Karnataka Weather Report : ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ರಾಜ್ಯದಲ್ಲಿ ಅವಾಂತವರನ್ನೇ ಸೃಷ್ಟಿಸಿದೆ. (Karnataka Weather Report) ಇದೀಗ ಮಳೆ ಕರ್ನಾಟಕದ ಜನರಿಗೆ ಮತ್ತೆ ಶಾಕ್‌ ಕೊಟ್ಟಿದ್ದು, ಮುಂದಿನ ನಾಲ್ಕು ದಿನಗಳ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ರಾಜ್ಯ ಭಾರೀ ಮಳೆ ಸೃಷ್ಟಿಸಿದ ಅವಾಂತರ ಅಷ್ಟಿಷ್ಟಲ್ಲ. ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯ ಹಲವು ಜಿಲ್ಲೆಗಳಲ್ಲಿಯೂ ಮಳೆ ಕಂಟಕವಾಗಿ ಪರಿಃಮಿಸಿದೆ. ಬೆಂಗಳೂರು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಮಾತ್ರವಲ್ಲದೇ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಳೆಯ ಕುರಿತು ಮಾಹಿತಿಯನ್ನು ನೀಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ಅಲ್ಲದೇ ಅಕಾಲಿಕ ಮಳೆಯಿಂದ ಉಂಟಾಗಿರುವ ಹಾನಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದಾರೆ. ಸಂಪೂರ್ಣವಾಗಿ ಮನೆ ಹಾನಿಯಾಗಿರುವವರಿಗೆ 5 ಲಕ್ಷ, ಭಾಗಶಃ ಹಾನಿಗೆ 3 ಲಕ್ಷ ಹಾಗೂ ಅಲ್ಪ ಹಾನಿಗೆ 50 ಸಾವಿರ ಪರಿಹಾರ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ : ಸಿನಿಮಾದಲ್ಲಿ ನಟಿಸುವ ಆಮಿಷ : ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ

ಇದನ್ನೂ ಓದಿ : ಗಿಡನೆಟ್ಟು ಸರಳವಾಗಿ ಹುಟ್ಟುಹಬ್ಬ ಆಚರಣೆ : ಕರಾವಳಿಯಲ್ಲಿ ವೃಕ್ಷ ಪ್ರೇಮಿ ಪೊಲೀಸ್‌ ಅಧಿಕಾರಿ

(Karnataka weather report, heavy rain in next 4 days : department of forecasts)

Comments are closed.