Karnataka Weather Report : ಕರ್ನಾಟಕದ 8 ಜಿಲ್ಲೆಗಳಲ್ಲಿ ಇನ್ನು 3 ದಿನ ಭಾರೀ ಮಳೆ; Yellow Alert ‌ ಘೋಷಣೆ

ಬೆಂಗಳೂರು : (Karnataka Weather Report )ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ (IMD ) ಮುನ್ಸೂಚನೆ ನೀಡಿದ್ದು, 8 ಜಿಲ್ಲೆಗಳಲ್ಲಿ ʼಯೆಲ್ಲೋ ಅಲರ್ಟ್‌ʼ ಘೋಷಿಸಲಾಗಿದೆ.

ಬೆಂಗಳೂರಿನ ಸುತ್ತಮುತ್ತಲಿನ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರಗಳಲ್ಲಿ ತುಂತುರು ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಅಕ್ಟೋಬರ್‌ 8 ರ ವರೆಗೆ ಭಾರೀ ಮಳೆಯಾಗಲಿದೆ.ಈ ಹಿಂದೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಇಂದು ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ( Karnataka Weather Report ) ಮುನ್ಸೂಚನೆಯನ್ನು ನೀಡಿದೆ.

ಯಾವ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ?

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಪ್ರಕಾರ,ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಇಂದಿನಿಂದ ಅಕ್ಟೋಬರ್‌ 8 ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಮುಂದಿನ 3 ದಿನಗಳ ಕಾಲ ಮಧ್ಯಪ್ರದೇಶ, ಒಡಿಶಾ, ಛತ್ತೀಸ್‌ಗಢ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಮಳೆ ಆರ್ಭಟಿಸುವ ಸಾಧ್ಯತೆಯಿದೆ. ಹೀಗಾಗಿ ನದಿ ಪಾತ್ರದಲ್ಲಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ

ಇದನ್ನೂ ಓದಿ : India Vs South Africa 1st ODI : ಶಿಖರ್ ಧವನ್ ನಾಯಕತ್ವದ ಟೀಮ್ ಇಂಡಿಯಾ ಪ್ಲೇಯಿಂಗ್ XI ಹೀಗಿದೆ

ಇದನ್ನೂ ಓದಿ : Acid Served In Water Bottles : ರೆಸ್ಟಾರೆಂಟ್​ನಲ್ಲಿ ನೀರಿನ ಬಾಟಲಿಯಲ್ಲಿ ಆಸಿಡ್​ ಕೊಟ್ಟ ಸಿಬ್ಬಂದಿ : ಇಬ್ಬರು ಮಕ್ಕಳು ಆಸ್ಪತ್ರೆ ದಾಖಲು

ಇದನ್ನೂ ಓದಿ : 12 year old rapes minor :ಐದು ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ 12 ವರ್ಷದ ಬಾಲಕ ಅರೆಸ್ಟ್​​

ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಉತ್ತರ ಪ್ರದೇಶ, ಉತ್ತರಾಖಂಡಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆಗಳು ಹೆಚ್ಚಿವೆ. ಜಮ್ಮು ಕಾಶ್ಮೀರ , ಲಡಾಖ್‌, ಕೊಂಕಣ ,ಗೋವಾ, ಗುಜರಾತ್ ನಲ್ಲಿ ಕೋಡ ಮಿಂಚಿನ ಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ ಮಣಿಪುರ, ಪಶ್ಚಿಮ ಬಂಗಾಳ, ತ್ರಿಪುರಾ, ನಾಗಾಲ್ಯಾಂಡ್‌ ಮತ್ತು ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆಗಳು ಇವೆ.ಹರಿಯಾಣ , ಬಿಹಾರ, ಅಸ್ಸಾಂ, ದೆಹಲಿ, ತಮಿಳುನಾಡು, ಕೇರಳ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ, ಪುದುಚೇರಿ, ಮೇಘಾಲಯ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗಿನ ಸಹಿತ ಚದುರಿದ ಮಳೆಯಾಗುವ ನಿರೀಕ್ಷೆಯಿದೆ.

ಲಡಾಖ್‌ನಲ್ಲಿ ಹಿಮ ಬೀಳುವ ಸಾಧ್ಯತೆಯಿದ್ದು, ಉತ್ತರ ಹಿಮಾಚಲ ಪ್ರದೇಶದಲ್ಲಿ ಬೆಳಿಗ್ಗೆ ದಟ್ಟವಾದ ಮಂಜು ಬೀಳಲಿದೆ.ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ ಹಿನ್ನಲೆ ಮುಂದಿನ ಕೆಲವು ಸಮಯಗಳ ಕಾಲ ಮಳೆಯಾಗಲಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ. ಇನ್ನು ಕರ್ನಾಟಕದ ದಾವಣಗೆರೆ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ ಹಿನ್ನಲೆಯಲ್ಲಿ ಕೆರೆ ನದಿಗಳು ತುಂಬಿ ಹರಿದಿದ್ದು, ರೈತರು ಬೆಳೆದ ನೂರಾರು ಎಕರೆ ಬೆಳೆ ನೀರುಪಾಲಾಗಿದ್ದು, ರೈತರ ಆಕ್ರೋಶಕ್ಕೆ ಕಾರಣವಾಗಿದೆ.

Karnataka Weather Report Indian Meteorological Department (IMD) has predicted heavy rains for 3 days from today in the districts of Chikkamagaluru, Mysore, Chamarajanagar, Kodagu, Davangere, Chitradurga, Hassan and Shimoga, including the capital of Karnataka, and 8 districts have been declared ‘yellow alert’.

Comments are closed.