Karnataka Weather Report : ಕರ್ನಾಟಕದಲ್ಲಿ ಇನ್ನೂ ಎರಡು ದಿನ ಭಾರಿ ಮಳೆ

ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಕರಾವಳಿ, ಮಲೆನಾಡು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

Heavy rainfall and thunderstorm Alert for next 4 days in These states

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಕರಾವಳಿ ಭಾಗಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಪ್ರಮಾಣದಲ್ಲಿ ಮಳೆ ಮುಂದುವರಿಯಲಿದೆ. ಅಲ್ಲದೇ ಗುಡು ಸಹಿತ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

Yellow Alert announces five days of heavy rains in Bangalore and Coastal Districts
ಸಾಂದರ್ಭಿಕ ಚಿತ್ರ

ಇನ್ನು ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆಯನ್ನು ಮಾಡಿದೆ. ಅಲ್ಲದೇ ಜನರು ಎಚ್ಚರಿಕೆಯಿಂದ ಇರುವಂತೆಯೂ ಸೂಚನೆಯನ್ನು ನೀಡಿದೆ.

Heavy rains in Andhra Pradesh and Odisha are likely due to the impact of the Gulab storm. Orange Alert has been announced in many districts of Karnataka

ಕರ್ನಾಟಕದಲ್ಲಿ ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿದಿದೆ. ಅದ್ರಲ್ಲೂ ಅಕ್ಟೋಬರ್‌ ತಿಂಗಳಿನಲ್ಲಿ ಸರಾಸರಿ 154.4 ಮಳೆ ಸುರಿದಿದೆ. ಇಷ್ಟು ವರ್ಷಗಳಿಗೆ ಹೋಲಿಸಿದ್ರೆ ಇದು ದಾಖಲೆಯ ಮಳೆಯಾಗಿದೆ. ಕೇರಳ, ತಮಿಳುನಾಡು ರಾಜ್ಯಗಳಲ್ಲಿಯೂ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇನ್ನೆರಡು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆಯಿರೋ ಹಿನ್ನೆಲೆಯಲ್ಲಿ ಕರ್ನಾಟಕದ ಮೇಲೆಯೂ ಪರಿಣಾಮವನ್ನುಂಟು ಮಾಡಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರ

ಇದನ್ನೂ ಓದಿ : ನಮ್ಮ ಮೆಟ್ರೋಗೆ ದಶಕದ ಸಂಭ್ರಮ : 60 ಕೋಟಿ ಜನರ ಪ್ರಯಾಣ, 1286.6 ಕೋಟಿ ರೂ. ಆದಾಯ

Karnataka weather Report next two days heavy rain yellow Alert Declare

Comments are closed.