Karnataka Weather Report : ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ

ಬೆಂಗಳೂರು : ಏಪ್ರಿಲ್‌ ತಿಂಗಳು ಶುರುವಾಗುತ್ತಿದ್ದಂತೆ ರಾಜ್ಯದಾದ್ಯಂತ ಬಿಸಿಲಿನ ತಾಪ ಹೆಚ್ಚುತ್ತಿದೆ. ಮುಂದಿನ 5 ದಿನಗಳ ಕಾಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಕೊಡಗು, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ (Karnataka Weather Report) ಎಂದು (Heavy rainfall in Karnataka) ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ನಿನ್ನೆ (ಏಪ್ರಿಲ್ 22) ಸಂಜೆ ಕೂಡ ಹಲವೆಡೆ ಮಳೆಯಾಗಿದೆ. ಹೀಗಾಗಿ ಬಿಸಿಲಿನ ಬೇಗೆಯಲ್ಲಿ ಸುಡುತಿದ್ದ ರಾಜ್ಯಕ್ಕೆ ಮಳೆ ತಂಪು ಸೂಸಿದಂತೆ ಆಗಿದೆ. ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಬೆಳಗಾವಿ ಮತ್ತು ಗದಗ ಉತ್ತರ ಒಳಭಾಗದಲ್ಲಿ ಮಳೆಯಾಗಲಿದೆ.

ಕಲಬುರಗಿಯಲ್ಲಿ ಗರಿಷ್ಠ 39.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲು ಇರಲಿದ್ದು, ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಎಚ್.ಎ.ಎಲ್ ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ನಗರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಕೆಐಎಎಲ್ ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕನಹಳ್ಳಿ ಎಡಬ್ಲ್ಯೂಎಸ್, ಕುಂದಗೋಳ, ದೊಡ್ಡಬಳ್ಳಾಪುರ, ಕಣಬರ್ಗಿ, ಚಿಂಚೋಳಿ, ಪಾವಗಡ, ಗೌರಿಬಿದನೂರು, ಯುಗತ್, ಭಾಗಮಂಡಲ, ಬೆಳಗಾವಿ ವಿಮಾನ ನಿಲ್ದಾಣ, ಗುತ್ತಲ್, ರಾಣೇಬೆನ್ನೂರು, ಬಸವನ ಬಾಗೇವಾಡಿ, ಬಂಡೀಪುರ, ಹುಣಸೂರು, ಶಿವಮೊಗ್ಗ, ಬುಕ್ಕಪಟ್ಟಣ, ಕುಣಿಗಲ್, ಉಚ್ಚಾಂಗ್ ಕುಣಿಗಲ್‌ನಲ್ಲಿ ಕೆಲವೆಡೆ ಮಳೆಯಾಗಿದೆ. ಮಿಂಚು ಸಹಿತ ಮಳೆಯಾಗುವ ಸಾಧ್ಯತೆ. ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ತುಂತುರು ಮಳೆಯಾಗುತ್ತಿದೆ. ಈಗ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗಲಿದೆ.

ಇದನ್ನೂ ಓದಿ : ಕರ್ನಾಟಕ SSLC ಫಲಿತಾಂಶ 2023 : ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟ

ಶನಿವಾರ ಕೊಡಗು, ಶಿವಮೊಗ್ಗ, ಹಾಸನದಲ್ಲಿ ತುಂತುರು ಮಳೆಯಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ಭಾಗದಲ್ಲಿ ಮಳೆಯಾಗಿದೆ. ಕೆಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ತುಂತುರು ಮಳೆಯಾಗುತ್ತಿದೆ. ಈಗ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗಲಿದೆ. ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್, ಬೆಳಗಾವಿ, ಕೊಪ್ಪಳ, ಗದಗದಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿರುತ್ತದೆ.

Heavy rainfall in Karnataka : Karnataka Weather Report : Heavy rain in Karnataka for the next 5 days

Comments are closed.