾಜ್ಯಗಳಾದ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪರಿಣಾಮವಾಗಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಬೆಂಗಳೂರು ಹೊರತುಪಡಿಸಿ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಚಿಕ್ಕಮಗಳೂರು, ಕೋಲಾರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ (Karnataka weather report) ಇಂದಿನಿಂದ ಡಿ. 12ರವರೆಗೆ ಭಾರೀ ಮಳೆಯಾಗಲಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಸೇರಿದಂತೆ ಅನೇಕ ಕಡೆಗಳಲ್ಲಿ ಭಾರೀ ಮಳೆಯಾಗಲಿದೆ.

ಡಿಸೆಂಬರ್ 12ರವರೆಗೂ ಭಾರೀ ಮಳೆ ಮುಂದುವರಿಯಲಿದ್ದು, ಚಂಡಮಾರುತದ ಪ್ರಭಾವದಿಂದಾಗಿ ಗಾಳಿಯೂ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮ್ಯಾಂಡಸ್ ಚಂಡಮಾರುತದ ಹಿನ್ನೆಲೆಯಲ್ಲಿ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಗೆ ‘ಹಳದಿ’ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಹಾಗೂ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 12ರವರೆಗೆ ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದ್ದು, ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಡಿಸೆಂಬರ್ 11 ಮತ್ತು 12ರಂದು ಗುಡುಗು ಮತ್ತು ಮಿಂಚು ಸಹಿತ ಮಳೆ ಸುರಿಯಲಿದೆ.

ಇದನ್ನೂ ಓದಿ : Metro ticket booking: ಇನ್ಮುಂದೆ ಪೇಟಿಎಂ, ಯಾತ್ರಾ ಆಪ್ ಗಳಲ್ಲೂ ಮೆಟ್ರೋ ಟಿಕೆಟ್ ಲಭ್ಯ; ಬಳಸುವ ವಿಧಾನ ಹೇಗೆ..?

ಇದನ್ನೂ ಓದಿ : Karnataka weather report: ರಾಜ್ಯದಲ್ಲಿ ನಿಲ್ಲದ ವರುಣಾರ್ಭಟ: ತಮಿಳುನಾಡಿಗೆ ಇಂದು ಮ್ಯಾಂಡಸ್‌ ಚಂಡಮಾರುತ ಭೀತಿ

ಇದನ್ನೂ ಓದಿ : Current shock-boy died: ಪಾರಿವಾಳ ಹಿಡಿಯಲು ಹೋಗಿ ಕರೆಂಟ್‌ ಶಾಕ್:‌ ಮತ್ತೋರ್ವ ಬಾಲಕ ಸಾವು

ಇದನ್ನೂ ಓದಿ : ಮಂಗಳೂರಲ್ಲಿ ಸಿಟಿ ಬಸ್ ಚಾಲಕನ ಅಟ್ಟಹಾಸ : ಇಂಜಿನಿಯರ್ ಸಾವು, ಸಾರ್ವಜನಿಕರ ಆಕ್ರೋಶ

ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ತಮಿಳುನಾಡಿನ ಕರಾವಳಿ, ಪುದುಚೇರಿ ಮತ್ತು ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ತಮಿಳುನಾಡು ಮತ್ತು ರಾಯಲಸೀಮಾದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮುಂಜಾನೆಯೇ ಮಂಜು ಬೀಳುವ ಸಾಧ್ಯತೆ ಇದ್ದು, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್ ಮತ್ತು ಹರಿಯಾಣದಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ.

(Karnataka weather report) Cyclone Mandus, which has arisen in the south-west and south-east Bay of Bengal, is causing heavy rains in the coastal areas of neighboring states like Tamil Nadu, Puducherry and Andhra Pradesh, as a result of which there will be rain in some districts of coastal, southern interior and northern interior of Karnataka.

Comments are closed.