Karnataka Weather Report : : ಅರಬ್ಬಿ ಸಮುದ್ರದಲ್ಲಿ ಉಂಟಾದ ಹವಾಮಾನ ವೈಪರುತ್ಯದಿಂದಾಗಿ ಕರ್ನಾಟಕದಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಮಳೆ (Heavy Rain) ಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆಯನ್ನು ನೀಡಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉಷ್ಣಾಂಶ ಕುಸಿದಿದ್ದು, ಮೋಡ ಕವಿದ ವಾತಾವರಣವಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ವಿಪರೀತ ಚಳಿ ಇರುವುದು ಸರ್ವೇ ಸಾಮಾನ್ಯ. ಆದರೆ ಹುಬ್ಬಳ್ಳಿ, ಹಾವೇರಿ ಸೇರಿದಂತೆ ಕರ್ನಾಟಕ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಚಳಿಗಾಲದ ನಡುವಲ್ಲೂ ಮಳೆ ಸುರಿಯುತ್ತಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಪ್ರಮಾನದಲ್ಲಿ ಮಳೆ ಸುರಿಯಲಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಜನವರಿ 10ರವರೆಗೆ 2 ದಿನಗಳ ಕಾಲ 30 ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ವಿಜಯನಗರ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ : ಶಕ್ತಿ ಯೋಜನೆ ವಿಸ್ತರಣೆ, ಖಾಸಗಿ ಬಸ್‌ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣ
ಉತ್ತರ ಒಳನಾಡಿನ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ಇದ್ದು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ಸಾಮಾನ್ಯವಾಗಿ ಡಿಸೆಂಬರ್- ಜನವರಿ ತಿಂಗಳಲ್ಲಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅತ್ಯಂತ ಚಳಿಯ ವಾತಾವರಣ ಇರುವುದು ಸಾಮಾನ್ಯ.
ವಿಜಯಪುರದಲ್ಲಿ 10 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕುಸಿದಿದ್ದು, ಕೊರೆಯುವ ಚಳಿಯ ಅನುಭವವಾಗಿದೆ. ಇದೀಗ ಚಳಿಯ ನಡುವೆಯೇ ಈ ಭಾಗದಲ್ಲಿ ಆಗಾಗ ಮಳೆಯಾಗುತ್ತಿದೆ. ಗರಿಷ್ಠ-ಕನಿಷ್ಠ ತಾಪಮಾನದ ಮಾಹಿತಿ ಶಿರಾಲಿ, ಕುಟುಟ, ಹಾವೇರಿ, ಹುಬ್ಬಳ್ಳಿಯಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆಯಾಗಿದೆ.
ಇದನ್ನೂ ಓದಿ : ಆಯುಷ್ಮಾನ್ ಭಾರತ್ ಕಾರ್ಡ್ 2024 : ನಿಮ್ಮ ಮೊಬೈಲ್‌ನಿಂದಲೇ ಡೌನ್‌ಲೋಡ್ ಮಾಡಿ

ಇನ್ನು ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ ಇದ್ದರೂ ಕೂಡ ತಾಪಮಾನ ಗರಿಷ್ಠ ಮಟ್ಟಕ್ಕೆ ಏರಿಕೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರವಾರದಲ್ಲಿ ರಾಜ್ಯದ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ : ಈ ಕೆಲಸ ಮಾಡದಿದ್ರೆ ಸಿಗಲ್ಲ 5ನೇ ಕಂತಿನ ಹಣ
ಪಣಂಬೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್, ಹೊನ್ನಾವರದಲ್ಲಿ 32 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗದಲ್ಲಿ 30 ಡಿಗ್ರಿ ಸೆಲ್ಸಿಯಸ್. ಇನ್ನೂ ವಿಜಯಪುರದಲ್ಲಿ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
Karnataka Weather Report : Heavy rainfall Alert in these districts of Karnataka till January 10: IMD warning