ಭಾನುವಾರ, ಏಪ್ರಿಲ್ 27, 2025
HomekarnatakaKarnataka weather Report : ಮುಂದಿನ 3 ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

Karnataka weather Report : ಮುಂದಿನ 3 ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

- Advertisement -

ಬೆಂಗಳೂರು : ಹವಾಮಾನ ಇಲಾಖೆಯಿಂದ ನಿನ್ನೆ ಸಂಜೆ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಅವಧಿಯಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಮುನ್ಸೂಚನೆಯನ್ನು (Karnataka weather Report ) ನೀಡಿದೆ. ಅದರಂತೆ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿನ ಕೆಲವು ಸ್ಥಳಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಸಾಧಾರಣ ಗುಡುಗು ಸಹಿತ ಮಳೆಯಾಗಿದೆ. ಅಷ್ಟೇ ಅಲ್ಲದೇ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಇಂದು ಕೂಡ ವರುಣನ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ರಾಜ್ಯದ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವುದನ್ನು ಈ ಕೆಳಗೆ ತಿಳಸಿಲಾಗಿದೆ.

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಬೆಳಿಗ್ಗೆಯಿಂದ ಸಂಜೆವರೆಗೂ ಬಿಸಿಲಿನಿಂದ ಕೂಡಿದ್ದು, ಸಂಜೆ ವೇಳೆಗೆ ಮಳೆರಾಯನ ಆರ್ಭಟ ಜೋರಾಗಿತ್ತು. ಹೀಗಾಗಿ ಸಿಲಿಕಾನ್‌ ಸಿಟಿಯ ಹೆಚ್ಚಿನ ಕಡೆಯಲ್ಲಿ ಜನರ ಜೀವನ ನೀರಿನಿಂದ ಆವೃತಗೊಂಡಿತ್ತು. ಅದರಲ್ಲಿ ಎಷ್ಟು ಜನರ ಸಾವು ನೋವುಗಳು ಸಂಭವಿಸಿದೆ. ಅದರಲ್ಲೂ ವಾಹನ ಸವಾರರು ಹೊಳೆಯಂತಹ ರಸ್ತೆಗಳಲ್ಲಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಇಂದು ಕೂಡ ಬೆಂಗಳೂರಿನಲ್ಲಿ ವರುಣನ ಆರ್ಭಟ ಮುಂದುವರೆಯಲಿದ್ದು, ಈ ಹಿನ್ನೆಲೆಯಲ್ಲಿ ಜನರಿಗೆ ಎಚ್ಚರಿಕೆ ಸಂದೇಶಗಳನ್ನು ಕೂಡ ರವಾನೆ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜೆಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಮಾಹಿತಿ ನೀಡಿದೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಮೇ 29 ರಿಂದ ಶಾಲೆಗಳು ಪುನಾರಂಭ : ಹೊಸ ಮಾರ್ಗಸೂಚಿ ಪ್ರಕಟ

ಇದನ್ನೂ ಓದಿ : ಮುಂದಿನ 3 ಗಂಟೆಯಲ್ಲಿ ಬಿರುಗಾಳಿ ಮಳೆ : ಉಡುಪಿ, ಚಿಕ್ಕಮಗಳೂರು, ದ.ಕ., ಶಿವಮೊಗ್ಗ ಜಿಲ್ಲೆಗೆ ಎಚ್ಚರಿಕೆ

ಅದರಲ್ಲೂ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ರಾಮನಗರ, ಮಂಡ್ಯ, ಮೈಸೂರು, ಬೆಂಗಲೂರಿನಲ್ಲಿ ಮಳೆರಾಯನ ಅಬ್ಬರಿಸಲಿದ್ದಾನೆ. ಇನ್ನು ಕರಾವಳಿ ಜಿಲ್ಲೆಗಳಾದ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆಸಲಿದ್ದಾನೆ. ಮತ್ತೊಂದೆಡೆ ಗಾಳಿಯ ವೇಗ ಕೂಡ ಹೆಚ್ಚಾಗಿದ್ದು, ಗಂಟೆಗೆ 40-50 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಸಂದೇಶ ರವಾನಿಸಿದೆ.

ಈ ಭಾರೀ ಜೂನ್‌ ಮೊದಲ ವಾರದಲ್ಲಿ ಮಾನ್ಸೂನ್‌ ಮಳೆ :

ವರ್ಷಂಪ್ರತಿ ಮುಂಗಾರು ಮಳೆ ಜೂನ್‌ 1 ರಂದು ಕೇರಳ ಪ್ರವೇಶಿಸುತ್ತದೆ. ಅಲ್ಲಿ ಮಳೆ ಸುರಿದ ಮೂರು ಅಥವಾ ನಾಲ್ಕು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯಾಗುತ್ತದೆ. ಈ ಸಲ ಮಳೆ ವಿಳಂಬದಿಂದ ರೈತರಿಗೆ ತೊಡಕಾಗಬಹುದು. ಇನ್ನೇನು ಮುಂದಿನ ವರ್ಷದ ಭತ್ತದ ಬೆಳೆಗೆ ಬಿತ್ತನೆ ಕೆಲಸ ಶುರು ಮಾಡಲಿದ್ದು, ವರುಣನ ಆಗಮನಕ್ಕಾಗಿ ಮುಗಿಲು ನೋಡುತ್ತಿದ್ದಾರೆ. ಇನ್ನುಳಿದಂತೆ ರೈತರು ಅದಕ್ಕಾಗಿಯೇ ಸಕಲ ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದಾರೆ.

ಮಾನ್ಸೂನ್‌ ಮಾರುತದ ವಿಳಂಬವಾಗುವ ನಿರೀಕ್ಷೆ ಇರುವುದರಿಂದ ಜೂನ್‌ 4ರಂದು ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ನೈಋತ್ಯ ಮುಂಗಾರು ಸಾಮಾನ್ಯವಾಗಿ ಜೂನ್‌ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆ ಕೂಡ ಇರುತ್ತದೆ. ಅದರಲ್ಲೂ ನಮ್ಮ ದೇಶ ಕೃಷಿ ಆಧರಿತವಾಗಿದ್ದು, ಭಾರತದ ಆರ್ಥಿಕತೆಯು ಮಳೆಯನ್ನು ಅವಲಂಬಿಸಿದೆ. ದೇಶದ ಒಟ್ಟಾರೆ ವಾರ್ಷಿಕ ಮಳೆ ಪ್ರಮಾಣದಲ್ಲಿ ಶೇ.75ರಷ್ಟು ಮುಂಗಾರು ಮಳೆ ಒಳಗೊಂಡಿದೆ. ಹೀಗಾಗಿ ಈ ಮಳೆಯೇ ಸಕಾಲದಲ್ಲಿ ಬರದೇ ಇದ್ದಲ್ಲಿ ಕೃಷಿ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾದ್ಯತೆ ಇದೆ ಎಂದು ಮೂಲಗಳು ವರದಿ ಮಾಡಿದೆ.

Karnataka Weather Report: Heavy rain is likely in the state for the next 3 days

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular